ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ. ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಕರ್ನಾಟಕದಲ್ಲಿ ಜೆಡಿಎಸ್ ಮಾತ್ರ ಕಾಂಗ್ರೆಸ್ ಮತ್ತು ಬಿಜೆಪಿಗೆ ಪರ್ಯಾಯ ಎಂದಿದ್ದಾರೆ.
ಕಾಂಗ್ರೆಸ್ ನಲ್ಲಿ ಒಳ ಜಗಳವಿದ್ದು, ಬಿಜೆಪಿ ಆಡಳಿತದಿಂದ ಜನ ಬೇಸತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವರ್ಕ್ ಔಟ್ ಇಲ್ಲಿ ಕೆಲಸ ಮಾಡಲ್ಲ ಎಂದರು.
ಇದನ್ನೂ ಓದಿ: 'ಖಾನ್' ಗ್ರೆಸ್ ಹಣಿಯಲು 'ದಳ'ಪತಿ ತಂತ್ರ; ಸಾಮೂಹಿಕವಾಗಿ 'ಕೈ' ಕೊಟ್ಟು 'ತೆನೆ' ಹಿಡಿದ ಚಾಮರಾಜಪೇಟೆ ಮುಖಂಡರು
ಜನರು ಈಗಾಗಲೇ ತಮ್ಮ ಮನಸನ್ನು ಬದಲಾಯಿಸಿಕೊಂಡಿದ್ದು, ಮುಂದಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಹೆಚ್ಚಿನ ಅಂತರದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ಸಲಾಮ್ ಆರತಿ ಹೆಸರು ಬದಲಾವಣೆ ಕುರಿತಂತೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಬಿಜೆಪಿ ನೈಜ ವಿಚಾರಗಳತ್ತ ಗಮನ ಹರಿಸುತ್ತಿಲ್ಲ. ಅದಕ್ಕಾಗಿ ಅವರು ಇಂತಹ ವಿಚಾರಗಳತ್ತ ಗಮನ ಹರಿಸಿದ್ದಾರೆ. ಇತಿಹಾಸ ಮತ್ತು ನಮ್ಮ ಸಂಸ್ಕೃತಿಯನ್ನು ಬದಲಾಯಿಸಲು ಅವರು ಬಯಸಿದ್ದಾರೆ ಎಂದರು.