ಮುನಿಯಪ್ಪ 
ರಾಜಕೀಯ

‘ಸಿದ್ದು ಸಿಎಂ’ ಪ್ರಚಾರ ನಿಲ್ಲಿಸಿ, ಕಾಂಗ್ರೆಸ್ ಗೆಲುವಿನತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮುನಿಯಪ್ಪ

ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂಬ ಪ್ರಚಾರ ನಿಲ್ಲಿಸಿ, ಕಾರ್ಯಕರ್ತರು ಪಕ್ಷದ ಗೆಲುವಿನತ್ತ ಗಮನಹರಿಸಬೇಕೆಂದು ಪಕ್ಷದ ಹಿರಿಯ ನಾಯಕ ಕೆ.ಹೆಚ್.ಮುನಿಯಪ್ಪ ಅವರು ಹೇಳಿದ್ದಾರೆ.

ಕೋಲಾರ: ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂಬ ಪ್ರಚಾರ ನಿಲ್ಲಿಸಿ, ಕಾರ್ಯಕರ್ತರು ಪಕ್ಷದ ಗೆಲುವಿನತ್ತ ಗಮನಹರಿಸಬೇಕೆಂದು ಪಕ್ಷದ ಹಿರಿಯ ನಾಯಕ ಕೆ.ಹೆಚ್.ಮುನಿಯಪ್ಪ ಅವರು ಹೇಳಿದ್ದಾರೆ.

ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂಬ ವರದಿಗಳ ನಂತರ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿರುವ ಮುನಿಯಪ್ಪ ಅವರು, ಮುಖ್ಯಮಂತ್ರಿ ಸ್ಥಾನಕ್ಕೆ ಇನ್ನೂ 10 ಮಂದಿ ಆಕಾಂಕ್ಷಿಗಳಿದ್ದಾರೆ. ಹೀಗಾಗಿ ಪಕ್ಷದ ಕಾರ್ಯಕರ್ತರು ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂಬ ಪ್ರಚಾರ ನಿಲ್ಲಿಸಿ ಪಕ್ಷದ ಗೆಲುವಿನತ್ತ ಗಮನಹರಿಸಬೇಕಿದೆ. ಪಕ್ಷದ ಗಮನ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯತ್ತ ಇರಬೇಕು ಎಂದು ಹೇಳಿದ್ದಾರೆ.

ಲೋಕಸಭಾ ಸೋಲು ಕುರಿತು ರಾಜ್ಯ ಕಾಂಗ್ರೆಸ್ ನಾಯಕರಾಗಲಿ ಅಥವಾ ಪಕ್ಷದ ಹೈಕಮಾಂಡ್ ಆಗಲಿ ಯಾವುದೇ ಕ್ರಮ ಕೈಗೊಳ್ಳದೇ ಇರುವುದು, ಗಮನ ಹರಿಸದಿರುವುದು ಬಹಳ ನೋವಿನ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸುತ್ತಿರುವ ಕುರಿತು ಮಾತನಾಡಿ, ಹಿರಿಯ ನಾಯಕರನ್ನು ನಾನು ಸ್ವಾಗತಿಸುತ್ತೇನೆ. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಬಲಗೊಳ್ಳಬೇಕೆಂಬುದಷ್ಟೇ ನನ್ನ ಏಕೈಕ ಕಾಳಜಿಯಾಗಿದೆ ಎಂದಿದ್ದಾರೆ.

ಕೆಲ ಮುಖಂಡರು ಗ್ರಾಮ, ಹೋಬಳಿ ಮಟ್ಟದಲ್ಲಿ ಸಭೆ ನಡೆಸಿ ಗುಂಪುಗಾರಿಕೆ ಮಾಡುತ್ತಿದ್ದು, ಇದನ್ನೂ ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.

ನಾನು ಬಾಯಿಬಿಟ್ಟರೆ ಕಾಂಗ್ರೆಸ್‌ನಲ್ಲಿ ಬಿರುಕು ಮೂಡುತ್ತದೆ. ಎಲ್ಲರೂ ಒಗ್ಗೂಡಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಎಲ್ಲಾ 11 ವಿಧಾನಸಭಾ ಕ್ಷೇತ್ರಗಳು ಕಾಂಗ್ರೆಸ್ ಪರವಾಗಿ ಮತ ಚಲಾಯಿಸುವಂತೆ ನೋಡಿಕೊಳ್ಳಬೇಕು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel