ರಾಜಕೀಯ

ಒಂದೊಂದಾಗಿ ಉದುರುತ್ತಿವೆ 'ಕಮಲ' ದಳಗಳು: ಹತ್ತಿದ ಏಣಿ ಒದ್ದ ಬಿಜೆಪಿಗರು; ವಿಶ್ವಾಸ ದ್ರೋಹಕ್ಕೆ ಬೇಸತ್ತ ಪುಟ್ಟಣ್ಣ ಕಾಂಗ್ರೆಸ್ ತೆಕ್ಕೆಗೆ?

Shilpa D

ಬೆಂಗಳೂರು: ವಿಧಾನಪರಿಷತ್‌ ಸದಸ್ಯ ಪುಟ್ಟಣ್ಣ ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಪುಟ್ಟಣ್ಣ ಅವರಿಗೆ ಪಕ್ಷವನ್ನು ಸೇರುವಂತೆ ಕಾಂಗ್ರೆಸ್ ನಿಂದ ಆಹ್ವಾನ ಬಂದಿದೆ ಎಂದು ಅವರ ಆಪ್ತ ವಲಯವು ತಿಳಿಸಿದೆ.

‘ಪಕ್ಷವನ್ನು ಅಧಿಕಾರಕ್ಕೆ ತರಲು ತ‌ಮ್ಮನ್ನು ಹಾಗೂ ಸಿ.ಪಿ.ಯೋಗೇಶ್ವರ ಅವರನ್ನು ಚೆನ್ನಾಗಿ ಬಳಸಿಕೊಂಡರು. ಬಳಿಕ ತಮ್ಮನ್ನು ಮರೆತದ್ದೂ ಅಲ್ಲದೇ ನಿರ್ಲಕ್ಷಿಸುತ್ತಿದ್ದಾರೆ’ ಎಂದು ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ಪುಟ್ಟಣ್ಣ ಅವರು ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ.

ಇದೇ ಕಾರಣದಿಂದ ಪುಟ್ಟಣ್ಣ ಅವರು ಸದ್ಯಕ್ಕೆ ತಟಸ್ಥರಾಗಿ ಉಳಿದಿದ್ದಾರೆ. ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದರಿಂದ, ಮುಂದಿನ ದಿನ ಗಳಲ್ಲಿ ಆ ಪಕ್ಷ ಸೇರುವ ಬಗ್ಗೆ ಒಲವು ಹೊಂದಿದ್ದಾರೆ’ ಎಂದು ಅವರ ಆಪ್ತವಲಯ ತಿಳಿಸಿದೆ.  

ಪುಟ್ಟಣ್ಣ ಅವರು 2019ರಲ್ಲಿ ಜೆಡಿಎಸ್‌ ಬಿಟ್ಟು ಬಿಜೆಪಿ ಸೇರಿದ್ದು, ಪರಿಷತ್ತಿಗೆ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಕಾಂಗ್ರೆಸ್‌ ಸೇರಲು ತೀರ್ಮಾನಿಸಿದ ಬೆನ್ನಲ್ಲೇ ಪುಟ್ಟಣ ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

SCROLL FOR NEXT