ರಾಜಕೀಯ

2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್'ಗೆ ಹೀನಾಯ ಸೋಲು: ಬಿಎಸ್‌ವೈ, ಸಿಎಂ ಬೊಮ್ಮಾಯಿ

Manjula VN

ಹುಬ್ಬಳ್ಳಿ: 2023ರ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹೀನಾಯವಾಗಿ ಸೋಲುಂಟಾಗಲಿದೆ. ಆಂತರಿಕ ಕಚ್ಚಾಟಕ್ಕೆ ಕಾರಣವಾಗಿರುವ ಕಾಂಗ್ರೆಸ್ ನಾಯಕರ ಮುಖ್ಯಮಂತ್ರಿಯಾಗುವ ಕನಸು ಇದರಿಂದ ಭಗ್ನವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಭವಿಷ್ಯ ನುಡಿದಿದ್ದಾರೆ.

ಕೊಪ್ಪಳದಲ್ಲಿ ಗುರುವಾರ ನಡೆದ 10 ಜಿಲ್ಲಾ ಪಕ್ಷದ ಕಚೇರಿಗಳ ವರ್ಚುವಲ್ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಯಡಿಯೂರಪ್ಪ ಅವರು, 'ರಾಜ್ಯದಲ್ಲಿ ಕಾಂಗ್ರೆಸ್ ಹೇಗೋ ಉಸಿರಾಡುತ್ತಿದೆ, ಆದರೆ ಮುಂದಿನ ವರ್ಷ ಬಿಜೆಪಿ ಸರಕಾರವನ್ನು ಜನರು ಮತ್ತೆ ಅಧಿಕಾರಕ್ಕೆ ತಂದರೆ ಪಕ್ಷವು ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳಲಿದೆ ಎಂದು ಹೇಳಿದ್ದಾರೆ.

ಈಗಾಗಲೇ ಜನರು ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ದೂರವಿಟ್ಟಿದ್ದು, ಕಾಂಗ್ರೆಸ್ ನಾಯಕರು ಅಲೆದಾಡುತ್ತಿದ್ದಾರೆ, ಸಿದ್ದರಾಮಯ್ಯ ಮತ್ತು ಶಿವಕುಮಾರ್ ಬಣವನ್ನು ಒಟ್ಟಿಗೆ ಇಡಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹರಸಾಹಸ ಪಡುತ್ತಿದ್ದಾರೆಂದು ತಿಳಿಸಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ನಮ್ಮ 140 ಸ್ಥಾನಗಳನ್ನು ಗೆಲ್ಲುವುದು ಖಚಿತ. ಆದರೂ, ಪಕ್ಷದ ಕಾರ್ಯಕರ್ತರು ಸುಮ್ಮನೆ ಕುಳಿತುಕೊಳ್ಳಬಾರದು. ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ ಮಾಡಿದ ದುಷ್ಕೃತ್ಯಗಳ ಬಗ್ಗೆ ಮತದಾರರಿಗೆ ತಿಳಿಸಲು ಮತ್ತು ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಹೇಳುವಂತೆ ಸಲಹೆ ನೀಡಿದರು.

ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿಯವರು, 70 ವರ್ಷಗಳಿಂದ ಕಾಂಗ್ರೆಸ್ ತನ್ನ ವಂಚನೆ ಮತ್ತು ಸುಳ್ಳು ಭರವಸೆಗಳಿಂದ ಜನರನ್ನು ವಂಚಿಸಿದೆ ಎಂದು ಹೇಳಿದರು.

ಇದೇ ವೇಳೆ ಸದಾಶಿವ ಆಯೋಗದ ಶಿಫಾರಸ್ಸಿನಂತೆ ಒಳಮೀಸಲಾತಿ ಜಾರಿಗೊಳಿಸುವ ಸರ್ಕಾರದ ಉದ್ದೇಶವನ್ನು ಪ್ರಶ್ನಿಸಿದ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

SCROLL FOR NEXT