ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಮಂಡ್ಯದಲ್ಲಿ ಭಾಗದಲ್ಲಿ ಬಿಜೆಪಿ ಅಲೆ ಕಾಣುತ್ತಿದ್ದು, ಈ ಬಾರಿಯ ಚುನಾವಣೆಯಲ್ಲಿ ಗೆಲುವು ಖಚಿತ: ಸಿಎಂ ಬೊಮ್ಮಾಯಿ

2023ರ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ಕಾಂಗ್ರೆಸ್ ಹಗಲುಗನಸು ಕಾಣುತ್ತಿದೆ ಎಂದು ಲೇವಡಿ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಪ್ರಸುತ್ತ ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದ್ದು, ಗುಜರಾತ್‌ನಂತೆಯೇ ಫಲಿತಾಂಶ ಬರಲಿದೆ ಎಂದು ಶುಕ್ರವಾರ ಹೇಳಿದರು.

ಸಿಎಂ ಬೊಮ್ಮಾಯಿ
Manjula VN
Updated On : 17 Dec 2022, 11:51 am

ಮೈಸೂರು: 2023ರ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವ ಕಾಂಗ್ರೆಸ್ ಹಗಲುಗನಸು ಕಾಣುತ್ತಿದೆ ಎಂದು ಲೇವಡಿ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಪ್ರಸುತ್ತ ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದ್ದು, ಗುಜರಾತ್‌ನಂತೆಯೇ ಫಲಿತಾಂಶ ಬರಲಿದೆ ಎಂದು ಶುಕ್ರವಾರ ಹೇಳಿದರು.

ಪಾಂಡವಪುರದಲ್ಲಿ ಶುಕ್ರವಾರ ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಬ್ಬರೂ ತಮ್ಮ ಮತಬ್ಯಾಂಕ್ ಹೆಚ್ಚಿಸಲು ಅಲ್ಪಸಂಖ್ಯಾತರನ್ನು ಓಲೈಸುತ್ತಿದ್ದಾರೆ ಮತ್ತು ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆಂದು ಹೇಳಿದರು.

''ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ಓಲೈಕೆಗಾಗಿ ಟಿಪ್ಪು ಸುಲ್ತಾನ್ ಬಗ್ಗೆ ಮಾತನಾಡುತ್ತಿದ್ದರೆ, ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟವನ್ನು ಶಿವಕುಮಾರ್ ಸಮರ್ಥಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ದೇಶ ಮತ್ತು ಭಯೋತ್ಪಾದಕರ ಬಗ್ಗೆ ಕಾಂಗ್ರೆಸ್ ನಿಲುವು ಸ್ಪಷ್ಟಪಡಿಸಬೇಕು ಎಂದು ತಿಳಿಸಿದರು.

Advertisement

Advertisement

ಇದನ್ನೂ ಓದಿ: ಮಂಡ್ಯದಲ್ಲಿ ಭಾಗದಲ್ಲಿ ಬಿಜೆಪಿ ಅಲೆ ಕಾಣುತ್ತಿದ್ದು, ಈ ಬಾರಿಯ ಚುನಾವಣೆಯಲ್ಲಿ ಗೆಲುವು ಖಚಿತ: ಸಿಎಂ ಬೊಮ್ಮಾಯಿ

ಬಳಿಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಟಾರ್ಗೆಟ್ ಮಾಡಿದ್ದು ಬಿಟ್ಟರೆ ಅವರಿಗೆ ಬೇರೆ ವಿಚಾರಗಳು ಸಿಗುತ್ತಿಲ್ಲ. ಎಲ್ಲೇ ಹೋದರೂ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡುವುದಾಗಿ ಸಿದ್ದರಾಮಯ್ಯ ಹೇಳಿಕೊಳ್ಳುತ್ತಾರೆ. ಆದರೆ ವಾಸ್ತವದಲ್ಲಿ ಯೋಜನೆ ರೂಪಿಸಿದ್ದು ಮೋದಿ, ಸಿದ್ದರಾಮಯ್ಯ ಅವರು ಕೊಡುಗೆ ಏನೆಂದರೆ ಗೋಣಿಚೀಲಕ್ಕೆ ನೀಡಿದ 3 ರುಪಾಯಿಯಷ್ಟೇ ಎಂದರು.

ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಅಲೆ ಕಾಣುತ್ತಿದ್ದು, ಮಂಡ್ಯ ಭಾಗದಲ್ಲಿ ಪಕ್ಷ ಬಲವಾಗಿ ಬೆಳೆಯುತ್ತಿದೆ. ಮುಂಬರುವ ಚುನಾವಣೆಯಲ್ಲಿ ಮಂಡ್ಯದ ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಂಡ್ಯದಲ್ಲಿ ಪಿಎಸ್‌ಎಸ್‌ಕೆ ಮತ್ತು ಮೈಶುಗರ್ ಕಾರ್ಖಾನೆಗಳನ್ನು ಪುನರಾರಂಭಿಸಿದ ಕೀರ್ತಿಯನ್ನು ಸ್ಮರಿಸಿದ ಅವರು, “ರೈತರು ಪ್ರತಿಭಟನೆ ನಡೆಸುತ್ತಿದ್ದರು, ಆದರೆ ಹಿಂದಿನ ಯಾವುದೇ ಸರ್ಕಾರಗಳು ಅದನ್ನು ಪುನರಾರಂಭಿಸಲಿಲ್ಲ. ಆದರೆ ನಾವು ಅದನ್ನು ಮಾಡಿದ್ದೇವೆ. ಮೊದಲ ಪಾವತಿಯಾಗಿ 17 ಕೋಟಿ ರೂ. ಶೀಘ್ರದಲ್ಲೇ ನೀಡಲಾಗುತ್ತದೆ. ಸಕ್ಕರೆ ಕಾರ್ಖಾನೆಯಲ್ಲಿ ಎಥೆನಾಲ್ ಸ್ಥಾವರ ಪ್ರಾರಂಭವಾಗಲಿದೆ ಎಂದು ಹೇಳಿದರು.

ಇದನ್ನೂ ಓದಿ: ಭಯೋತ್ಪಾದಕರ ಮೇಲಿನ ಕಾಂಗ್ರೆಸ್ ಪ್ರೇಮ ಜಗಜ್ಜಾಹೀರು ಮಾಡಿದ ಡಿಕೆಶಿ: ನಳಿನ್‍ಕುಮಾರ್ ಕಟೀಲ್

ಕೆಆರ್ ಎಸ್ ಅಣೆಕಟ್ಟೆಯಲ್ಲಿ ದೋಷಪೂರಿತ 16 ಗೇಟ್ ಗಳನ್ನು ಸರಿಪಡಿಸಲಾಗಿದ್ದು, ಉಳಿದ ಎಲ್ಲ ಗೇಟ್ ಗಳನ್ನು ಸರಿಪಡಿಸಲಾಗುವುದು, ಜಿಲ್ಲೆಯಲ್ಲಿ 184 ಕೆರೆಗಳ ಅಭಿವೃದ್ಧಿಗೆ 450 ಕೋಟಿ ರೂ ನೀಡಲಾಗುತ್ತಿದೆ ಎಂದು ತಿಳಿಸಿದರು.

ಇದೇ ವೇಳೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಾತನಾಡಿ, ಗುಜರಾತ್ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

ಒಕ್ಕಲಿಗ ಮೀಸಲಾತಿಯಲ್ಲಿ ಹೆಚ್ಚಳ
ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸುತ್ತಿರುವ ಒಕ್ಕಲಿಗರಿಗೆ ಸರಕಾರ ನ್ಯಾಯ ಒದಗಿಸಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.

ಇವರಿಗೆ ನ್ಯಾಯ ದೊರಕಿಸಿಕೊಡಲು ನಗರ ಒಕ್ಕಲಿಗರ ವ್ಯಾಪ್ತಿಗೆ ಸೇರಿಸಲು ಸರ್ಕಾರ ಪ್ರಯತ್ನಿಸುತ್ತಿದ್ದು, ಈ ನಡುವೆ ವಿಧಾನಸೌಧದ ಎದುರು ಕೆಂಪೇಗೌಡ ಪ್ರತಿಮೆ ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದರು

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement