ಅಂಜನಾದ್ರಿ ಬೆಟ್ಟದಲ್ಲಿ ಜನಾರ್ಧನ ರೆಡ್ಡಿ 
ರಾಜಕೀಯ

ರಾಜಕೀಯ ಮರುಪ್ರವೇಶಕ್ಕೆ ನಿರ್ಧಾರ: ಚುನಾವಣೆಯಲ್ಲಿ ಸ್ಪರ್ಧಿಸಲು ಗಂಗಾವತಿ ಕ್ಷೇತ್ರದತ್ತ ಜನಾರ್ಧನ ರೆಡ್ಡಿ ಚಿತ್ತ

ಮಾಜಿ ಸಚಿವ, ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಅವರು ರಾಜ್ಯ ರಾಜಕಾರಣಕ್ಕೆ ‘ಮರುಪ್ರವೇಶ’ ಮಾಡುವ ನಿರ್ಧಾರಕ್ಕೆ ಬಂದಿದ್ದು, ಈ ಬೆಳವಣಿಗೆ ಬಿಜೆಪಿ ಮತ್ತು ಕಾಂಗ್ರೆಸ್‌ನಲ್ಲಿ ಕಳವನ್ನುಂಟು ಮಾಡಿದೆ.

ಬಳ್ಳಾರಿ: ಮಾಜಿ ಸಚಿವ, ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಅವರು ರಾಜ್ಯ ರಾಜಕಾರಣಕ್ಕೆ ‘ಮರುಪ್ರವೇಶ’ ಮಾಡುವ ನಿರ್ಧಾರಕ್ಕೆ ಬಂದಿದ್ದು, ಈ ಬೆಳವಣಿಗೆ ಬಿಜೆಪಿ ಮತ್ತು ಕಾಂಗ್ರೆಸ್‌ನಲ್ಲಿ ಕಳವನ್ನುಂಟು ಮಾಡಿದೆ.

ಕೊಪ್ಪಳ ಜಿಲ್ಲೆಯ ಗಂಗಾವತಿಯಿಂದ ತಮ್ಮ ರಾಜಕೀಯದ ಎರಡನೇ ಇನ್ನಿಂಗ್ಸ್ ಆರಂಭಿಸಲು ಜನಾರ್ಧನ ರೆಡ್ಡಿಯವರು ನಿರ್ಧರಿಸಿದ್ದಾರೆ. ಈ ಮೂಲಕ ತಮ್ಮದೇ ಪಕ್ಷವನ್ನು ಪ್ರಾರಂಭಿಸುವುದು, ಆಂಧ್ರಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿಯವರ ವೈಎಸ್ಆರ್ ಕಾಂಗ್ರೆಸ್ ಪಕ್ಷವನ್ನು ಸೇರುವುದು ಅಥವಾ ಬಿಜೆಪಿಯಲ್ಲಿ ಉಳಿಯುವ ಯಾವುದೇ ಆಯ್ಕೆಯನ್ನು ಜನಾರ್ಧನ ರೆಡ್ಡಿಯವರು ಆರಿಸಿಕೊಳ್ಳಬಹುದಾಗಿದೆ.

ಸಾರಿಗೆ ಸಚಿವ ಬಿ.ಶ್ರೀರಾಮುಲು ಹಾಗೂ ಬಿಜೆಪಿ ಜತೆಗಿನ ಸಂಬಂಧ ಹಳಸಿದ ಕಾರಣ ಅವರು ಕೊಪ್ಪಳದತ್ತ ಗಮನ ಹರಿಸಿದ್ದು, ಬಳ್ಳಾರಿಯತ್ತ ಗಮನ ಹರಿಸುತ್ತಿಲ್ಲ ಎನ್ನಲಾಗಿದೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಜನಾರ್ಧನ ರೆಡ್ಡಿಯವರಿಗೆ, ಕರ್ನಾಟಕದ ಬಳ್ಳಾರಿ ಮತ್ತು ಆಂಧ್ರಪ್ರದೇಶದ ಅನಂತಪುರ ಮತ್ತು ಕಡಪ ಪ್ರವೇಶಿಸದಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

ಇದರಂತೆ ರಾಜಕೀಯ ಪ್ರವೇಶಿಸಲು ನಿರ್ಧರಿಸಿರುವ ಜನಾರ್ಧನ ರೆಡ್ಡಿಯವರು ತಮ್ಮ ಉದ್ದೇಶದಂತೆ ನಡೆಯಲು ಗಂಗಾವತಿಯ ಕನಕಗಿರಿ ರಸ್ತೆಯಲ್ಲಿರುವ ವಡ್ಡರಟ್ಟಿಯಲ್ಲಿ ಮನೆಯೊಂದನ್ನು ಖರೀದಿ ಮಾಡಿದ್ದಾರೆ. ಅಲ್ಲಿಂದಲೇ ತಮ್ಮ ರಾಜಕೀಯ ಜೀವನವನ್ನು ಪುನರಾರಂಭಿಸಲು ಮುಂದಾಗಿದ್ದಾರೆ. ಹನಮ ಜಯಂತಿಯಂದು ರೆಡ್ಡಿಯವರು ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿದ್ದರು.

ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡಿದ್ದೇ ಆದರೆ, ಜನಾರ್ಧನ ರೆಡ್ಡಿ ಅಥವಾ ಅವರ ಪತ್ನಿ ಸ್ಪರ್ಧಿಸುತ್ತಾರೆಂದು ಹಾಗೂ ಟಿಕೆಟ್ ನೀಡದಿದ್ದರೆ ತಮ್ಮದೇ ಆದ ಪಕ್ಷವನ್ನು ಪ್ರಾರಂಭಿಸಬಹುದು ಎಂಬ ಗುಸುಗುಸು ಮಾತುಗಳು ಆರಂಭವಾಗಿದೆ. ಈ ಬೆಳವಣಿಗೆ ಬಿಜೆಪಿಯಲ್ಲಿ ಕಳವಳವನ್ನುಂಟು ಮಾಡಿದೆ.

ನಿನ್ನೆಯಷ್ಟೇ ಸುದ್ದಿಗಾರರೊಂದಿಗೆ ಮಾತನಾಡಿದ ಜನಾರ್ಧನ ರೆಡ್ಡಿಯವರು, ನನ್ನ ಮುಂದಿನ ರಾಜಕೀಯ ನಡೆ ಬಗ್ಗೆ ಡಿಸೆಂಬರ್ 18 ರ ನಂತರ ಹೇಳುತ್ತೇನೆ. ನನ್ನ ರಾಜಕೀಯ ಪ್ರಯಾಣದ ಮೊದಲ ದಿನದಿಂದಲೂ ನಾನು ಬಿಜೆಪಿಯ ಅನುಯಾಯಿ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ನನಗೆ ಸ್ಫೂರ್ತಿ. ಬಿಜೆಪಿ ವರಿಷ್ಠರ ನಿರ್ಧಾರಕ್ಕಾಗಿ ನಾನು ಕಾಯುತ್ತಿದ್ದೇನೆಂದು ಹೇಳಿದರು.

“ಬೆಂಗಳೂರಿನಲ್ಲಿ ಇರಲು ಇಷ್ಟಪಡದ ಕಾರಣ ನಾನು ಗಂಗಾವತಿವನ್ನು ಆಯ್ಕೆ ಮಾಡಿಕೊಂಡೆ. ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ನನ್ನ ಹೃದಯಕ್ಕೆ ಹತ್ತಿರವಾಗಿದೆ. ನಾನು ನನ್ನ ಜನರಿಗೆ ಸೇವೆ ಸಲ್ಲಿಸಲು ಬಯಸುತ್ತೇನೆ ಎಂದು ತಿಳಿಸಿದರು.

ಜನಾರ್ಧನ ರೆಡ್ಡಿಯವರ ಕುಟುಂಬದ ಸದಸ್ಯರೊಬ್ಬರು ಆಂಧ್ರಪ್ರದೇಶದ ಪಕ್ಷದ ಸಂಸದರಾಗಿರುವ ಕಾರಣ ವೈಎಸ್‌ಆರ್ ಕಾಂಗ್ರೆಸ್‌ನೊಂದಿಗೆ ಕೈಜೋಡಿಸುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT