ತುಮಕೂರಿನ ಮಾಜಿ ಶಾಸಕ ಬಿ ಸುರೇಶ್ ಗೌಡ 
ರಾಜಕೀಯ

ರಾಜ್ಯ ಬಿಜೆಪಿಯಲ್ಲಿ ಆಗಸ್ಟ್ 15ರೊಳಗೆ ಮಹತ್ವದ ಬದಲಾವಣೆ? ತುಮಕೂರಿನ ಮಾಜಿ ಶಾಸಕ ಏನಂತಾರೆ?

ರಾಜ್ಯ ಬಿಜೆಪಿಯಲ್ಲಿ ಮತ್ತೆ ಬದಲಾವಣೆಯ ಮಾತುಗಳು ಕೇಳಿಬರುತ್ತಿವೆ. 2023ರ ವಿಧಾನಸಭೆ ಚುನಾವಣೆಗೆ ಇನ್ನು ಬಾಕಿ ಉಳಿದಿರುವುದು ಕೇವಲ 8 ತಿಂಗಳು. ಈ ಹೊತ್ತಿನಲ್ಲಿ ಪಕ್ಷದಲ್ಲಿ ಹೈಕಮಾಂಡ್ ಏನೇ ಬದಲಾವಣೆ ಮಾಡುವುದಿದ್ದರೂ ಅಳೆದು ತೂಕಿ ಮಾಡಬೇಕು.

ತುಮಕೂರು: ರಾಜ್ಯ ಬಿಜೆಪಿಯಲ್ಲಿ ಮತ್ತೆ ಬದಲಾವಣೆಯ ಮಾತುಗಳು ಕೇಳಿಬರುತ್ತಿವೆ. 2023ರ ವಿಧಾನಸಭೆ ಚುನಾವಣೆಗೆ ಇನ್ನು ಬಾಕಿ ಉಳಿದಿರುವುದು ಕೇವಲ 8 ತಿಂಗಳು. ಈ ಹೊತ್ತಿನಲ್ಲಿ ಪಕ್ಷದಲ್ಲಿ ಹೈಕಮಾಂಡ್ ಏನೇ ಬದಲಾವಣೆ ಮಾಡುವುದಿದ್ದರೂ ಅಳೆದು ತೂಕಿ ಮಾಡಬೇಕು.

ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದಲ್ಲಿ ಬದಲಾವಣೆ, ಮುಖ್ಯಮಂತ್ರಿ ಬೊಮ್ಮಾಯಿ ಸ್ಥಾನಕ್ಕೆ ಬದಲಾವಣೆ ಹೀಗೆ ಅನೇಕ ಊಹಾಪೋಹಗಳು ಕೇಳಿಬರುತ್ತಿವೆ. ಮುಖ್ಯಮಂತ್ರಿ ಬದಲಾವಣೆ ಆಗಬಹುದು ಎಂಬ ಊಹಾಪೋಹಗಳು ಹಬ್ಬಿರುವ ಬೆನ್ನಲ್ಲೇ ತುಮಕೂರಿನ ಮಾಜಿ ಶಾಸಕ ಬಿ. ಸುರೇಶ್ ಗೌಡ ಆಗಸ್ಟ್ 15ರ ಒಳಗಾಗಿ ಎಲ್ಲವೂ ಆಗಬಹುದು ಎಂಬ ಅಚ್ಚರಿಯ ಹೇಳಿಕೆ ನೀಡಿದ್ದಾರೆ. 

ಈ ಬಗ್ಗೆ ನಿನ್ನೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈಗಿರುವ ಮುಖ್ಯಮಂತ್ರಿ  ಬೊಮ್ಮಾಯಿಯವರು ಒಳ್ಳೆಯ ಕೆಲಸವನ್ನು ಮಾಡುತ್ತಿದ್ದಾರೆ. ಅವರ 1 ವರ್ಷದ ಅವಧಿಯಲ್ಲಿ ಕೆರೆ ಕಟ್ಟೆಗಳು ತುಂಬಿವೆ. ಆದರೆ ಪಕ್ಷ ಏನು ನಿರ್ಧಾರ ತೆಗೆದುಕೊಳ್ಳುತ್ತದೆಯೋ ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.

ಶೋಭಾ ಕರಂದ್ಲಾಜೆ ಮುಖ್ಯಮಂತ್ರಿ ಆಗುತ್ತಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಆ ಬಗ್ಗೆ ನನಗೆ ಗೊತ್ತಿಲ್ಲ. ನಾನು ಅವರನ್ನು ಭೇಟಿಯಾಗಿದ್ದೆ. ಅವರು ಅದರ ಬಗ್ಗೆ ಮಾತನಾಡಿಲ್ಲ. ಅದು ಮಾಧ್ಯಮದ ಸೃಷ್ಟಿ. ಅವರು ಕೇಂದ್ರ ಸಚಿವೆಯಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರು ಮುಖ್ಯಮಂತ್ರಿ ಆದರೆ ಸಂತೋಷ ಎಂದು ತಿಳಿಸಿದರು. 

ಬಿಜೆಪಿಯಲ್ಲಿ ವಿಧಾನಸಭಾ ಚುನಾವಣೆಗೆ 6-7 ತಿಂಗಳುಗಳು ಇರಬೇಕಾದರೆಯೇ ಮುಖ್ಯಮಂತ್ರಿ ಬದಲಾವಣೆ ಮಾಡಿದ ಉದಾಹರಣೆ ಇದೆ. ಎಂಟು-10 ತಿಂಗಳು ಇರುವಾಗಲೂ ಬದಲಾವಣೆ ಮಾಡಿದ್ದಾರೆ. ಅದು ಕೇಂದ್ರಕ್ಕೆ ಬಿಟ್ಟ ವಿಷಯ. ಬದಲಾವಣೆ ಆದರೆ ಆಗಸ್ಟ್ 15ರ ಒಳಗೆ ಎಲ್ಲವೂ ಆಗಬಹುದು ಎನ್ನುವ ಅಭಿಪ್ರಾಯ ಇದೆ ಎಂದರು. 

ಬಿಜೆಪಿ 2023ರಲ್ಲಿ ರಾಜ್ಯದಲ್ಲಿ ಮತ್ತು 2024ರಲ್ಲಿ ಕೇಂದ್ರದಲ್ಲಿ ಮೋದಿಯವರು ಮತ್ತೆ ಪ್ರಧಾನಿಯಾಗಲು ಪುನಃ ಅಧಿಕಾರ ಹಿಡಿಯುವ ಉದ್ದೇಶದಿಂದ ಪಕ್ಷದಲ್ಲಿ ಕೆಲವು ಬದಲಾವಣೆಗಳು ಆಗಬಹುದು. ಪಾರ್ಟಿಯವರು ಯಾವ ಸಂದರ್ಭದಲ್ಲಿಯೂ ಏನು ಬೇಕಾದರೂ ನಿರ್ಧಾರ ತೆಗೆದುಕೊಳ್ಳಬಹುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT