ಯಡಿಯೂರಪ್ಪ ಮತ್ತು ಪ್ರಧಾನಿ ಮೋದಿ 
ರಾಜಕೀಯ

ಪ್ರಧಾನಿ ಮೋದಿ ಭೇಟಿ ಮಾಡಿದ 'ಮಾಸ್ಟರ್ ಸ್ಟ್ರಾಟಜಿಸ್ಟ್': ಆಪ್ತರಿಗೆ 'ಆಯಕಟ್ಟಿ'ನ ಸ್ಥಾನ ಕೊಡಿಸಲು ಬಿಎಸ್ ಯಡಿಯೂರಪ್ಪ ಸರ್ಕಸ್!

ಬಿಜೆಪಿಯ 'ಮಾಸ್ಟರ್ ಸ್ಟ್ರಾಟಜಿಸ್ಟ್' ಬಿಎಸ್ ಯಡಿಯೂರಪ್ಪ ಶುಕ್ರವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾದರು.

ಬೆಂಗಳೂರು: ಬಿಜೆಪಿಯ 'ಮಾಸ್ಟರ್ ಸ್ಟ್ರಾಟಜಿಸ್ಟ್' ಬಿಎಸ್ ಯಡಿಯೂರಪ್ಪ ಶುಕ್ರವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾದರು. ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ.

ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್.ಯಡಿಯೂರಪ್ಪ ಒಂದು ವರ್ಷದ ನಂತರ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಯಡಿಯೂರಪ್ಪ ಅವರಿಗೆ ಒಗ್ಗಟ್ಟಿನ ಮಂತ್ರ ಪಠಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಮೇಲೆ ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿ ಮಾಡದೇ ಅಂತರ ಕಾಯ್ದುಕೊಂಡಿದ್ದ ಯಡಿಯೂರಪ್ಪ, ತಮ್ಮನ್ನು ಪಕ್ಷದ ಕೇಂದ್ರ ಸಂಸದೀಯ ಮಂಡಳಿ ಹಾಗೂ ರಾಜಕೀಯ ವ್ಯವಹಾರಗಳ ಸಮಿತಿಗೆ ಸದಸ್ಯರನ್ನಾಗಿ ನೇಮಕ ಮಾಡಿದ್ದರಿಂದ ಹೈಕಮಾಂಡ್ ನಾಯಕರಿಗೆ ಅಭಿನಂದನೆ ಸಲ್ಲಿಸಲು ದೆಹಲಿಗೆ ತೆರಳಿದ್ದಾರೆ ಎಂದು ಹೇಳಲಾಗಿದೆ

ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಪಕ್ಷ ಸಂಘಟನೆ ಹಾಗೂ ರಾಜ್ಯ ಪ್ರವಾಸದ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಯಡಿಯೂರಪ್ಪ ಸುಮಾರು 20 ನಿಮಿಷಗಳ ಕಾಲ ಚರ್ಚೆ ನಡೆಸಿದ್ದಾರೆ. ಪ್ರಮುಖವಾಗಿ ಕರ್ನಾಟಕದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಇಬ್ಬರೂ ನಾಯಕರು ಗಂಭೀರ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಧಾನಿ ಭೇಟಿ ಮಾಡಿ ಚರ್ಚೆ ಮಾಡಿದ್ದೇನೆ.. ರಾಜ್ಯದ ವಿದ್ಯಮಾನಗಳ‌ ಬಗ್ಗೆ ಚರ್ಚೆ ನಡೆಯಿತು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಅವರಿಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಮುಂದಿನ ವಿಧಾನಸಭಾ ಚುನಾವಣೆಗೆ ಪಕ್ಷ ಸಂಘಟನೆ ಬಗ್ಗೆ ಚರ್ಚೆ ಮಾಡಿದ್ದೇವೆ ಪ್ರಧಾನಿ 2 ನೇ ತಾರೀಖಿನಂದು ಮಂಗಳೂರಿಗೆ ಬರುತ್ತಿದ್ದಾರೆ ಲಕ್ಷಕ್ಕೂ ಹೆಚ್ಚು ಜನರು ಸೇರಿ ದೊಡ್ಡ ಕಾರ್ಯಕ್ರಮ ಮಾಡಲಿದ್ದೇವೆ ಎಂದರು.

ವಿಜಯೇಂದ್ರ ಅವರನ್ನು ಎಂಎಲ್‌ಸಿ ಮಾಡಲು ಮತ್ತು ಅವರಿಗೆ ಸಚಿವ ಸ್ಥಾನ ಕೊಡಿಸಲು ಯಡಿಯೂರಪ್ಪ ಅವರಿಗೆ ಸಾಧ್ಯವಾಗಲಿಲ್ಲ ಎಂದು ಅವರ ಬೆಂಬಲಿಗರು ಬೇಸರಗೊಂಡಿದ್ದರು, ಬಿಜೆಪಿಗೆ, ಯಡಿಯೂರಪ್ಪ ವಿಶೇಷ, ಮತ್ತು ಪಕ್ಷವು ಅವರಿಗೆ ಅನೇಕ ವಿನಾಯಿತಿಗಳನ್ನು ನೀಡಿದೆ.  ಜುಲೈ 2019 ರಲ್ಲಿ ಅವರನ್ನು ಮುಖ್ಯಮಂತ್ರಿ ಮಾಡಲಾಯಿತು, ಅವರಿಗೆ 75 ವರ್ಷ ವಯಸ್ಸಾಗಿದ್ದರೂ, ಮತ್ತು ಈಗ, 79 ನೇ ವಯಸ್ಸಿನಲ್ಲಿ, ಆದರ್ಶ 'ಮಾರ್ಗದರ್ಶಕ' ರಾಗಿ ಬಿಜೆಪಿ ಸಂಸದೀಯ ಮಂಡಳಿಗೆ ನೇಮಿಸಲಾಗಿದೆ.

ಯಡಿಯೂರಪ್ಪ 2008 ರಿಂದ ಚುನಾವಣೆಯಲ್ಲಿ ಬಿಜೆಪಿ ಸಾಧನೆ ಮಾಡಿದ್ದರು ಮತ್ತು ಮುಂಬರುವ ಚುನಾವಣೆಯಲ್ಲೂ ಅದನ್ನು ಮಾಡುವ ಸಾಧ್ಯತೆಯಿದೆ. ಮುಖ್ಯಮಂತ್ರಿಯಾಗಿ, ಅವರು 150 ಸ್ಥಾನಗಳನ್ನು ಗೆಲ್ಲುವ ಬಗ್ಗೆ ಮಾತನಾಡಿದ್ದರು, ಆದರೆ ಇತ್ತೀಚಿನ ತಿಂಗಳುಗಳಲ್ಲಿ ನಡೆದ ಹಗರಣಗಳ ಸರಣಿಯು ಪಕ್ಷದ ಪ್ರತಿಷ್ಠೆಯನ್ನು ಹಾಳುಮಾಡಿದೆ.

ತಮ್ಮ ದೆಹಲಿ ಪ್ರವಾಸದ ವೇಳೆ ಪಕ್ಷದ ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ಚರ್ಚಿಸುವ ನಿರೀಕ್ಷೆಯಿದ್ದು, ತಾವು ಸೂಚಿಸಿದ ಅಭ್ಯರ್ಥಿಗೆ ಆ ಸ್ಥಾನ ನೀಡುವಂತೆ ಮನವಿ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ನಳಿನ್ ಕುಮಾರ್ ಕಟೀಲ್ ಅವರ ಅವಧಿ ಮುಕ್ತಾಯವಾಗುತ್ತಿದ್ದಂತೆ ಪಕ್ಷದ ಅಧ್ಯಕ್ಷರ ಬದಲಾವಣೆಯ ಬಗ್ಗೆ ಸಾಕಷ್ಟು ಗದ್ದಲ ಎದ್ದಿದೆ. ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಶಾಸಕ ಅರವಿಂದ ಲಿಂಬಾವಳಿ ಹೆಸರು ಕೇಳಿಬರುತ್ತಿದೆ. ಆದರೆ ಯಡಿಯೂರಪ್ಪ ಅವರು ಸೂಚಿಸಿದ ವ್ಯಕ್ತಿಗಳಲ್ಲಿ ಒಬ್ಬರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ಪ್ರಯತ್ನಿಸುತ್ತಾರೆ, ಅಂದರೆ ಟಿಕೆಟ್ ಆಯ್ಕೆಯಲ್ಲಿ ಅವರದ್ದೇ  ಮಾತು ಅಂತಿಮವಾಗಿರುತ್ತದೆ. ಐದು  ಸ್ಥಾನಗಳನ್ನು ಹೊಂದಿರುವ ಸಚಿವ ಸಂಪುಟದಲ್ಲಿ ತಮ್ಮ ಹೆಚ್ಚಿನ ಬೆಂಬಲಿಗರಿಗೆ ಅವಕಾಶ ಕಲ್ಪಿಸಲು ಯಡಿಯೂರಪ್ಪ ಬಯಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT