ರಾಜಕೀಯ

ಸಿದ್ದರಾಮಯ್ಯ ದಲಿತ ಸಮುದಾಯಗಳತ್ತ ತಿರುಗಿ ಸಹ ನೋಡಿರಲಿಲ್ಲ, ಬರೀ ದೀಪ ಹಚ್ಚಿ ಬಂದವರಿಂದ ನಾವು ಪಾಠ ಕಲಿಯಬೇಕಾಗಿಲ್ಲ: ಬೊಮ್ಮಾಯಿ ತಿರುಗೇಟು

Sumana Upadhyaya

ಬೆಂಗಳೂರು: ಪರಿಶಿಷ್ಟ ಸಮುದಾಯಗಳತ್ತ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಾವು 5 ವರ್ಷ ಮುಖ್ಯಮಂತ್ರಿಯಾಗಿದ್ದಾಗ ಅವರ ಕಷ್ಟಗಳಿಗೆ ಕಣ್ಣೊರೆಸುವುದಿರಲಿ, ತಿರುಗಿಯೂ ಸಹ ನೋಡಿರಲಿಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. 

ಅವರು ಇಂದು ಬೆಂಗಳೂರಿನ ರೇಸ್ ಕೋರ್ಸ್ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ದಲಿತ ಸಮುದಾಯಗಳ ಒಳಮೀಸಲಾತಿ ಕುರಿತು ಅಧ್ಯಯನ ಮಾಡಲು ಸರ್ಕಾರ ಸಚಿವ ಸಂಪುಟ ಉಪಸಮಿತಿ ರಚಿಸಿರುವುದು ಕಣ್ಣೊರೆಸುವ ತಂತ್ರ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ಕೊಟ್ಟಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಸದಾಶಿವ ಆಯೋಗದ ವರದಿಯನ್ನು ತೆಗೆದು ನೋಡುವ ಧೈರ್ಯ ಇರಲಿಲ್ಲ. ಅದೇ ಸಮುದಾಯ ಹುಬ್ಬಳ್ಳಿಯಲ್ಲಿ ಸಮಾವೇಶ ಮಾಡಿದಾಗ ಬರೀ ದೀಪ ಹಚ್ಚಿ ಮಾತನಾಡದೆ ಬಂದರು. ಇಂಥವರಿಂದ  ನಾವು ಪಾಠ ಕಲಿಯಬೇಕಿಲ್ಲ. ನಮ್ಮ ಬದ್ಧತೆ ಏನೆಂದು ಎಲ್ಲಾ ಸಮುದಾಯಗಳಿಗೆ ಗೊತ್ತಿದೆ. ಕಾನೂನು ಸ್ಥಾನಮಾನವೂ ನಮಗೆ ತಿಳಿದಿದೆ. ಇಂಥ ಪ್ರಮುಖ ವಿಚಾರಗಳಲ್ಲಿ ನಿರ್ಣಯ ಕೈಗೊಳ್ಳುವ ದಿಟ್ಟತನ ಬಿಜೆಪಿ ಸರ್ಕಾರಕ್ಕಿದೆ ಎಂದು ತೋರಿಸಿದ್ದೇವೆ. ಇನ್ನೊಬ್ಬರ ಬಗ್ಗೆ ಮಾತನಾಡುವ ಮುನ್ನ ಸಿದ್ದರಾಮಯ್ಯ ತಾವು ಯಾವ ರೀತಿ ನಡೆದುಕೊಂಡಿದ್ದಾರೆ ಎಂದು ಪ್ರತಿಬಾರಿ ಹಿಂತಿರುಗಿ ನೋಡಿದರೆ ಒಳ್ಳೆಯದು ಎಂದರು.

SCROLL FOR NEXT