ರಮೇಶ್ ಜಾರಕಿಹೊಳಿ 
ರಾಜಕೀಯ

ಸಂಪುಟ ವಿಸ್ತರಣೆಗೆ ರೆಕ್ಕೆಪುಕ್ಕ: ಸಿಎಂ ಬೊಮ್ಮಾಯಿ ಭೇಟಿ ಮಾಡಿದ ರಮೇಶ್ ಜಾರಕಿಹೊಳಿ

ರಾಜ್ಯ ವಿಧಾನಸಭಾ ಚುನಾವಣೆಗೆ ಬೆರಳೆಣೆಕೆಯ ತಿಂಗಳುಗಳು ಮಾತ್ರ ಬಾಕಿ ಉಳಿದಿವೆ. ಈ ಸಂದರ್ಭದಲ್ಲಿ ಸಚಿವ ಸಂಪುಟ ವಿಸ್ತರಣೆಯ ಮಾತುಗಳಿಗೆ ರೆಕ್ಕೆ ಪುಕ್ಕಗಳು ಮೂಡತೊಡಗಿವೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಬೆರಳೆಣೆಕೆಯ ತಿಂಗಳುಗಳು ಮಾತ್ರ ಬಾಕಿ ಉಳಿದಿವೆ. ಈ ಸಂದರ್ಭದಲ್ಲಿ ಸಚಿವ ಸಂಪುಟ ವಿಸ್ತರಣೆಯ ಮಾತುಗಳಿಗೆ ರೆಕ್ಕೆ ಪುಕ್ಕಗಳು ಮೂಡತೊಡಗಿವೆ.

ಇದಕ್ಕೆ ಇಂಬು ನೀಡುವಂತೆ ಶನಿವಾರ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಆರ್.ಟಿ ನಗರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಆಗಮಿಸಿ ಚರ್ಚೆ ನಡೆಸಿದರು. ಸರಕಾರ ರಚನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ರಮೇಶ್ ಜಾರಕಿಹೊಳಿ ಮತ್ತೆ ಮಂತ್ರಿಗಿರಿಗಾಗಿ ಲಾಭಿ ನಡೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಹಿಂದೆ ಅಶ್ಲೀಲ‌ ಸಿಡಿ ಪ್ರಕರಣದಿಂದ ಮಂತ್ರಿ ಸ್ಥಾನ‌ ಕಳೆದುಕೊಂಡಿದ್ದ ರಮೇಶ್ ಜಾರಕಿಹೊಳಿ, ಸಚಿವ ಸ್ಥಾನದ ಮೇಲೆ ಮತ್ತೆ ಕಣ್ಣಿಟ್ಟಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ.

ಈಗಾಗಲೇ ಹೈಕಮಾಂಡ್ ನಾಯಕರು, ಬಿಎಲ್ ಸಂತೋಷ್‌ ಬಳಿ ಬೇಡಿಕೆ ಇಟ್ಟಿರುವ ರಮೇಶ್ ಜಾರಕಿಹೊಳಿ, ನಿನ್ನೆಯೂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪುತ್ರಿಯರ ಅಕ್ರಮ ನೇಮಕಕ್ಕೆ ನೆರವು: 'KPSC' ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತುಗೊಳಿಸಿ ರಾಜ್ಯಪಾಲರ ಆದೇಶ

US-Iran ಸಂಘರ್ಷ ತೀವ್ರ: Hormuz ಜಲಸಂಧಿ ಬಳಿ ಅಮೆರಿಕ ಭೀಕರ ವೈಮಾನಿಕ ದಾಳಿ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ..!

ಬದಲಾದ ಸಂಸತ್ ಬಲಾಬಲದ ನಡುವೆ ಮುಂಗಾರು ಅಧಿವೇಶನ; ಜು.19 ರಂದು ಸರ್ವಪಕ್ಷಗಳ ಸಭೆ; ಜಿದ್ದಾಜಿದ್ದಿನ ರಾಜಕೀಯಕ್ಕೆ ವೇದಿಕೆ ಸಜ್ಜು..!

ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ನಿಗೂಢ ಮಾಸ್ಕ್ ಮ್ಯಾನ್! ಕೊನೆಗೂ ಗುರುತು ಬಹಿರಂಗ

2028 ವಿಧಾನಸಭಾ ಚುನಾವಣೆ: BJP ಬಣ ಬಡಿದಾಟದ ಲಾಭ JDSಗೆ?; NDA ಸಿಎಂ ರೇಸ್‌ನಲ್ಲಿ ಕುಮಾರಸ್ವಾಮಿ ಹೆಸರು ಮುನ್ನೆಲೆಗೆ..!