ಬಿ ಎಸ್ ಯಡಿಯೂರಪ್ಪ 
ರಾಜಕೀಯ

ಮಾಜಿ ಸಿಎಂ ಯಡಿಯೂರಪ್ಪಗೆ ಪಕ್ಷದಲ್ಲಿ ಮಣೆ: ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯರಾಗಿ ಸೇರ್ಪಡೆ

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಬಿಜೆಪಿಯಲ್ಲಿ ಪ್ರಮುಖ ಸ್ಥಾನ ನೀಡಿ ಹೈಕಮಾಂಡ್ ಆದೇಶ ಹೊರಡಿಸಿದೆ. 

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಬಿಜೆಪಿಯಲ್ಲಿ ಪ್ರಮುಖ ಸ್ಥಾನ ನೀಡಿ ಹೈಕಮಾಂಡ್ ಆದೇಶ ಹೊರಡಿಸಿದೆ. 

ಕಳೆದ ವರ್ಷ ಮುಖ್ಯಮಂತ್ರಿ ಸ್ಥಾನದಿಂದ ಅವರು ನಿರ್ಗಮಿಸಿದ ಮೇಲೆ ಪಕ್ಷದಲ್ಲಿ ಪ್ರಮುಖ ಚಟುವಟಿಕೆಯಿಂದ ದೂರವಿದ್ದರು. ಪಕ್ಷದಲ್ಲಿ ಅವರ ಮುಂದಿನ ಸ್ಥಾನಮಾನವೇನು ಎಂಬ ವಿಷಯ ಆಗಾಗ ಚರ್ಚೆಗೆ ಬರುತ್ತಿತ್ತು. ಮುಂದಿನ ವರ್ಷ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಇರುವುದರಿಂದ ಅದಿನ್ನೂ ಮಹತ್ವ ಪಡೆದಿದೆ.

ಇದೀಗ ಬಿಜೆಪಿಯ ಕೇಂದ್ರೀಯ ಸಂಸದೀಯ ಮಂಡಳಿಯಲ್ಲಿ ಯಡಿಯೂರಪ್ಪ ಹಾಗೂ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್  ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಸಮಿತಿಯಲ್ಲಿ 15 ಮಂದಿ ಸದಸ್ಯರಿದ್ದು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ, ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ಇತರರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!