ರಂದೀಪ್ ಸುರ್ಜೇವಾಲಾ 
ರಾಜಕೀಯ

ಬಸವರಾಜ ಬೊಮ್ಮಾಯಿ ಭಾರತದ ಅತ್ಯಂತ ಕೆಟ್ಟ ಸಿಎಂ: ರಣದೀಪ್ ಸುರ್ಜೆವಾಲಾ

ಬಸವರಾಜ ಬೊಮ್ಮಾಯಿ ಭಾರತದ ಅತ್ಯಂತ ಕೆಟ್ಟ ಮುಖ್ಯಮಂತ್ರಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಟೀಕಿಸಿದ್ದಾರೆ.

ಬೆಂಗಳೂರು: ಬಸವರಾಜ ಬೊಮ್ಮಾಯಿ ಭಾರತದ ಅತ್ಯಂತ ಕೆಟ್ಟ ಮುಖ್ಯಮಂತ್ರಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಟೀಕಿಸಿದ್ದಾರೆ.

ಶಿವಮೊಗ್ಗ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಸುರ್ಜೇವಾಲಾ ಅವರು, 'ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಬೊಮ್ಮಾಯಿ ಸರ್ಕಾರ ವಿಫಲವಾಗಿದ್ದು, ರಾಜ್ಯಾದ್ಯಂತ ಅವ್ಯವಸ್ಥೆ ತಲೆದೋರಿದೆ. ಬೊಮ್ಮಾಯಿ ಅವರು ದೇಶದ ಅತ್ಯಂತ ಅಸಮರ್ಥ ಮುಖ್ಯಮಂತ್ರಿಗಳಲ್ಲಿ ಒಬ್ಬರು ಮತ್ತು ಅವರು ಭ್ರಷ್ಟ ಸರ್ಕಾರವನ್ನು ಮುನ್ನಡೆಸುತ್ತಿದ್ದಾರೆ ಎಂದು ಟೀಕಿಸಿದರು. 

“ಅಪರಾಧಿಗಳು ಮತ್ತು ಸಮಾಜ ವಿರೋಧಿಗಳು ಹಗಲು ಹೊತ್ತಿನಲ್ಲೇ ಅಮಾಯಕರನ್ನು ಹೇಗೆ ಕೊಲ್ಲುತ್ತಿದ್ದಾರೆ? ಸರ್ಕಾರ ಯಾಕೆ ಮೂಕಪ್ರೇಕ್ಷಕವಾಗಿದೆ? ಬಿಜೆಪಿ ಪ್ರಾಯೋಜಿತ ಸಮಾಜವನ್ನು ವಿಭಜಿಸುವ ಷಡ್ಯಂತ್ರಗಳ ವಿರುದ್ಧ ನಮ್ಮ ಪಕ್ಷದ ನಾಯಕರು ಹೋರಾಡಲು ಪ್ರತಿಜ್ಞೆ ಮಾಡಿದ್ದಾರೆ. ಜನರ ಸಹಕಾರದಿಂದ ಈ ಸರ್ಕಾರವನ್ನು ಕಿತ್ತೊಗೆಯುವವರೆಗೂ ನಾವು ವಿಶ್ರಮಿಸುವುದಿಲ್ಲ. ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆ ಮತ್ತು ಕರಾವಳಿ ಕರ್ನಾಟಕ ಮತ್ತು ಶಿವಮೊಗ್ಗದಲ್ಲಿ ಹಿಂಸಾಚಾರವು ಬೊಮ್ಮಾಯಿ ಅವರ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಸುರ್ಜೇವಾಲ ಹೇಳಿದರು.

“ಈ ಸರ್ಕಾರ ಕಾರ್ಯನಿರ್ವಹಿಸುತ್ತಿಲ್ಲ.. ಕೇವಲ ನಿರ್ವಹಣೆ ಮಾಡುತ್ತಿದ್ದೇವೆ ಎಂದು ಸ್ವತಃ ಕಾನೂನು ಸಚಿವ (ಜೆಸಿ ಮಾಧು ಸ್ವಾಮಿ) ಒಪ್ಪಿಕೊಂಡಿದ್ದಾರೆ. ಒಬ್ಬ ಸಚಿವರು ಇನ್ನೊಬ್ಬರನ್ನು ಟೀಕಿಸುತ್ತಿದ್ದಾರೆ ಎಂದು ಟೀಕಿಸಿದರು.

ಇದೇ ವೇಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಮಾಧುಸ್ವಾಮಿ ಹೇಳಿದ್ದನ್ನ ಮುಚ್ಚಿಡಲು ಬೊಮ್ಮಾಯಿ ಸಚಿವರನ್ನು ನಿಯೋಜಿಸಿದ್ದಾರೆ. ಈ ಸರ್ಕಾರ ನಿಜವಾಗಿಯೂ ಕಾರ್ಯನಿರ್ವಹಿಸುತ್ತಿದೆಯೇ? ಎಂದು ಟೀಕಿಸಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT