ಬಿಜೆಪಿ-ಕಾಂಗ್ರೆಸ್ 
ರಾಜಕೀಯ

ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ರಂಗ್-ಬಿರಂಗಿ ಬಗ್ಗೆ ದಂತಕತೆಗಳು ಮಾತ್ರವಲ್ಲ, ಗುಪ್ತ ಸಿಡಿಗಳೂ ಇವೆ!

‘ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಉದ್ಯೋಗ ಪಡೆಯಬೇಕು ಎಂದರೆ ಯುವತಿಯರು ಮಂಚ ಹತ್ತಬೇಕಾಗಿದೆ’ ಎಂದಿದ್ದ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ. ಕಾಂಗ್ರೆಸ್ ಮಹಿಳಾ ವಿರೋಧಿ ಎಂದೂ ದೂರಿದೆ.

ಬೆಂಗಳೂರು: ‘ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಉದ್ಯೋಗ ಪಡೆಯಬೇಕು ಎಂದರೆ ಯುವತಿಯರು ಮಂಚ ಹತ್ತಬೇಕಾಗಿದೆ’ ಎಂದಿದ್ದ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ. ಕಾಂಗ್ರೆಸ್ ಮಹಿಳಾ ವಿರೋಧಿ ಎಂದೂ ದೂರಿದೆ.

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ರಂಗ್-ಬಿರಂಗಿ ಬಗ್ಗೆ ಸಾಕಷ್ಟು ದಂತಕತೆಗಳು ಮಾತ್ರವಲ್ಲ, ಗುಪ್ತಸಿಡಿಗಳೂ ಇವೆ. ಜೂನಿಯರ್ ಖರ್ಗೆ ಅವರೇ, ಸಭ್ಯಸ್ಥರ ಮುಖವಾಡ ಹಾಕಿ ಸಮಾಜದ ಕಣ್ಣಿಗೆ ಗಣ್ಯರೆಂದು ಬಿಂಬಿಸಿಕೊಂಡ ಕಾಂಗ್ರೆಸ್ ಗೋಮುಖ ವ್ಯಾಘ್ರಗಳ ಪಟ್ಟಿ ನೀಡಿದರೆ ಸಮರ್ಥನೆ ಮಾಡಿಕೊಳ್ಳುವುದಕ್ಕೂ ನಿಮಗೆ ಕಷ್ಟವಾಗಬಹುದು ಎಂದಿದೆ.

ಸಾವಿರಾರು ಮಹಿಳೆಯರು, ಪ್ರತಿಭಾವಂತರು, ವಿದ್ಯಾವಂತರು ಕಷ್ಟಪಟ್ಟು ಅನೇಕ ಪರೀಕ್ಷೆಗಳನ್ನು ಉತ್ತೀರ್ಣರಾಗಿ ಕೆಲಸ ಗಿಟ್ಟಿಸಿಕೊಳ್ಳುತ್ತಾರೆ. ಪ್ರಿಯಾಂಕ ಖರ್ಗೆ ಅವರೇ, ನಿಮ್ಮ ಈ ಮಾತುಗಳು ಅಷ್ಟು ಜನ  ಮಹಿಳೆಯರಿಗೆ ಅವಮಾನ ಮಾಡಿದಂತಲ್ಲವೇ? ಕೂಡಲೇ ಕ್ಷಮೆಯಾಚಿಸಿ ಎಂದು ಒತ್ತಾಯಿಸಿದೆ.

ಪ್ರಿಯಾಂಕ್ ಖರ್ಗೆ ಅವರೇ, ಸಹಾಯ ಮಾಡುವುದಾಗಿ ನಂಬಿಸಿ ಅಸಹಾಯಕ ಹೆಣ್ಣೊಬ್ಬಳ‌ ಮೇಲೆ ಮೇಟಿ ಲೈಂಗಿಕ ದೌರ್ಜನ್ಯ ಎಸಗಿದ್ದು ನಿಮ್ಮ ಕಾಲದಲ್ಲೇ ಅಲ್ಲವೇ? ಯುಪಿಎ ಸರ್ಕಾರದಲ್ಲಿ ಪ್ರಭಾವಿಗಳಾಗಿದ್ದ ಕಾಂಗ್ರೆಸ್ ‌ನಾಯಕರು ಮಹಿಳೆಯರ ಮೇಲೆ ನಡೆಸಿದ 'ದಿಗ್ವಿಜಯ' 'ಅಭಿಷೇಕ'ಗಳ ಸಿಡಿ ನಿಮ್ಮ ಮಂಚದ ಸರ್ಕಾರದ ಫಲವಲ್ಲವೇ? ಎಂದು ಪ್ರಶ್ನಿಸಿದೆ.

ಮುಂದುವರಿದು, ಲಂಚ- ಮಂಚದ ಸರ್ಕಾರ ಎಂದು ಆರೋಪ ಮಾಡಿದ್ದ ಮಾಜಿ ಸಚಿವ ಪ್ರಿಯಾಂಕ ಖರ್ಗೆಯವರಿಗೆ 'ತಮ್ಮ ಮನೆಯ ಹೆಂಚು ತೂತು' ಎಂಬುದೇ ಗೊತ್ತಿಲ್ಲ. ಇವರು‌ ಆರೋಪ ಮಾಡಿದ ಬೆನ್ನಲ್ಲೇ, ಜಯಮಾಲಾ ಅವರ ಲಂಚದ ಹಗರಣ ಬಯಲಾಗಿದೆ. ಹಾಗಾದರೆ ಲಂಚದ ಸರ್ಕಾರ ಯಾರದ್ದು? ಎಂದು ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಕಲಬುರಗಿಯ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಪ್ರಿಯಾಂಕ್ ಖರ್ಗೆ ಅವರು, ‘ಸರ್ಕಾರ ಹುದ್ದೆಗಳನ್ನು ಮಾರಾಟ ಮಾಡಲು ನಿಂತಿದೆ. ಯುವತಿಯರಿಗೆ ಉದ್ಯೋಗ ಬೇಕಾದರೆ ಮಂಚ ಹತ್ತಬೇಕು. ಯುವಕರಿಗೆ ಉದ್ಯೋಗ ಬೇಕಾದರೆ ಲಂಚ ಕೊಡಬೇಕು ಎನ್ನುವಂತಾಗಿದ್ದು, ಇದೊಂದು‌ ಲಂಚ–ಮಂಚದ ಸರ್ಕಾರ. ಯುವತಿಯ ಕೆಲಸ ಮಾಡಿಸಿಕೊಡಲು ಮಂಚ ಹತ್ತಲು ಸಚಿವರೊಬ್ಬರು ಹೇಳಿದ್ದರು. ಹಗರಣ ಬೆಳಕಿಗೆ ಬಂದ ಬಳಿಕ ಅವರು ರಾಜೀನಾಮೆ ನೀಡಿದ್ದೇ ನನ್ನ ಮಾತಿಗೆ ಸಾಕ್ಷಿಯಾಗಿದೆ’ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ