ಸಿದ್ದರಾಮಯ್ಯ 
ರಾಜಕೀಯ

ಸಚಿವ ಸೋಮಣ್ಣನಿಗೆ ಸೋಲಿನ ರುಚಿ ತೋರಿಸುತ್ತೇವೆ: ಸಿದ್ದರಾಮಯ್ಯ

ಮುಂದಿನ ದಿನಗಳಲ್ಲಿ ಗೋವಿಂದರಾಜನಗರ, ವಿಜಯನಗರ ಕ್ಷೇತ್ರಗಳು ಗೆಲ್ಲುವ ಮೂಲಕ ಸೋಮಣ್ಣನಿಗೆ ಮತ್ತೆ ಸೋಲಿನ ರುಚಿಯನ್ನು  ತೋರಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದರು.

ಬೆಂಗಳೂರು: ಮುಂದಿನ ದಿನಗಳಲ್ಲಿ ಗೋವಿಂದರಾಜನಗರ, ವಿಜಯನಗರ ಕ್ಷೇತ್ರಗಳು ಗೆಲ್ಲುವ ಮೂಲಕ ಸೋಮಣ್ಣನಿಗೆ ಮತ್ತೆ ಸೋಲಿನ ರುಚಿಯನ್ನು  ತೋರಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದರು.

ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ಗೋವಿಂದರಾಜನಗರದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿಕೊಂಡ ಮಾಜಿ ಪಾಲಿಕೆ ಸದಸ್ಯ ಡಿ ಉಮಾಶಂಕರ್ ನೇತೃತ್ವ ತಂಡವನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದರು.

ನನ್ನ ಮುಖ್ಯಮಂತ್ರಿ ಅವಧಿಯಲ್ಲಿ ಕ್ಷೇತ್ರದಲ್ಲಿ ಅನುಮೋದನೆ ದೊರೆತಿರುವ ಕಾಮಗಾರಿಗಳಿಗೆ ನಡೆಯದಂತೆ ಅಡ್ಡಗಾಲು ಹಾಕಿ ಸಣ್ಣತನದ ರಾಜಕಾರಣವನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇಲ್ಲಿ ಸೇರಿರುವ ಜನಸ್ತೋಮವೇ ಮುಂದಿನ ಚುನಾವಣೆಯ ಗೆಲುವಿನ ಫಲಿತಾಂಶವನ್ನು ಬರೆದಿಟ್ಟಿದ್ದಾರೆ ನಿತ್ಯ ಬರಿ ಸುಳ್ಳು ಹೇಳಿಕೊಂಡು ಜನರನ್ನು ವಂಚಿಸುತ್ತಿರುವ ಸೋಮಣ್ಣ ನವರಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್, ಶಾಸಕ ಎಂ ಕೃಷ್ಣಪ್ಪ ಶಾಸಕ ಪ್ರಿಯಕೃಷ್ಣ ದಿ ಉಪಮೇಯರ್ ಪುಟ್ಟರಾಜು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಳವಳ್ಳಿ ಶಿವಣ್ಣ, ಡಿ ಉಮಾಶಂಕರ್ ನೇತೃತ್ವದಲ್ಲಿ ಎಚ್ ಕುಮಾರ್, ಅಂಜಲಿ, ಮಹದೇವ ಮಡಿವಾಳ, ರಾಜಕುಮಾರ್.ಡಿ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಗೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT