ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 
ರಾಜಕೀಯ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಊಹಾಪೋಹ: ಮುಖ್ಯಮಂತ್ರಿ ಬೊಮ್ಮಾಯಿಗೆ ಬಿಜೆಪಿ ಹೈಕಮಾಂಡ್ ಬೆಂಬಲ

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಊಹಾಪೋಹ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬಲವಾಗಿ ಬೆಂಬಲಿಸುವುದಾಗಿ ಬಿಜೆಪಿ ಹೈಕಮಾಂಡ್ ಹೇಳಿದೆ. ಇಂತಹ ಊಹಾಪೋಹ ಹರಡುವವರ ಬಗ್ಗೆಯೂ ವರದಿಯನ್ನು ಕೇಳಿದೆ.

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಊಹಾಪೋಹ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬಲವಾಗಿ ಬೆಂಬಲಿಸುವುದಾಗಿ ಬಿಜೆಪಿ ಹೈಕಮಾಂಡ್ ಹೇಳಿದೆ. ಇಂತಹ ಊಹಾಪೋಹ ಹರಡುವವರ ಬಗ್ಗೆಯೂ
ವರದಿಯನ್ನು ಕೇಳಿದೆ.

ಬಿಜೆಪಿ ಕೇಂದ್ರಿಯ ನಾಯಕರು ಮಂಗಳವಾರ ರಾತ್ರಿ ಬೊಮ್ಮಾಯಿ ಅವರಿಗೆ ಕರೆ ಮಾಡಿದ್ದು, ಮುಖ್ಯಮಂತ್ರಿ ಬದಲಾವಣೆ ಊಹಾಪೋಹ ಕುರಿತಂತೆ ಮಾತನಾಡಿದ್ದಾರೆ. 2023ರ ವಿಧಾನಸಭಾ ಚುನಾವಣೆಯನ್ನು ತಮ್ಮ ನಾಯಕತ್ವದಲ್ಲಿಯೇ ಎದುರಿಸಲಿದ್ದು, ನಾಯಕತ್ವ ಬದಲಾವಣೆ ಇಲ್ಲ ಎಂದು ಅವರು ಭರವಸೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ. ಇಂತಹ ಊಹಾಪೋಹ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆಯೂ ಸಲಹೆ ನೀಡಿದ್ದಾರೆ ಎನ್ನಲಾಗಿದೆ. 

ಮಾಜಿ ಶಾಸಕ ಸುರೇಶ್ ಗೌಡ ಸೇರಿದಂತೆ ಕೆಲವು ಬಿಜೆಪಿ ಮುಖಂಡರ ಹೇಳಿಕೆಗಳು ಮತ್ತು ಗೃಹ ಸಚಿವ ಅಮಿತ್ ಶಾ ಅವರ ಇತ್ತೀಚಿನ ಕರ್ನಾಟಕ ಭೇಟಿಯ ನಂತರ ಬಿಜೆಪಿ ಪಾಳಯದಲ್ಲಿನ ಮೌನದ ಬಗ್ಗೆ ಕಾಂಗ್ರೆಸ್ ರಾಜ್ಯ ಘಟಕದ ಸರಣಿ ಟ್ವೀಟ್‌ಗಳು ನಾಯಕತ್ವ ಬದಲಾವಣೆಯ ಊಹಾಪೋಹಗಳಿಗೆ ಕಾರಣವಾಗಿವೆ. ಅನೇಕ ಮಂತ್ರಿಗಳು ಮತ್ತು ಹಿರಿಯ ಬಿಜೆಪಿ ನಾಯಕರು ಇಂತಹ ವದಂತಿಗಳನ್ನು ತಳ್ಳಿ ಹಾಕಿದರು. ಕಾಂಗ್ರೆಸ್ ಅವುಗಳನ್ನು ಹರಡುತ್ತಿದೆ ಎಂದು ಆರೋಪಿಸಿದರು.

ಆಡಳಿತದತ್ತ ಗಮನ ಹರಿಸಿ, ಸರ್ಕಾರದ ಕಾರ್ಯಕ್ರಮಗಳು ಜನರಿಗೆ ತಲುಪುವಂತೆ ನೋಡಿಕೊಳ್ಳಬೇಕು ಮತ್ತು ಪಕ್ಷವನ್ನು ಬಲಪಡಿಸಲು ರಾಜ್ಯ ಪ್ರವಾಸವನ್ನು ಪ್ರಾರಂಭಿಸಬೇಕು ಎಂದು ಬಿಜೆಪಿ ಕೇಂದ್ರ ನಾಯಕರು ಸಿಎಂಗೆ ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕೋವಿಡ್-19 ದೃಢಪಟ್ಟ ನಂತರ ಕಳೆದ ಐದು ದಿನಗಳಿಂದ ಮನೆಯಲ್ಲೇ ಪ್ರತ್ಯೇಕವಾಗಿರುವ ಸಿಎಂ, ರಾಜ್ಯ ಪ್ರವಾಸ ಕೈಗೊಳ್ಳಲು ಸಿದ್ಧತೆ ನಡೆಸಿದ್ದಾರೆ. ಮೊದಲ ಸುತ್ತಿನಲ್ಲಿ ಅವರು 60 ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಸರ್ಕಾರಿ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ನಡೆಸುವ ಸಾಧ್ಯತೆ ಇದೆ. ಗುರುವಾರ ಸಿಎಂ ಮಂಡ್ಯಕ್ಕೆ ಭೇಟಿ ನೀಡಲಿದ್ದಾರೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕೂಡ ಯಾವುದೇ ನಾಯಕತ್ವ ಬದಲಾವಣೆಯನ್ನು ತಳ್ಳಿ ಹಾಕಿದ್ದಾರೆ. ಮತ್ತು ಅಂತಹ ಊಹಾಪೋಹಗಳನ್ನು ಹಬ್ಬಿಸುವವರಿಗೆ ಅದನ್ನು ತಡೆಯುವಂತೆ ಮನವಿ ಮಾಡಿದರು. ಬೊಮ್ಮಾಯಿ ಸಿಎಂ ಆಗಿ ಮುಂದುವರಿಯುತ್ತಾರೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದರು.

ನಳಿನ್‌ಕುಮಾರ್‌ ಕಟೀಲ್‌ ಅವರ ಅವಧಿ ಮುಗಿದ ಬಳಿಕ ಪಕ್ಷದ ಮುಂದಿನ ರಾಜ್ಯಾಧ್ಯಕ್ಷರನ್ನು ಪಕ್ಷದ ಹೈಕಮಾಂಡ್‌ ನಿರ್ಧರಿಸಲಿದೆ ಎಂದು ಯಡಿಯೂರಪ್ಪ ಹೇಳಿದರು. ನಾನು ಮತ್ತು ಇತರ ನಾಯಕರು ರಾಜ್ಯದಲ್ಲಿ ಪ್ರವಾಸ ಮಾಡಲಿದ್ದು, 2023 ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಯಡಿಯೂರಪ್ಪ ಹೇಳಿದರು.

ಇತ್ತೀಚೆಗಷ್ಟೇ ಬೆಂಗಳೂರಿಗೆ ಭೇಟಿ ನೀಡಿದ್ದ ಅಮಿತ್ ಶಾ ಅವರೊಂದಿಗೆ ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿರುವುದಾಗಿ ಯಡಿಯೂರಪ್ಪ ತಿಳಿಸಿದರು. ನಗರದ ತಮ್ಮ ನಿವಾಸಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭೇಟಿ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಎಲ್ಲಾ ನಾಯಕರು ಬರುತ್ತಿದ್ದಾರೆ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

Monalisa Love jihad case: 'ವನವಾಸ ಅಂತ್ಯ.. ಪಿತೂರಿ ನಡೆಸಿದ ಜಿಹಾದಿ ಜೈಲಿಗೆ'; ನಿರ್ದೇಶಕ Sanoj Mishra ಪೋಸ್ಟ್ ವೈರಲ್

'ಹಸಿರು ಲ್ಯಾಂಬೊರ್ಗಿನಿ ಕಾರಲ್ಲಿ ಹೋಗಿ, ರಸ್ತೆ ಕಸ ಗುಡಿಸಿ ಬನ್ನಿ': ಸಂಚಾರ ನಿಯಮ ಉಲ್ಲಂಘಿಸಿ ದರ್ಪ ತೋರಿದ ಚಾಲಕನಿಗೆ ಹೈಕೋರ್ಟ್‌ ಶಿಕ್ಷೆ!

ಉಪಚುನಾವಣೆ ಗೆಲ್ಲುವ ಉಮೇದು: ಪ್ರಚಾರದಲ್ಲಿ ನಿರತರಾದ ಸಿಎಂ -ಡಿಸಿಎಂ; ನಿಯಂತ್ರಣ ಕಳೆದುಕೊಂಡ ಆಡಳಿತ ಯಂತ್ರ!

SCROLL FOR NEXT