ಡಿಕೆ ಶಿವಕುಮಾರ್ ಭೇಟಿಯಾದ ಎಚ್‌. ವಿಶ್ವನಾಥ್ 
ರಾಜಕೀಯ

ಖರ್ಗೆ, ಸಿದ್ದರಾಮಯ್ಯ ನಂತರ ಡಿಕೆ ಶಿವಕುಮಾರ್ ಭೇಟಿಯಾದ ಎಚ್‌. ವಿಶ್ವನಾಥ್

ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು...

ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು, ಹಳ್ಳಿ ಹಕ್ಕಿ ಮರಳಿ ಕಾಂಗ್ರೆಸ್ ಗೂಡಿಗೆ ಸೇರುವ ಲಕ್ಷಣಗಳು ಸ್ಪಷ್ಟವಾಗುತ್ತಿವೆ.

ಎಚ್. ವಿಶ್ವನಾಥ್ ಅವರು ಇಂದು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಡಿ. ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದರು. ಕಾಂಗ್ರೆಸ್‌ನ ಹಿರಿಯ ನಾಯಕ ಎಸ್. ಆರ್‌. ಪಾಟೀಲ್ ಸಹ ಜೊತೆಗಿದ್ದರು.

ವಿಶ್ವನಾಥ್ ಅವರು ತಮ್ಮನ್ನು ಭೇಟಿ ಮಾಡಿದ ಬಗ್ಗೆ ಡಿ. ಕೆ. ಶಿವಕುಮಾರ್ ಫೇಸ್‌ಬುಕ್ ಪೋಸ್ಟ್ ಹಾಕಿದ್ದು,  ವಿದೇಶದಿಂದ ಮರಳಿದ ನಂತರ ಎಂದಿನಂತೆ ಭೇಟಿ ಕಾರ್ಯಗಳಲ್ಲಿ ನಿರತನಾಗಿದ್ದೇನೆ. ಮಾಜಿ ಸಚಿವರಾದ ಎಚ್. ವಿಶ್ವನಾಥ್‌ ಅವರು ಇಂದು ಗೃಹ ಕಚೇರಿಯಲ್ಲಿ ನನ್ನನ್ನು ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು. ಇದೇ ವೇಳೆ ಪರಿಷತ್‌ ಮಾಜಿ ಅಧ್ಯಕ್ಷರಾದ ಎಸ್. ಆರ್. ಪಾಟೀಲ್‌ ಅವರು ತಮ್ಮ ಮಗಳ ಮದುವೆಗೆ ಆಗಮಿಸುವಂತೆ ನನ್ನನ್ನು ಆಹ್ವಾನಿಸಿದರು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ

ಹೆಲಿಕಾಪ್ಟರ್‌ನಿಂದ ಉಳಿಯುವಾಗ 2 ತಿಂಗಳ ಮಗುವಿನೊಂದಿಗೆ ಎಡವಿದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪತ್ನಿ ಉಷಾ, Video