ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 
ರಾಜಕೀಯ

ಪ್ರಚಾರ ಮಾಡದೆಯೇ ಕಾಂಗ್ರೆಸ್ ಗೆಲ್ಲಲಿದೆ ಎಂದ ಸಿದ್ದರಾಮಯ್ಯ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ

ರಾಜ್ಯದಲ್ಲಿ 2023ರ ವಿಧಾನಸಭೆ ಚುನಾವಣೆಯಲ್ಲಿ ಪ್ರಚಾರ ಮಾಡದೆಯೇ ಕಾಂಗ್ರೆಸ್ ಗೆಲ್ಲಲಿದೆ ಎಂಬ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ತಿರುಗೇಟು ನೀಡಿದ್ದಾರೆ.

ಮೈಸೂರು/ಮಂಗಳೂರು: ರಾಜ್ಯದಲ್ಲಿ 2023ರ ವಿಧಾನಸಭೆ ಚುನಾವಣೆಯಲ್ಲಿ ಪ್ರಚಾರ ಮಾಡದೆಯೇ ಕಾಂಗ್ರೆಸ್ ಗೆಲ್ಲಲಿದೆ ಎಂಬ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ತಿರುಗೇಟು ನೀಡಿದ್ದಾರೆ.

ಸುತ್ತೂರು ಮಠಕ್ಕೆ ತೆರಳುವ ಮುನ್ನ ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, '2023ರಲ್ಲಿ ತಾವು ಚುನಾವಣೆಯಲ್ಲಿ ಗೆಲ್ಲುವುದಿಲ್ಲ, ತಮ್ಮ ಪಕ್ಷಕ್ಕೆ ಬಹುಮತ ಬರುವುದಿಲ್ಲ ಎಂಬ ಅರಿವಿರುವ ಸಿದ್ದರಾಮಯ್ಯ ಅವರು ಈ ಹೇಳಿಕೆ ನೀಡಿದ್ದಾರೆ' ಎಂದು ಹೇಳಿದರು.

ಬಿಜೆಪಿ ಜನಸಂಪರ್ಕ ಕಾರ್ಯಕ್ರಮ ಆಯೋಜಿಸುತ್ತಿದೆ ಮತ್ತು ಪಕ್ಷವನ್ನು ತಳಮಟ್ಟದಿಂದ ಸಂಘಟಿಸುತ್ತಿದೆ. ಹಳೆ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದೇವೆ ಎಂದ ಅವರು, ರಾಜ್ಯದಲ್ಲಿ ಅವಧಿಪೂರ್ವ ಚುನಾವಣೆಯ ಊಹಾಪೋಹಗಳನ್ನು ತಳ್ಳಿಹಾಕಿದರು.

ರಾಜ್ಯದಲ್ಲಿ 15 ಟೆರರ್ ಸ್ಲೀಪರ್ ಸೆಲ್‌ಗಳ ಬಗ್ಗೆ ಮಾಹಿತಿ ಇದೆ: ಸಿಎಂ

ನಮಗೆ 15 ಭಯೋತ್ಪಾದಕ ಸ್ಲೀಪರ್ ಸೆಲ್‌ಗಳ ಬಗ್ಗೆ ಮಾಹಿತಿ ಇದೆ ಮತ್ತು ಯಾರು ಭಾಗಿಯಾಗಿದ್ದಾರೆ ಎಂಬುದನ್ನು ನಾವು ಕಂಡುಕೊಂಡಿದ್ದೇವೆ. ಅಂತಹ ಸ್ಲೀಪರ್ ಸೆಲ್‌ಗಳೊಂದಿಗೆ ಸಂಪರ್ಕ ಹೊಂದಿರುವ ಕೆಲವರು ತಿಹಾರ್ ಮತ್ತು ಇತರ ಜೈಲುಗಳಲ್ಲಿದ್ದಾರೆ. ರಾಷ್ಟ್ರೀಯ ತನಿಖಾ ದಳದಂತಹ ರಾಜ್ಯ ಮತ್ತು ಕೇಂದ್ರ ಏಜೆನ್ಸಿಗಳು ವಿದೇಶದಿಂದ ಅವರ ಸಂಪರ್ಕಗಳು ಮತ್ತು ನಿಧಿ ಮೂಲಗಳ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿವೆ ಎಂದು ಬೊಮ್ಮಾಯಿ ಶನಿವಾರ ಮಂಗಳೂರಿನಲ್ಲಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!