ಎಸ್.ಟಿ ಸೋಮಶೇಖರ್ 
ರಾಜಕೀಯ

ಸಿಎಂ ಬದಲಾವಣೆ ಕಾಂಗ್ರೆಸ್ ಕೃಪಾಪೋಷಿತ ನಾಟಕ ಮಂಡಳಿ ಸೃಷ್ಟಿಸಿರುವ ದೊಡ್ಡ ಸುಳ್ಳು: ಎಸ್ ಟಿ ಸೋಮಶೇಖರ್

ಮುಖ್ಯಮಂತ್ರಿ ಬದಲಾವಣೆ ಕಾಂಗ್ರೆಸ್ ಸೃಷ್ಟಿಸಿರುವ ಊಹಾಪೋಹ ಅಷ್ಟೇ. ಕಾಂಗ್ರೆಸ್ ಕೃಪಾ ಪೋಷಿತನಾಟಕ ಮಂಡಳಿ ಸೃಷ್ಟಿಸಿರುವ ದೊಡ್ಡ ಸುಳ್ಳು ಇದು ಎಂದು ಸಹಕಾರ ಸಚಿವ ಎಸ್‌ಟಿ ಸೋಮಶೇಖರ್ ಹೇಳಿದರು

ಮೈಸೂರು:  ಮುಖ್ಯಮಂತ್ರಿ ಬದಲಾವಣೆ ಕಾಂಗ್ರೆಸ್ ಸೃಷ್ಟಿಸಿರುವ ಊಹಾಪೋಹ ಅಷ್ಟೇ. ಕಾಂಗ್ರೆಸ್ ಕೃಪಾ ಪೋಷಿತನಾಟಕ ಮಂಡಳಿ ಸೃಷ್ಟಿಸಿರುವ ದೊಡ್ಡ ಸುಳ್ಳು ಇದು ಎಂದು ಸಹಕಾರ ಸಚಿವ ಎಸ್‌ಟಿ ಸೋಮಶೇಖರ್ ಹೇಳಿದರು.

ಮೈಸೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಒಳ ಬೇಗುದಿ ಆರಂಭವಾಗಿದೆ. ಶಮನ ಮಾಡಿಕೊಳ್ಳಲು ಬಿಜೆಪಿ ಮೇಲೆ ಬಾಣ ಪ್ರಯೋಗಿಸಿದ್ದಾರೆ. ಅವರು ಇವರ ಮೇಲೆ, ಇವರು ಅವರ ಮೇಲೆ ಆಪಾದನೆ ಮಾಡ್ತಿದ್ದಾರೆ. ಆಪಾದನೆ ಮುಚ್ಚಿಕೊಳ್ಳಲು ಬಿಜೆಪಿ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಅವರಿಗೆ ಡಿ.ಕೆ.ಶಿವಕುಮಾರ್ ಟೋಪಿ ಹಾಕುತ್ತಿದ್ದಾರೆ. ಡಿ.ಕೆ.ಶಿವಕುಮಾರ್‌ ಅವರಿಗೆ ಸಿದ್ದರಾಮಯ್ಯ ಟೋಪಿ ಹಾಕುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ಸಿದ್ದರಾಮೋತ್ಸವದ ಕಿಡಿ ಈಗ ಬೆಂಕಿಯಾಗಿ ಹೊತ್ತಿ ಉರಿಯುತ್ತಿದೆ. ಈ ವಿಚಾರವನ್ನು ಡೈವರ್ಟ್ ಮಾಡಲು ಸಿಎಂ ಬದಲಾವಣೆ ವದಂತಿ ಸೃಷ್ಟಿ ಮಾಡುತ್ತಿದ್ದಾರೆ ಎಂದು ಹೇಳಿದರು.

ಬಿಜೆಪಿಯಲ್ಲಿ ಮೂರನೇ ಸಿಎಂ ಪ್ರಸ್ತಾಪವೇ ಇಲ್ಲ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ,  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪಕ್ಷದ ಪ್ರತಿಯೊಬ್ಬ ಪ್ರಮುಖ ನಾಯಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ, ಯಾವುದೇ ಕಾರಣಕ್ಕೂ ಬೊಮ್ಮಾಯಿ ಅವರ ಬದಲಾವಣೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು

ಸಿದ್ದರಾಮೋತ್ಸವದಂತಹ 10 ಕಾರ್ಯಕ್ರಮ ಮಾಡುವ ಶಕ್ತಿ ಬಿಜೆಪಿಗೆ ಇದೆ. ಸಿದ್ದರಾಮೋತ್ಸವ ನೋಡಿ ನಾವು ಏಕೆ ಭಯ ಬೀಳಬೇಕು. ಸಿದ್ದರಾಮೋತ್ಸವದಲ್ಲಿ ಎಷ್ಟು ಜನ ಸೇರಿದ್ದರು ಎಂದು ಕಾಂಗ್ರೆಸ್ ನಾಯಕರು ಸತ್ಯ ಹೇಳಲಿ. ಎಷ್ಟು ಖುರ್ಚಿ ಹಾಕಿದ್ದರು ಎಂಬ ಲೆಕ್ಕ ನಮ್ಮ ಬಳಿ ಇದೆ. ಕಾಂಗ್ರೆಸ್ ನಾಯಕರಿಗೆ ತಾಕತ್ ಇದ್ದರೆ ಆ ಸಂಖ್ಯೆಯ ಬಗ್ಗೆ ಸತ್ಯ ಹೇಳಲಿ ಎಂದು ಸವಾಲು ಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್