ಸಂಗ್ರಹ ಚಿತ್ರ 
ರಾಜಕೀಯ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಂದರೂ ಕುರ್ಚಿ ಬಿಟ್ಟು ಎದ್ದು ನಿಲ್ಲದ ಸಿದ್ದರಾಮಯ್ಯ: ವಿಡಿಯೋ ವೈರಲ್

ಕಲ್ಯಾಣ ಕ್ರಾಂತಿ ಸಮಾವೇಶ ಪಾಲ್ಗೊಳ್ಳಲು ವೇದಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಗಮಿಸಿದರೂ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಎದ್ದು ನಿಲ್ಲದೆ ಅಗೌರವ ತೋರಿದ್ದಾರೆಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕಲಬುರಗಿ: ಕಲ್ಯಾಣ ಕ್ರಾಂತಿ ಸಮಾವೇಶ ಪಾಲ್ಗೊಳ್ಳಲು ವೇದಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಗಮಿಸಿದರೂ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಎದ್ದು ನಿಲ್ಲದೆ ಅಗೌರವ ತೋರಿದ್ದಾರೆಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಕಲಬುರಗಿಗೆ ಖರ್ಗೆ ಅವರ ಚೊಚ್ಚಲ ಭೇಟಿ ಇದಾಗಿತ್ತು. ಈ ಹಿನ್ನೆಲೆಯಲ್ಲಿ ಕಲ್ಯಾಣ-ಕರ್ನಾಟಕದ ಏಳು ಜಿಲ್ಲಾ ಕಾಂಗ್ರೆಸ್ ಘಟಕಗಳು ಶನಿವಾರ ಅದ್ಧೂರಿ ಸ್ವಾಗತ ಕೋರುವ ಸಮಾವೇಶವನ್ನು ಆಯೋಜಿಸಿದ್ದವು.

ಖರ್ಗೆ ಅವರು ವೇದಿಕೆ ಬಳಿ ಬಂದಾಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತಿತರ ಮುಖಂಡರು ಎದ್ದು ನಿಂತು ಗೌರವ ಸೂಚಿಸಿದರು. ಖರ್ಗೆ ಅವರನ್ನು ವೇದಿಕೆಗೆ ಕರೆತರಲು ಡಿಕೆ.ಶಿವಕುಮಾರ್ ಅವರು ಮೆಟ್ಟಿಲು ಬಳಿ ತೆರಳಿದರು. ಆದರೆ ಸಿದ್ದರಾಮಯ್ಯ ಅವರು ಮಾತ್ರ ಕುಳಿತಿದ್ದ ಕುರ್ಚಿಯಿಂದ ಮೇಲೆ ಎದ್ದು ನಿಂತಿರಲಿಲ್ಲ. ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಸಂಬಂಧ ಖರ್ಗೆ ಅವರ ಕಟ್ಟಾ ಅನುಯಾಯಿಯಾಗಿರುವ ಕೆಪಿಸಿಸಿ ಉಪಾಧ್ಯಕ್ಷ ಡಿ.ಶರಣಪ್ರಕಾಶ್ ಪಾಟೀಲ್ ಅವರನ್ನು ಸಂಪರ್ಕಿಸಲಾಗಿದ್ದು, ಈ ಘಟನೆಯನ್ನು ನಾನು ಗಮನಿಸಲಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT