ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ ಹೆಚ್ ವಿಶ್ವನಾಥ್ 
ರಾಜಕೀಯ

ಕಾಂಗ್ರೆಸ್ ನಲ್ಲಿ ದಲಿತ ನಾಯಕರಿಗೆ ಮುಖ್ಯಮಂತ್ರಿಯಾಗುವ ಅವಕಾಶವಿದೆ: ಡಿ ಕೆ ಶಿವಕುಮಾರ್

ಪಕ್ಷದಲ್ಲಿ ದಲಿತ ನಾಯಕರಿಗೆ ಮುಖ್ಯಮಂತ್ರಿ ಆಗುವ ಅವಕಾಶವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇತರರಂತೆ ಕಾಂಗ್ರೆಸ್ ನಾಯಕರು ಮುಸ್ಲಿಂ ನಾಯಕ ಅಥವಾ ದಲಿತ ನಾಯಕನನ್ನು ಸಿಎಂ ಮಾಡುವ ಬಗ್ಗೆ ಮಾತನಾಡುವುದಿಲ್ಲ, ಆದರೆ ಅವಕಾಶಗಳಿವೆ ಎಂದು ಶಿವಕುಮಾರ್ ಹೇಳಿದರು. 

ಬೆಂಗಳೂರು: ಪಕ್ಷದಲ್ಲಿ ದಲಿತ ನಾಯಕರಿಗೆ ಮುಖ್ಯಮಂತ್ರಿ ಆಗುವ ಅವಕಾಶವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇತರರಂತೆ ಕಾಂಗ್ರೆಸ್ ನಾಯಕರು ಮುಸ್ಲಿಂ ನಾಯಕ ಅಥವಾ ದಲಿತ ನಾಯಕನನ್ನು ಸಿಎಂ ಮಾಡುವ ಬಗ್ಗೆ ಮಾತನಾಡುವುದಿಲ್ಲ, ಆದರೆ ಅವಕಾಶಗಳಿವೆ ಎಂದು ಶಿವಕುಮಾರ್ ಹೇಳಿದರು. 

ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿ ಹಿಂದುಳಿದ ಸಮುದಾಯದ ನಾಯಕರು ಸಿಎಂ ಆಗಿರುವುದು ಕಾಂಗ್ರೆಸ್‌ನ ಶಕ್ತಿ ಎಂದ ಅವರು, ಕೆ.ಎಚ್.ರಂಗನಾಥ್, ಮಲ್ಲಿಕಾರ್ಜುನ ಖರ್ಗೆ, ಜಿ.ಪರಮೇಶ್ವರ ಸೇರಿದಂತೆ ಹಲವು ನಾಯಕರು ಕಷ್ಟದ ಸಮಯದಲ್ಲಿ ಪಕ್ಷವನ್ನು ಮುನ್ನಡೆಸಿದ್ದಾರೆ ಎಂದರು. ಅತ್ಯಂತ ಹಿರಿಯ ನಾಯಕ ಹಾಗೂ ಅನುಭವಿ ಎಂಬ ಕಾರಣಕ್ಕೆ ಖರ್ಗೆ ಅವರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ದೊರಕಿಸಿಕೊಡುವಲ್ಲಿ ಖರ್ಗೆ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದರು.

ರಾಜ್ಯದ ಅನೇಕರು ಕೆಲಸಕ್ಕಾಗಿ ವಿದೇಶಕ್ಕೆ ಹೋಗುತ್ತಿದ್ದಾರೆ, ಅಲ್ಲಿಂದ ತಮ್ಮ ಕುಟುಂಬಕ್ಕೆ ಹಣ ಕಳುಹಿಸುತ್ತಿದ್ದಾರೆ, ಆದರೆ ಅವರ ಹಿತಾಸಕ್ತಿಗಳನ್ನು ರಕ್ಷಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಇತ್ತೀಚೆಗೆ ಯುನೈಟೆಡ್ ಅರಬ್ ಎಮಿರೇಟ್ಸ್‌ನ ಶಾರ್ಜಾಕ್ಕೆ ಭೇಟಿ ನೀಡಿದ ಡಿ ಕೆ ಶಿವಕುಮಾರ್ ಹೇಳಿದರು. ಅಲ್ಲಿ ವಾಸಿಸುತ್ತಿರುವ ರಾಜ್ಯದ ಜನರು ಸಾಂಕ್ರಾಮಿಕ ಸಮಯದಲ್ಲಿ ಮರಳಲು ಬಯಸಿದಾಗ ಸರ್ಕಾರ ಬಿಜೆಪಿ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಲಿಲ್ಲ. ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಂತವರ ಕಲ್ಯಾಣಕ್ಕೆ ಪ್ರತ್ಯೇಕ ಇಲಾಖೆಯನ್ನು ತರಲಾಗುವುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT