ಸಿದ್ದರಾಮಯ್ಯ 
ರಾಜಕೀಯ

'ಕೈ' ಕಾರ್ಯಕರ್ತನಾಗಿದ್ದರೆ, ಆತನನ್ನು ಬಿಡಿಸಿದ್ದು ಯಾಕೆ?: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಮತ್ತೆ ಕಿಡಿ

ತಮ್ಮ ಕಾರಿನ ಮೇಲೆ ಮೊಟ್ಟೆ ಎಸೆದ ಆರೋಪಿ ಕಾಂಗ್ರೆಸ್ ಕಾರ್ಯಕರ್ತ ಎಂಬ ಸುದ್ದಿ ಪ್ರಸಾರವಾಗುತ್ತಲೇ ಈ ಕುರಿತು ಸರಣಿ ಟ್ವೀಟ್ ಮೂಲಕ ಬಿಜೆಪಿಗೆ ಕುಟುಕಿರುವ ಸಿದ್ದರಾಮಯ್ಯ, ಆಪರೇಷನ್ ಕಮಲ' ಎಂದರೆ ಶಾಸಕರಿಗೆ ಮಾತ್ರ ಅಲ್ಲ.. ಈಗ ಬೀದಿ ಪುಂಡರಿಗೂ ಆಪರೇಷನ್ ಕಮಲ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಬೆಂಗಳೂರು: ತಮ್ಮ ಕಾರಿನ ಮೇಲೆ ಮೊಟ್ಟೆ ಎಸೆದ ಆರೋಪಿ ಕಾಂಗ್ರೆಸ್ ಕಾರ್ಯಕರ್ತ ಎಂಬ ಸುದ್ದಿ ಪ್ರಸಾರವಾಗುತ್ತಲೇ ಈ ಕುರಿತು ಸರಣಿ ಟ್ವೀಟ್ ಮೂಲಕ ಬಿಜೆಪಿಗೆ ಕುಟುಕಿರುವ ಸಿದ್ದರಾಮಯ್ಯ, ಆಪರೇಷನ್ ಕಮಲ' ಎಂದರೆ ಶಾಸಕರಿಗೆ ಮಾತ್ರ ಅಲ್ಲ.. ಈಗ ಬೀದಿ ಪುಂಡರಿಗೂ ಆಪರೇಷನ್ ಕಮಲ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಈ ಕುರಿತ ಸರಣಿ ಟ್ವೀಟ್ ನಲ್ಲಿ ಬಿಜೆಪಿ ವಿರುದ್ಧ ಕಿಡಿಕಾರಿರುವ ಸಿದ್ದರಾಮಯ್ಯ, 'ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ರಾತೋರಾತ್ರಿ ಪೊಲೀಸ್ ಠಾಣೆಗೆ ಹೋಗಿ ಬಿಡಿಸಿಕೊಂಡು ಯಾಕೆ ಬರಬೇಕಾಗಿತ್ತು? ಕಾಂಗ್ರೆಸ್‌ನವನೆಂದು ಹೇಳಿಕೊಂಡರೆ ಮಾತ್ರ ಪೊಲೀಸರಿಂದ ಬಿಡಿಸ್ತೇನೆ ಎಂದು ಷರತ್ತು ಹಾಕಿ ಬಿಡುಗಡೆ ಮಾಡಿದಿರಾ?.. 'ಆಪರೇಷನ್ ಕಮಲ' ಎಂದರೆ ಶಾಸಕರಿಗೆ ಮಾತ್ರ ಎಂದು ತಿಳಿದುಕೊಂಡಿದ್ದೆವು. ಈಗ ಬೀದಿ ಪುಂಡರ 'ಆಪರೇಷನ್ ಕಮಲ' ಕೂಡಾ ಬಿಜೆಪಿ ನಡೆಸುತ್ತದೆ ಎಂದು‌ ಮಡಿಕೇರಿಯಲ್ಲಿ ಸಾಬೀತಾಗಿದೆ ಎಂದು ಹೇಳಿದ್ದಾರೆ.

ಅಂತೆಯೇ ಬಿಜೆಪಿಯ ಇಂತಹ ನಾಟಕಗಳೆಲ್ಲ ಹಳತಾಗಿದೆ. ಮೊಟ್ಟೆ ಎಸೆದವ ಕಾಂಗ್ರೆಸ್ ಪಕ್ಷದವನಾಗಿದ್ದರೆ ಅವನನ್ನು ಮೊದಲು ಜೈಲಿಗೆ ಕಳಿಸಿ. ನಿಮಗ್ಯಾಕೆ ಅವನ ಹಿತರಕ್ಷಣೆಯ ಉಸಾಬರಿ ಬಿಜೆಪಿ ಎಂದು ಕಿಡಿಕಾರಿದ್ದಾರೆ.

ಈ ಹಿಂದೆ ಮೊಟ್ಟೆ ಎಸೆದ ಆರೋಪಿ ಸಂಪತ್ ವಿಡಿಯೋದಲ್ಲಿ ತಾನು, ನಾನು ಕಾಂಗ್ರೆಸ್ ಕಾರ್ಯಕರ್ತನೆ, ಕಾಂಗ್ರೆಸ್​ನಲ್ಲಿ ಹಿಂದೂಗಳಿಲ್ವಾ? ವಿಪಕ್ಷ ನಾಯಕ ಸಿದ್ದರಾಮಯ್ಯ ಹಿಂದೂಗಳೂ ದನದ ಮಾಂಸ ತಿಂತಾರೆ ಅಂದಿದ್ದು ತಪ್ಪಲ್ವಾ? ಹಿಂದೂ ವಿರೋಧಿ ಹೇಳಿಕೆಯಿಂದ ನೋವಾಗಿತ್ತು. ಹೀಗಾಗಿ ಮೊಟ್ಟೆ ಹೊಡೆದೆ ಎಂದು ಹೇಳಿಕೆ ನೀಡಿದ್ದ. ಈ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದ್ದಂತೆಯೇ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

ಏಷ್ಯನ್ ಗೇಮ್ಸ್ 2026 ಫೈನಲ್: ವೈಭವ್ ಸೂರ್ಯವಂಶಿ ಅಣಕಿಸಿದ ಪಾಕ್ ಸ್ಟಾರ್ ಆಟಗಾರ! ಏನು ಮಾಡಿದ್ರು ಗೊತ್ತಾ? Video

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕ, ಕ್ಷಣಮಾತ್ರದಲ್ಲಿ ಎಚ್ಚೆತ್ತ RPF ಕಾನ್‌ಸ್ಟೆಬಲ್, ರಕ್ಷಣೆ-Video