ಪ್ರಾತಿನಿಧಿಕ ಚಿತ್ರ 
ರಾಜಕೀಯ

ಬಿಜೆಪಿಯ ರೌಡಿ ರಾಜಕೀಯದಿಂದ ರೌಡಿಗಳಿಗೆ ಪೊಲೀಸರೇ ಸೆಲ್ಯೂಟ್ ಹೊಡೆಯುವಂತಾಗಿದೆ: ಕಾಂಗ್ರೆಸ್ ಕಿಡಿ

ಈ ಹಿಂದೆ ರೌಡಿಗಳನ್ನು ಕಂಡರೆ ಪೊಲೀಸರು ಒದ್ದು ಎಳೆದು ತರುತ್ತಿದ್ದರು. ಆದರೆ, ಈಗ ಬಿಜೆಪಿಯ ರೌಡಿ ರಾಜಕೀಯದಿಂದಾಗಿ ಅದೇ ರೌಡಿಗಳಿಗೆ ಪೊಲೀಸರೇ ಸೆಲ್ಯೂಟ್ ಹೊಡೆಯುವಂತಾಗಿದೆ ಎಂದು ರಾಜ್ಯ ಕಾಂಗ್ರೆಸ್ ಬಿಜೆಪಿ ವಿರುದ್ಧ ಕಿಡಿಕಾರಿದೆ.

ಬೆಂಗಳೂರು: ಈ ಹಿಂದೆ ರೌಡಿಗಳನ್ನು ಕಂಡರೆ ಪೊಲೀಸರು ಒದ್ದು ಎಳೆದು ತರುತ್ತಿದ್ದರು. ಆದರೆ, ಈಗ ಬಿಜೆಪಿಯ ರೌಡಿ ರಾಜಕೀಯದಿಂದಾಗಿ ಅದೇ ರೌಡಿಗಳಿಗೆ ಪೊಲೀಸರೇ ಸೆಲ್ಯೂಟ್ ಹೊಡೆಯುವಂತಾಗಿದೆ ಎಂದು ರಾಜ್ಯ ಕಾಂಗ್ರೆಸ್ ಬಿಜೆಪಿ ವಿರುದ್ಧ ಕಿಡಿಕಾರಿದೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ರೌಡಿಗಳ ವಿರುದ್ಧ ಕಾರ್ಯಾಚರಣೆ ನಡೆಸುವ ಪೊಲೀಸರ ನೈತಿಕ ಸ್ಥೈರ್ಯವನ್ನೇ ಬಿಜೆಪಿ ಕಿತ್ತುಕೊಂಡಿದೆ. 'ಇಂದಿನ ರೌಡಿಗಳೇ ಮುಂದಿನ ಬಿಜೆಪಿ ನಾಯಕರು' ಎಂಬಂತಾಗಿದೆ.

ಕೋಮು ರಾಜಕಾರಣ ಸಾಲದು ಎಂಬಂತೆ ರೌಡಿ ರಾಜಕೀಯ ಮಾಡಲು ಹೊರಟಿದೆ ಬಿಜೆಪಿ. ರಾಮಾರಾಜ್ಯದ ಹೆಸರು ಹೇಳುತ್ತಿದ್ದ ಬಿಜೆಪಿ ನಾಯಕರು ರೌಡಿರಾಜ್ಯ ಮಾಡಲು ಹೊರಟಿದ್ದಾರೆ. ಅಪ್ಪು ಎಂಬ ರೌಡಿ ಮೇಲಿದ್ದ ರೌಡಿ ಶೀಟ್ ತೆಗೆಸಿ ರಾಜಕಾರಣಿಯ ಮುಖವಾಡ ತೋಡಿಸಿದ್ದೇಕೆ ಬಸವರಾಜ ಬೊಮ್ಮಾಯಿ ಅವರೇ. ಬಿಜೆಪಿ ಸೇರುವ ಎಲ್ಲಾ ರೌಡಿಗಳ ಕೇಸ್‌ಗಳನ್ನೂ ಮನ್ನಾ ಮಾಡುವಿರಾ? ಸದ್ದಿಲ್ಲದೆ ಬಿಜೆಪಿಯ ರೌಡಿ ಮೋರ್ಚಾ ರೂಪುಗೊಳ್ಳುತ್ತಿದೆ, ಜೈಲಿನಲ್ಲಿರಬೇಕಾದವರು ಬಿಜೆಪಿ ಕಚೇರಿಯಲ್ಲಿದ್ದಾರೆ ಎಂದು ದೂರಿದೆ.

ರೌಡಿಗಳಿಗೆ ಪ್ರೋತ್ಸಾಹಿಸುವುದಿಲ್ಲ ಎಂದು ಯೂಟರ್ನ್ ಹೇಳಿಕೆ ನೀಡಿದ್ದ ಬೊಮ್ಮಾಯಿ ಅವರೇ, ಆನೇಕಲ್‌ ಪುರಸಭೆಗೆ ರೌಡಿ ಶೀಟರ್‌ನನ್ನು ನಿಮ್ಮದೇ ಸರ್ಕಾರ ನಾಮನಿರ್ದೇಶನ ಮಾಡಿರುವುದೇಕೆ? ದಮ್ಮು ತಾಕತ್ತಿದ್ದರೆ ಉತ್ತರಿಸಿ. ಸಿಎಂ ಬೊಮ್ಮಾಯಿಯವರು ದಮ್ಮು, ತಾಕತ್ತು ಇದ್ರೆ ಬನ್ನಿ ಎಂದು ರೌಡಿಸಂ ಭಾಷೆಯಲ್ಲಿ ಸವಾಲು ಹಾಕಿದ್ದರ ಹಿಂದೆ ನೈಜ ರೌಡಿಸಂ ಇದೆ ಎಂದು ಈಗ ಬೆಳಕಿಗೆ ಬರುತ್ತಿದೆ. ರೌಡಿ ಮೋರ್ಚಾ ಕಟ್ಟಿಕೊಂಡು ಈ ಸವಾಲು ಹಾಕಿದಿರಾ? ಬಿಜೆಪಿ ಕಚೇರಿ ಈಗ ರೌಡಿಗಳ ಅಡ್ಡೆಯಾಗಿದೆ, ಬೊಮ್ಮಾಯಿಯವರು ರೌಡಿಗಳಿಗೆ ಮಹಾಗುರುವಿನಂತೆ ಆಗಿದ್ದಾರೆ ಎಂದು ಕಾಂಗ್ರೆಸ್ ಮುಖ್ಯಮಂತ್ರಿ ವಿರುದ್ಧ ಕಿಡಿಕಾರಿದೆ.

ಒಂದೆಡೆ ರೌಡಿಗಳನ್ನು ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲ ಎನ್ನುತ್ತಿರುವ ಬಿಜೆಪಿ ನಾಯಕರು, ಮತ್ತೊಂದೆಡೆ ರೌಡಿಗಳ ಪಕ್ಷ ಸೇರ್ಪಡೆ ಅಭಿಯಾನವನ್ನೇ ನಡೆಸುತ್ತಿದ್ದಾರೆ. ಸಂಸದ ಪ್ರತಾಪ್ ಸಿಂಹ ಅವರು ಬೆತ್ತನಗೆರೆ ಶಂಕರ ಎಂಬ ರೌಡಿ ಶೀಟರ್‌ನನ್ನು ಪಕ್ಷದ ಬಾವುಟ ನೀಡಿ ಬರಮಾಡಿಕೊಂಡದ್ದಾರೆ. ರೌಡಿರಾಜ್ಯ ಕಟ್ಟಲು ಹೊರಟಿದ್ದೀರಾ? ಇದೇನಾ ನಿಮ್ಮ ಸಂಸ್ಕೃತಿ ಎಂದು ಪ್ರಶ್ನಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

ಪ್ರತಿಭಟನಾಕಾರರಿಗೆ ಬಿಗ್ ಶಾಕ್; ಇನ್ಮುಂದೆ ದೆಹಲಿ Jantar Mantarನಲ್ಲಿ ಧರಣಿ ನಡೆಸುವಂತಿಲ್ಲ..!

'ಹೃದಯದ ಪ್ರಮುಖ ರಕ್ತನಾಳದಲ್ಲಿ ರಕ್ತದ ಹೆಪ್ಪುಗಟ್ಟುವಿಕೆ'; ಮರಣೋತ್ತರ ಪರೀಕ್ಷೆಯಲ್ಲಿ ನಟ ನಾನಾ ಪಟೇಕರ್ ಸಾವಿನ ಕಾರಣ ಬಹಿರಂಗ!

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!