ಅಶ್ವತ್ಥ ನಾರಾಯಣ 
ರಾಜಕೀಯ

'ತಮ್ಮ ಸಿದ್ಧಾಂತ ಯಾವುದು ಸ್ಪಷ್ಟಪಡಿಸಿ; ಜಾತಿ, ಧರ್ಮವನ್ನೊಡೆದು ಆಳುವುದೇ? ನೆಹರು ಕುಟುಂಬದ ಗುಲಾಮಗಿರಿ ಮಾಡುವುದೇ?'

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ –ಬಿಜೆಪಿ ಕಾರ್ಯಕರ್ತರ ನಡುವೆ ತಂದಿಟ್ಟು ತಮಾಷೆ ನೋಡುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್‌. ಅಶ್ವತ್ಥನಾರಾಯಣ ಕಿಡಿಕಾರಿದ್ದಾರೆ.

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ –ಬಿಜೆಪಿ ಕಾರ್ಯಕರ್ತರ ನಡುವೆ ತಂದಿಟ್ಟು ತಮಾಷೆ ನೋಡುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್‌. ಅಶ್ವತ್ಥನಾರಾಯಣ ಕಿಡಿಕಾರಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅಶ್ವತ್ಥ ನಾರಾಯಣ ‘ಪ್ರಚೋದನಕಾರಿ ಹೇಳಿಕೆ ನೀಡುವಲ್ಲಿ ನಿಸ್ಸೀಮರಾದ ಸಿದ್ದರಾಮಯ್ಯ ಅವರು ಮುಸ್ಲಿಂ ಏರಿಯಾದಲ್ಲಿ ವೀರ ಸಾವರ್ಕರ್‌ ಫೋಟೊ ಯಾಕೆ? ಎಂದು ಕೇಳಿ ದೇಶಭಕ್ತರನ್ನು ಕೆರಳಿಸಿದ್ದಾರೆ. ಈಗ ತಮಗೂ ಮೊಟ್ಟೆ ಎಸೆಯಲು ಬರಲ್ವಾ? ಎಂದು ಕೇಳುವ ಮೂಲಕ ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ತಂದಿಟ್ಟು ತಮಾಷೆ ನೋಡುತ್ತಿದ್ದಾರೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಅವರೇ, ನಿಮ್ಮ ಸಿದ್ಧಾಂತ ಯಾವುದು? ಮತಾಂಧ ಟಿಪ್ಪುವನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಬಿಂಬಿಸುವುದೇ?, ಮುಸ್ಲಿಂ ಏರಿಯಾದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ಹಾಕಬಾರದು ಎಂಬುದೇ? ಜಾತಿ, ಧರ್ಮವನ್ನೊಡೆದು ಆಳುವುದೇ? ಅಥವಾ, ನೆಹರು ಕುಟುಂಬದ ಗುಲಾಮಗಿರಿ ಮಾಡುವುದೇ’ ಎಂದು ಅಶ್ವತ್ಥನಾರಾಯಣ ಪ್ರಶ್ನಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳನ್ನು ವೀಕ್ಷಿಸಲು ಗುರುವಾರ ಬಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು ಘೇರಾವ್ ಹಾಕಿದ್ದರು. ಕಪ್ಪು ಬಾವುಟ ಪ್ರದರ್ಶಿಸಿ, ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕೋಳಿಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

SCROLL FOR NEXT