ರಾಜಕೀಯ

ಖರ್ಗೆ ಭೇಟಿ ಮಾಡಿದ ವಿಶ್ವನಾಥ್: ಸದ್ದಿಲ್ಲದೆ ಬಿಜೆಪಿ 'ಗೂಡು' ಬಿಟ್ಟು ಹಾರಲು ಸಿದ್ದವಾಯ್ತಾ 'ಹಳ್ಳಿ ಹಕ್ಕಿ'? ರಾಜ್ಯ ರಾಜಕೀಯದಲ್ಲಿ ಸಂಚಲನ!

Shilpa D

ಬೆಂಗಳೂರು: ಬಿಜೆಪಿಯಲ್ಲಿದ್ದರೂ ಅಕ್ಷರಶಃ ವಿರೋಧ ಪಕ್ಷದ ನಾಯಕನಾಗಿರೋ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಸದ್ದಿಲ್ಲದೆ ಮರಳಿ ಕಾಂಗ್ರೆಸ್ ಗೂಡಿಗೆ ಸೇರುವ ಲಕ್ಷಣಗಳು ಸ್ಪಷ್ಟವಾಗುತ್ತಿವೆ.

ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ವಿಶ್ವನಾಥ್ ಭೇಟಿ ಮಾಡಿರುವ ಹಿನ್ನೆಲೆಯಲ್ಲಿ ಮತ್ತೆ ವಿಶ್ವನಾಥ್ ಪಕ್ಷಾಂತರ ಮಾಡುತ್ತಾರೆ ಎಂಬ ಸುದ್ದಿ ದಟ್ಟವಾಗಿದೆ. ಬಾಯ್ಬಿಟ್ರೆ ಸಾಕು ಸ್ವಪಕ್ಷದ​ ವಿರುದ್ಧ ಕಿಡಿಕಾರುವ ಬಿಜೆಪಿ ವಿಧಾನಪರಿಷತ್ ಸದಸ್ಯ ವಿಶ್ವನಾಥ್, ಇದೀಗ ಸದ್ದಿಲ್ಲದೆ ಮರಳಿ ಕಾಂಗ್ರೆಸ್ ಸೇರುವ ಲಕ್ಷಣಗಳು ಕಾಣುತ್ತಿವೆ. ದೆಹಲಿಯಲ್ಲಿ ನಡೆದ ಈ ಅನಿರೀಕ್ಷಿತ ಬೆಳವಣಿಗೆಗೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ವಿಶ್ವನಾಥ್ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದು , ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಸಿದ್ದರಾಮಯ್ಯನವರ ನಡೆಯಿಂದ ಬೇಸತ್ತು ಕಾಂಗ್ರೆಸ್ ತೊರೆದಿದ್ದ ಹೆಚ್​ ವಿಶ್ವನಾಥ್ ಅವರು ಏಕಾಏಕಿ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದು, ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಹುಣಸೂರು ಉಪಚುನಾವಣೆಯಲ್ಲಿ ವಿಶ್ವನಾಥ್ ಸೋತ ಬಳಿಕ ಅವರನ್ನು ಸಮಾಧಾನಪಡಿಸಲೆಂದೇ ಬಿಜೆಪಿ ಅವರಿಗೆ ಸಾಹಿತ್ಯ ಕೋಟಾದಲ್ಲಿ ವಿಧಾನ ಪರಿಷತ್ ಸದಸ್ಯನಾಗಿ ಮಾಡಿತ್ತು. ಆದರೂ ವಿಶ್ವನಾಥ್, ಸ್ವಪಕ್ಷದ ಸರ್ಕಾರದ ಬಹಿರಂಗವಾಗಿ ಟೀಕಿಸುತ್ತಲೇ ಇದ್ದಾರೆ. ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಹೂಗುಚ್ಛ ನೀಡಿ ಶುಭ ಹಾರೈಸಿದ್ದಾರೆ. ಇದು ಬರೀ ಶುಭ ಹಾರೈಕೆಯ ಭೇಟಿಯಲ್ಲ. ಇದರ ಹಿಂದೆ ಬೇರೆಯದ್ದೇ ರಾಜಕೀಯ ಲೆಕ್ಕಚಾರಗಳು ಅಡಗಿವೆ.

SCROLL FOR NEXT