ರಾಜಕೀಯ

ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆತ ಪ್ರಕರಣ: ಕಾಂಗ್ರೆಸ್​ನಿಂದ ಶಕ್ತಿ ಪ್ರದರ್ಶನ,‌ ಆಗಸ್ಟ್ 26ಕ್ಕೆ ಮಡಿಕೇರಿ ಚಲೋ!

Shilpa D

ಬೆಂಗಳೂರು: ಮಡಿಕೇರಿ ಪ್ರವಾಸದ ವೇಳೆಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಹಿನ್ನೆಲೆ ಸಿದ್ದರಾಮಯ್ಯ ಬೆಂಬಲಿಗರು ಮಡಿಕೇರಿ ಚಲೋಗೆ ಅಧಿಕೃತ ಸೂಚನೆ ನೀಡಿದ್ದಾರೆ.

ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ  ಮಡಿಕೇರಿ ಚಲೋಗೆ ಕಾಂಗ್ರೆಸ್ ಅಧಿಕೃತ ಪ್ರಕಟಣೆ  ಹೊರಡಿಸಿದ್ದು,  ಶಾಸಕಾಂಗ ಪಕ್ಷದ ಕಾರ್ಯದರ್ಶಿ ಈ. ತುಕಾರಾಮ್​ ಈ ಬಗ್ಗೆ ಪ್ರಕಟಣೆ ಹೊರಡಿಸಿದ್ದಾರೆ.

ಕಾಂಗ್ರೆಸ್ ‌ ಆ. 26ರ ಬೆಳಗ್ಗೆ 10:30ಕ್ಕೆ ಪ್ರತಿಭಟನೆಗೆ ಕರೆ ನೀಡಿದೆ.  ಮಡಿಕೇರಿಯ ಭಗವತಿ ನಗರದಲ್ಲಿರುವ  ಎಸ್ ಪಿ ಕಚೇರಿ ಎದುರು ಪ್ರತಿಭಟನೆಗೆ ಕಾಂಗ್ರೆಸ್ ಕರೆ ಕೊಟ್ಟಿದ್ದು, ಚಲೋದಲ್ಲಿ ಭಾಗಿಯಾಗುವಂತೆ ಎಲ್ಲಾ ನಾಯಕರಿಗೆ ಸೂಚನೆ ನೀಡಲಾಗಿದೆ.

ತೀವ್ರ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಸಲುವಾಗಿ ಕೊಡಗು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದು ವಿರಾಜ್ಪೇಟೆಯ ಸಂಪತ್ ಎಂಬ ವ್ಯಕ್ತಿ ಆಕ್ರೋಶ ವ್ಯಕ್ತಪಡಿಸಿದ್ದರು.

ಕೊಡಗು ಜಿಲ್ಲೆಗೆ ಪ್ರತಿಪಕ್ಷ ನಾಯಕರ ಭೇಟಿ ಸಂದರ್ಭ ನಡೆದ ಈ ಅಹಿತಕರ ಘಟನೆಯನ್ನು ಖಂಡಿಸಿ ಇದೀಗ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮೂಲಕವೇ ಮಡಿಕೇರಿ ಚಲೋ ಕೈಗೊಳ್ಳಲು ತೀರ್ಮಾನಿಸಿ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಆಗಿರುವ ಸಿದ್ದರಾಮಯ್ಯ ಹಾಗೂ ಪಕ್ಷದ ಹಿರಿಯ ನಾಯಕರ ಸೂಚನೆ ಮೇರೆಗೆ ಕಾಂಗ್ರೆಸ್ ‌ಶಾಸಕಾಂಗ ಪಕ್ಷದ ಕಾರ್ಯದರ್ಶಿ ಈ. ತುಕಾರಾಮ್ ಅವರಿಂದ ಅಧಿಕೃತ ಸೂಚನೆ ಹೊರಬಿದ್ದಿದೆ.

SCROLL FOR NEXT