ನಿಖಿಲ್ ಕುಮಾರಸ್ವಾಮಿ 
ರಾಜಕೀಯ

ಮಗನಿಗೆ ಕ್ಷೇತ್ರ ತ್ಯಾಗ ಮಾಡಿದ ಅನಿತಾ ಕುಮಾರಸ್ವಾಮಿ; ರಾಮನಗರದಿಂದ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆ

ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಪತ್ನಿ, ರಾಮನಗರ ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಪುತ್ರ ನಿಖಿಲ್ ಗಾಗಿ ಕ್ಷೇತ್ರವನ್ನು ತ್ಯಾಗ ಮಾಡಿದ್ದಾರೆ. 

ರಾಮನಗರ: ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಪತ್ನಿ, ರಾಮನಗರ ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಪುತ್ರ ನಿಖಿಲ್ ಗಾಗಿ ಕ್ಷೇತ್ರವನ್ನು ತ್ಯಾಗ ಮಾಡಿದ್ದಾರೆ. 

2023ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಾವು ಪ್ರತಿನಿಧಿಸುತ್ತಿರುವ ರಾಮನಗರ ಕ್ಷೇತ್ರದಿಂದ ಪುತ್ರ ನಿಖಿಲ್‌ ಸ್ಪರ್ಧಿಸಲಿದ್ದಾನೆ ಎಂದು ಸ್ವತಃ ಅನಿತಾ ಕುಮಾರಸ್ವಾಮಿ ಅವರು ಶನಿವಾರ ಘೋಷಿಸಿದ್ದಾರೆ. ಈ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಇಂದು ರಾಮನಗರದ ಹಳೇ ಬಸ್‌ ನಿಲ್ದಾಣದಲ್ಲಿ ನಡೆದ ಜೆಡಿಎಸ್‌ ಸಭೆಯಲ್ಲಿ ಅನಿತಾ ಕುಮಾರಸ್ವಾಮಿ ಅವರು, ಮುಂದಿನ ಚುನಾವಣೆಯಲ್ಲಿ ನಿಖಿಲ್‌ ಸ್ಪರ್ಧಿಸಲಿದ್ದಾನೆ. ನಿಮ್ಮೆಲ್ಲರ ಆಶೀರ್ವಾದ ಪುತ್ರ ನಿಖಿಲ್ ಕುಮಾರಸ್ವಾಮಿ ಮೇಲೆ ಇರಲಿ ಎಂದು ಹೇಳಿ ಭಾವುಕರಾದರು. ಇನ್ನು ನಿಖಿಲ್‌ ಅಭ್ಯರ್ಥಿಯಾಗುತ್ತಾರೆಂದು ಘೋಷಿಸುತ್ತಿದ್ದಂತೆ ಕಾರ್ಯಕರ್ತರ ಹರ್ಷೋದ್ಘಾರ ಮುಗಿಲು ಮುಟ್ಟಿತು.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನೀವೆಲ್ಲಾ ಸೇರಿ ನಿಖಿಲ್ ಗೆ ಬೆಂಬಲ ನೀಡಬೇಕು. ನನ್ನ ಬಗ್ಗೆ ಕೆಲವು ಅಪಪ್ರಚಾರಗಳನ್ನು ಮಾಡುತ್ತಿದ್ದರು. ಹಾಗಾಗಿ ಇವತ್ತೇ ಫೈನಲ್ ಮಾಡಬೇಕೆಂದು ಇಲ್ಲಿ ಬಂದು ಹೇಳಿದ್ದೇನೆ. ನಾನು ಕುಟುಂಬಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತೇನೆ. ನಾನು ದೇವರ ಮುಂದೆ ನಿಂತಾಗ ಕೂಡ ನನ್ನ ಗಂಡ ಮತ್ತು ನನ್ನ ಮಗನಿಗೆ ಒಳ್ಳೆಯದಾಗಲಿ ಎಂದು ಕೇಳಿಕೊಳ್ಳುವುದಾಗಿ ಭಾವುಕರಾದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉಗ್ರರ ವಿರುದ್ಧ 'ಪ್ರಹಾರ್' ನಿರ್ಣಾಯಕ: ಕೇಂದ್ರದಿಂದ ದೇಶದ ಮೊದಲ ಭಯೋತ್ಪಾದನಾ ವಿರೋಧಿ ನೀತಿ ಬಿಡುಗಡೆ!

ರನ್ ರೇಟ್ ಹೆಚ್ಚಿಸಿಕೊಳ್ಳಲು ಜಿಂಬಾಬ್ವೆ ವಿರುದ್ಧ ದಾಖಲೆಯ 254 ರನ್ ಸಿಡಿಸಿದ ವೆಸ್ಟ್ ಇಂಡೀಸ್, ಭಾರತಕ್ಕೆ ಕಂಟಕ!

T20 World Cup 2026: ಜಿಂಬಾಬ್ವೆ ವಿರುದ್ಧ ವೆಸ್ಟ್ ಇಂಡೀಸ್ ಗೆ 107 ರನ್ ಗಳ ಭರ್ಜರಿ ಜಯ

ವಿಬಿ ಜಿ ರಾಮ್ ಜಿಯಿಂದ 16.12 ಕೋಟಿ ಜನ ನಿರುದ್ಯೋಗಿಗಳು; ಮನರೇಗಾ ಮರುಜಾರಿಗೊಳಿಸುವವರೆಗೆ ಹೋರಾಟ

IDFC First Bank ವಂಚನೆ ಪ್ರಕರಣ: ತನಿಖೆಗೆ ಆದೇಶಿಸಿದ ಹರಿಯಾಣ CM ಸೈನಿ

SCROLL FOR NEXT