ಸಿದ್ದರಾಮಯ್ಯ 
ರಾಜಕೀಯ

ಸಿದ್ದರಾಮಯ್ಯ ಸ್ವತಂತ್ರ ಭಾರತದ ಜಿನ್ಹಾ! ಬಿಜೆಪಿ ತೀವ್ರ ಟೀಕೆ

ಸಾವರ್ಕರ್ ಫೋಟೋ ಬಗ್ಗೆ ಸಿದ್ದರಾಮಯ್ಯ ಅವರ ಪ್ರಶ್ನೆ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ, ಟಿಪ್ಪುವಿನ ಫೋಟೋವನ್ನು ಎಲ್ಲಿ ಬೇಕಾದರೂ ಹಾಕಬಹುದು ಆದರೆ ಸಾವರ್ಕರ್ ಫೋಟೋ ಹಾಕಲು ಮಾತ್ರ ಸಿದ್ದರಾಮಯ್ಯ ಅವರಿಗೆ ಧರ್ಮ ಅಡ್ಡ ಬರುತ್ತದೆ ಎಂದಿದೆ.

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ವತಂತ್ರ ಭಾರತದ ಜಿನ್ಹಾ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ. ಸಾವರ್ಕರ್ ಫೋಟೋ ಬಗ್ಗೆ ಸಿದ್ದರಾಮಯ್ಯ ಅವರ ಪ್ರಶ್ನೆ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ, ಟಿಪ್ಪುವಿನ ಫೋಟೋವನ್ನು ಎಲ್ಲಿ ಬೇಕಾದರೂ ಹಾಕಬಹುದು ಆದರೆ ಸಾವರ್ಕರ್ ಫೋಟೋ ಹಾಕಲು ಮಾತ್ರ ಸಿದ್ದರಾಮಯ್ಯ ಅವರಿಗೆ ಧರ್ಮ ಅಡ್ಡ ಬರುತ್ತದೆ. ಓಲೈಕೆ ರಾಜಕಾರಣದ ಪರಮಾವಧಿಯಿದು. ಜಿಹಾದಿ ಮಾನಸಿಕತೆಯನ್ನು ಕಾಂಗ್ರೆಸ್ ಪಕ್ಷ ಬೆಳೆಸುತ್ತಿರುವುದು ನಿಜಕ್ಕೂ ಆತಂಕಕಾರಿ ಸಂಗತಿ ಎಂದಿದೆ.

ಮುಸ್ಲಿಂ ಏರಿಯಾಗಳನ್ನು ಈ ದೇಶದ ಅಖಂಡತೆಯಿಂದ ಛಿದ್ರಗೊಳಿಸುವುದಕ್ಕೆ ಹೊರಟಿದ್ದೀರಾ?ಎಂದು ಪ್ರಶ್ನಿಸಿದ್ದು,  ಮತ್ತೊಮ್ಮೆ ದೇಶ ವಿಭಜಿಸುವ  ಕಾಂಗ್ರೆಸ್ ಪಕ್ಷದ ಹಿಡನ್ ಅಜೆಂಡಾ ಸಿದ್ದರಾಮಯ್ಯ ಬಾಯಿಂದ ಬಹಿರಂಗವಾಗಿದೆ.ಸಿದ್ದರಾಮಯ್ಯ ಬೀದಿಗೆ ಬಿಟ್ಟ ರಕ್ತಬೀಜಾಸುರರೇ ಶಿವಮೊಗ್ಗದಲ್ಲಿ ಗಲಾಟೆ ಸೃಷ್ಟಿಸಿದ್ದು ಎಂಬ ಗುಮಾನಿ ಈಗ ಸತ್ಯವಾಗಿದೆ ಎಂದು ಹೇಳಿದೆ.

ಜಿಹಾದಿ ಮಾನಸಿಕತೆಯ ಉಗ್ರರ ಪರವಾಗಿ ಸಿದ್ದರಾಮಯ್ಯ ವಕಾಲತ್ತು ವಹಿಸುವುದರಲ್ಲಿ ಅಚ್ಚರಿಯಿಲ್ಲ ಎಂದು ಬಿಜೆಪಿ ಆರೋಪಿಸಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ

'ನನ್ನನ್ನಲ್ಲ, ನಿಮ್ ಗಂಡನ ಗುರಾಯಿಸಿ', ಜಯಾ ಬಚ್ಚನ್‌ ಖಡಕ್ ನೋಟಕ್ಕೆ ಫೋಟೋಗ್ರಾಫರ್ ತಿರುಗೇಟು! Video

ಭೀಕರ ಹಿಟ್‌ ಅಂಡ್ ರನ್‌; ಟೀ ಕುಡಿಯುತ್ತಾ ಬೈಕ್ ಮೇಲೆ ಕುಳಿತಿದ್ದವನಿಗೆ ಶಾಕ್ ಕೊಟ್ಟ ಕಾರು, ಗಾಳಿಯಲ್ಲಿ ಹಾರಿದ ವ್ಯಕ್ತಿ! Video

ಮೈಸೂರು ದಸರಾಕ್ಕೆ ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳಿಂದ ಅಧಿಕೃತ ಚಾಲನೆ