ಬಾಲಚಂದ್ರ ಜಾರಕಿಹೊಳಿ 
ರಾಜಕೀಯ

ನಾನಾಗಲೀ, ರಮೇಶ್ ಜಾರಕಿಹೊಳಿಯಾಗಲೀ ಬಿಜೆಪಿ ತೊರೆಯುತ್ತಿಲ್ಲ: ಬಾಲಚಂದ್ರ ಜಾರಕಿಹೊಳಿ ಸ್ಪಷ್ಟನೆ

ಬಿಜೆಪಿ ತೊರೆಯುವ ಊಹಾಪೋಹಗಳನ್ನು ತಳ್ಳಿಹಾಕಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ನಾನಾಗಲೀ ನನ್ನ ಸಹೋದರ ರಮೇಶ್ ಜಾರಕಿಹೊಳಿಯಾಗಲೀ ಬಿಜೆಪಿ ಪಕ್ಷವನ್ನು ತೊರೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿ: ಬಿಜೆಪಿ ತೊರೆಯುವ ಊಹಾಪೋಹಗಳನ್ನು ತಳ್ಳಿಹಾಕಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ನಾನಾಗಲೀ ನನ್ನ ಸಹೋದರ ರಮೇಶ್ ಜಾರಕಿಹೊಳಿಯಾಗಲೀ ಬಿಜೆಪಿ ಪಕ್ಷವನ್ನು ತೊರೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಗೋಕಾಕ ಬಳಿ ಗುರುವಾರ ನಡೆದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು. 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಅರಭಾವಿ ಮತ್ತು ಗೋಕಾಕದಿಂದ ನಾನು ಮತ್ತು ರಮೇಶ್ ಜಾರಕಿಹೊಳಿ ಸ್ಪರ್ಧಿಸಲಿದ್ದೇವೆಂದು ಹೇಳಿದರು.

2023ರ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ಪಡೆದು ಇಬ್ಬರೂ ಸ್ಪರ್ಧಿಸುತ್ತೇವೆ. ನಮ್ಮ ಪ್ರತಿಸ್ಪರ್ಧಿಗಳು ಕಳೆದ ಕೆಲವು ತಿಂಗಳಿಂದ ನಮ್ಮ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ರಮೇಶ್ ಗೋಕಾಕದಿಂದ ಸ್ಪರ್ಧಿಸಲಿದ್ದು, ನಾನು ಅರಭಾವಿಯಿಂದ ಕಣದಲ್ಲಿರುತ್ತೇನೆ ಎಂದು ತಿಳಿಸಿದರು.

2018ರ ಚುನಾವಣೆಗೂ ಮುನ್ನ ನಾನು ಅರಭಾವಿಯಿಂದ ಸುಲಭದಿಂದ ಗೆಲ್ಲುತ್ತೇನೆ ಎಂದು ಹೇಳಿದ್ದೆ. ಆದರೆ ಇಂತಹ ಹೇಳಿಕೆ ನೀಡಲು ನಾನು ದೇವರೇ ಎಂದು ಹಲವರು ಪ್ರಶ್ನಿಸಿದ್ದಾರೆ. ನಾನು ದೇವರಲ್ಲ, ದೇವರ ಮಗ ಎಂದು ಅವರಿಗೆ ಹೇಳಿದ್ದೆ. 2023ರಲ್ಲೂ ನಾನೇ ಗೆಲ್ಲುತ್ತೇನೆಂದು ಈಗಲೂ ಹೇಳುತ್ತಿದ್ದೇನೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!