ದೇವೇಗೌಡ 
ರಾಜಕೀಯ

ಏಕರೂಪ ನಾಗರೀಕ ಸಂಹಿತೆ ಜಾರಿಗೆ ತರಲು ಸರ್ಕಾರ ಮುಂದು: ಹೆಚ್.ಡಿ.ದೇವೇಗೌಡ ವಿರೋಧ

ಏಕರೂಪ ನಾಗರೀಕ ಸಂಹಿತೆ ಜಾರಿಗೆ ತರಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರು ವಿರೋಧಿಸಿದ್ದು, ಸಂವಿಧಾನದ ಬದ್ಧವಾಗಿ ನಿಲ್ಲುವುದಾಗಿ ಗುರುವಾರ ಹೇಳಿದ್ದಾರೆ.

ಮೈಸೂರು: ಏಕರೂಪ ನಾಗರೀಕ ಸಂಹಿತೆ ಜಾರಿಗೆ ತರಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮವನ್ನು ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರು ವಿರೋಧಿಸಿದ್ದು, ಸಂವಿಧಾನದ ಬದ್ಧವಾಗಿ ನಿಲ್ಲುವುದಾಗಿ ಗುರುವಾರ ಹೇಳಿದ್ದಾರೆ.

ನಂಜನಗೂಡಿನಲ್ಲಿ ಶ್ರೀಕಂಠೇಶ್ವರ ದೇವಾಲಯದಲ್ಲಿ ಕುಟುಂಬದೊಂದಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುಸಿಸಿ ಜಾರಿಗೆ ತರಲು ಸಂವಿಧಾನದಲ್ಲಿ ಅವಕಾಶವಿಲ್ಲ. ಜಾರಿಗೆ ತರಲು ಸರ್ಕಾರ ಯತ್ನಿಸಿದ್ದೇ ಆದರೆ, ತೀವ್ರ ವಿರೋಧವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಬಳಿಕ ಮೇಕೆದಾಟು ಯೋಜನೆ ಕುರಿತು ಮಾತನಾಡಿ, ನದಿ ತೀರದ ರಾಜ್ಯವಾದ ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನೀರನ್ನು ಬಳಸಿಕೊಳ್ಳಲು ಸೇಲಂ ಜಿಲ್ಲೆ ಮತ್ತು ಸುತ್ತಮುತ್ತಲಿನ 4 ಲಕ್ಷ ಎಕರೆ ಭೂಮಿಗೆ ನೀರುಣಿಸಲು ಅನುಮತಿಸಲಾಗಿದೆ. ಆದರೆ, ಸಮುದ್ರಕ್ಕೆ ಸೇರುತ್ತಿರುವ ನೀರನ್ನು ಬಳಸಿಕೊಳ್ಳಲು ಕರ್ನಾಟಕಕ್ಕೆ ಅನುಮತಿ ನೀಡುತ್ತಿಲ್ಲ ಎಂದು ಪ್ರಧಾನಿ ಮೋದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಭವಿಷ್ಯದ ಲಾಭಕ್ಕಾಗಿ ಕೇಂದ್ರ ಸರ್ಕಾರ ಎಐಎಡಿಎಂಕೆಯೊಂದಿಗೆ ಕೈಜೋಡಿಸಿದೆ ಎಂದು ಆರೋಪಿಸಿದ ಅವರು, ಮೇಕೆದಾಟು ಯೋಜನೆ ಕುರಿತು ಮೋದಿಗೆ ಪತ್ರ ಬರೆದಿದ್ದರೂ ಯಾವುದೇ ಉತ್ತರ ಬಂದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಅಲ್ಲದೆ, ಮುಂಬರುವ ಅಧಿವೇಶನದಲ್ಲಿ ಈ ವಿಷಯ ಪ್ರಸ್ತಾಪಿಸುವುದಾಗಿ ಹೇಳಿದರು.

ನಂತರ ವಿಧಾನಸಭಾ ಚುನಾವಣೆಗೆ ಪಕ್ಷದ ಕಾರ್ಯಕರ್ತರನ್ನು ಸಜ್ಜುಗೊಳಿಸಲು ಜನವರಿಯಿಂದ ಪ್ರಚಾರ ಮಾಡುವುದಾಗಿ ಘೋಷಿಸಿದರು.

ಬಳಿಕ ಪಕ್ಷದ ಭವಿಷ್ಯವನ್ನು ಹೆಚ್ಚಿಸಲು ಮನೆ ಮನೆಗೆ ತೆರಳಿ ಪ್ರಚಾರ ಮಾಡುವಂತೆ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ ಅವರು, ಅಭ್ಯರ್ಥಿಗಳ ಮೊದಲ ಪಟ್ಟಿ ಅಂತಿಮ ಪಟ್ಟಿಯಲ್ಲ ಮತ್ತು ದೈನಂದಿನ ಸಮೀಕ್ಷೆಯ ವರದಿಯನ್ನು ಆಧರಿಸಿ ಬದಲಾಯಿಸಲಾಗುತ್ತದೆ ಎಂದು ಹೇಳಿದರು.

ಹಾಸನ ಜಿಲ್ಲೆಯ ಭಿನ್ನಾಭಿಪ್ರಾಯಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಶಾಸಕ ಶಿವಲಿಂಗೇಗೌಡ ಅವರು ಕುಮಾರಸ್ವಾಮಿ ಅವರೊಂದಿಗೆ ಮಾತನಾಡಿದ್ದು, ಸಮಸ್ಯೆ ಬಗೆಹರಿಸಬೇಕಿದೆ. ಹಲವು ಯೋಜನೆಗಳಿಗೆ ಹಣ ಮಂಜೂರು ಮಾಡುವ ಮೂಲಕ ಪ್ರೀತಂಗೌಡ ಅವರಿಗೆ ಯಡಿಯೂರಪ್ಪ ಸರ್ಕಾರ ಬಲ ನೀಡಿತ್ತು. ಆದರೆ, ಬಿಜೆಪಿ ಶಕ್ತಿ, ಒತ್ತಡಕ್ಕೆ ಜೆಡಿಎಸ್ ತಲೆ ಬಾಗುವುದಿಲ್ಲ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT