ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆ 55 ಸ್ಥಾನ ಎಂದು ಬಿಜೆಪಿಯ ಆಂತರಿಕ ಸಮೀಕ್ಷೆ ಭವಿಷ್ಯ ನುಡಿದಿದೆ: ಹೆಚ್'ಡಿ ಕುಮಾರಸ್ವಾಮಿ

2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ 55 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದು ಬಿಜೆಪಿಯ ಆಂತರಿಕ ಸಮೀಕ್ಷೆ ಭವಿಷ್ಯ ನುಡಿದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ
Manjula VN
Updated On : 12 Dec 2022, 12:57 pm

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ 55 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದು ಬಿಜೆಪಿಯ ಆಂತರಿಕ ಸಮೀಕ್ಷೆ ಭವಿಷ್ಯ ನುಡಿದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಭಾನುವಾರ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮತ್ತು ಬಿಜೆಪಿಯ ಸುಮಾರು 50 ಮುಖಂಡರು ಜೆಡಿಎಸ್‌ಗೆ ಸೇರ್ಪಡೆಗೊಂಡರು. ಚಾಮರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದರಾಜು, ಮಾಜಿ ಉಪಮೇಯರ್ ರಾಮೇಗೌಡ, ಮಾಜಿ ಕಾರ್ಪೊರೇಟರ್ ಗೌರಮ್ಮ ಸೇರಿದಂತೆ ಹಲವರು ಪಕ್ಷಕ್ಕೆ ಸೇರ್ಪಡೆಗೊಂಡರು.

ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರಸ್ವಾಮಿಯವರು, ಚುನಾವಣೆಯಲ್ಲಿ ಜೆಡಿಎಸ್ 55 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದು ಬಿಜೆಪಿಯ ಆಂತರಿಕ ಸಮೀಕ್ಷೆ ಭವಿಷ್ಯ ನುಡಿದಿದೆ. ಆದರೆ, ಪಂಚರತ್ನ ಯಾತ್ರೆಗೆ ದೊರೆತ ಅಭೂತಪೂರ್ವ ಪ್ರತಿಕ್ರಿಯೆಯನ್ನು ಪರಿಗಣಿಸಿ ಪಕ್ಷ 123 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

Advertisement

Advertisement

ಇದನ್ನೂ ಓದಿ: ರಾಜ್ಯ ವಿಧಾನಸಭೆ ಚುನಾವಣಾ ವಿಶ್ಲೇಷಣೆ: ಕಾಂಗ್ರೆಸ್ ಪಕ್ಷಕ್ಕೆ 55-60 ಸ್ಥಾನ ಖಚಿತ; ಬಿಜೆಪಿ 70-75 ಕ್ಷೇತ್ರ ಗೆಲ್ಲಲು ಶಕ್ತ; 15-20ಕ್ಕೆ ಜೆಡಿಎಸ್ ತೃಪ್ತ!

ಎರಡು ತಿಂಗಳಿಗೊಮ್ಮೆ ಆಂತರಿಕ ಸಮೀಕ್ಷೆ ಬಳಿಕ ರಾಷ್ಟ್ರೀಯ ಪಕ್ಷಗಳು ನಾನಾ ತಂತ್ರಗಳನ್ನು ಹೆಣೆಯುತ್ತಿವೆ. ಸಮೀಕ್ಷೆಗಳು ಜೆಡಿಎಸ್‌ನ ಪಥವು ಮೇಲ್ಮುಖವಾಗಿದೆ ಎಂದು ತೋರಿಸುತ್ತಿದೆ ಎಂದು ತಿಳಿಸಿದರು.

ನಂತರ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು, ಕುಮಾರಸ್ವಾಮಿ ನೇತೃತ್ವದ ಪಂಚರತ್ನ ಅಭಿಯಾನದಿಂದ ಜೆಡಿಎಸ್ ಶಕ್ತಿ ಮತ್ತಷ್ಟು ಹೆಚ್ಚಾಗುತ್ತಿದೆ ಎಂದು ಹೇಳಿದರು.

ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ವಿವಿಧ ಬೆಳವಣಿಗೆಗಳ ನಡುವೆ ಜೆಡಿಎಸ್ ತನ್ನ ಗುರಿಯತ್ತ ಗಮನಹರಿಸಬೇಕು ಎಂದು ಸಲಹೆ ನೀಡಿದರು.

ಇದನ್ನೂ ಓದಿ: ಕುಮಾರಸ್ವಾಮಿ ಮತ್ತೆ ಸಿಎಂ ಆಗುವುದು ಸೂರ್ಯ ಚಂದ್ರರಷ್ಟೇ ಸತ್ಯ; ಮಾಜಿ ಶಾಸಕರು ಏನು ಮಾಡಿದರೂ ಎಚ್.ಡಿ.ಕೆ ಯನ್ನು ಅಲುಗಾಡಿಸಲಾಗದು!

ಇದೇ ವೇಳೆ ಚಾಮರಾಜಪೇಟೆ ಕ್ಷೇತ್ರವನ್ನು ಜೆಡಿಎಸ್ ಗೆಲ್ಲುವುದು ಖಚಿತ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಚಾಮರಾಜಪೇಟೆ ಬೆಂಗಳೂರಿನ ಪ್ರಮುಖ ಕ್ಷೇತ್ರಗಳಲ್ಲಿ ಒಂದಾಗಿದ್ದು, ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಅವರ ಅಭಿಮಾನಿ ಮತ್ತು ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರು, ಕ್ಷೇತ್ರದ ಕುರಿತು ಜೆಡಿಎಸ್'ಗೆ ಆಗಾಗ್ಗೆ ಸವಾಲು ಹಾಕುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement