ರಾಜಕೀಯ

ಶುಭ ಶುಕ್ರವಾರವೂ ರಿಲೀಸ್ ಆಗಲಿಲ್ಲ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ: ಮಗನಿಗಾಗಿ ಅನಿತಾ ಕುಮಾರಸ್ವಾಮಿ ಕ್ಷೇತ್ರ ತ್ಯಾಗ!

Shilpa D

ಬೆಂಗಳೂರು:  64ನೇ ವರ್ಷಕ್ಕೆ ಕಾಲಿಟ್ಟಿರುವ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಶುಕ್ರವಾರ ರಾಮನಗರಗದಲ್ಲಿ ನಡೆಯಿತು. ಈ  ಸಂಭ್ರಮಾಚರಣೆಯಲ್ಲಿ 2023ರ ವಿಧಾನಸಭಾ ಚುನಾವಣೆಯ  ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಆಗಲಿದೆ ಎಂದು  ಕಾತರದಿಂದ ಕಾಯುತ್ತಿದ್ದ ಟಿಕೆಟ್ ಆಕಾಂಕ್ಷಿಗಳಿಗೆ ನಿರಾಸೆಯಾಗಿದೆ.

ಸಂಖ್ಯಾಶಾಸ್ತ್ರಜ್ಞರ ಸಲಹೆಗಳಿಗೆ ಬದ್ಧವಾಗಿ 96 ರಿಂದ 116 ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದ್ದು, ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ. ಆದರೆ ಶುಕ್ರವಾರ ಪಟ್ಟಿ ರಿಲೀಸ್ ಆಗುತ್ತದೆ ಎಂದು ಹೇಳಲಾಗಿತ್ತು, ಆದರೆ ಪಟ್ಟಿ ಬಿಡುಗಡೆಯನ್ನು ಮುಂದೂಡಲಾಗಿದೆ.

ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ  ಪುತ್ರ ನಿಖಿಲ್ ಗಾಗಿ ವಿಧಾನಸಭಾ ಸ್ಥಾನವನ್ನು ತ್ಯಾಗ ಮಾಡಲಿದ್ದಾರೆ ಎಂದು ಕೇಳಿ ಬರುತ್ತಿರುವ ಊಹಾಪೋಹಗಳಿಗೆ ಪುಷ್ಠಿ ನೀಡುವಂತೆ ಕಾರ್ಯಕ್ರಮ ನಡೆದ ರೀತಿ ತೋರುತ್ತಿತ್ತು. ನಿಖಿಲ್ ನೆರವಿನೊಂದಿಗೆ ವೇದಿಕೆ ಏರಿದ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ನೆರೆದಿದ್ದ ಜನರತ್ತ ಕೈಬೀಸಿದರು. 1994 ರ ವಿಧಾನಸಭಾ ಚುನಾವಣೆಯಲ್ಲಿ, ಗೌಡರು ರಾಮನಗರ ಸ್ಥಾನವನ್ನು ಗೆದ್ದು ಮುಖ್ಯಮಂತ್ರಿಯಾದರು.

ಕುಮಾರಸ್ವಾಮಿ ಅವರು ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ಬೆಂಬಲಿಗರೊಂದಿಗೆ ಪ್ರಾರ್ಥನೆ ಸಲ್ಲಿಸಿದರು. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಮುಂತಾದವರು ಕೂಡ ಕರೆ ಮಾಡಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದಾರೆ.

ಕಾಂಗ್ರೆಸ್ ಸೇರುವ ನಿರೀಕ್ಷೆಯಲ್ಲಿರುವ ಅರಕಲಗೂಡು ಶಾಸಕ ಎ.ಟಿ.ರಾಮಸ್ವಾಮಿ, ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಸೇರಿದಂತೆ ಕೆಲವು ಭಿನ್ನಮತೀಯರನ್ನು ಹೊರತುಪಡಿಸಿ ಬಹುತೇಕ ಎಲ್ಲ ಜೆಡಿಎಸ್ ಮುಖಂಡರು ಉಪಸ್ಥಿತರಿದ್ದರು.

ಇವರಿಬ್ಬರಿಗೆ ಪಕ್ಷವು ಈಗಾಗಲೇ ಪರ್ಯಾಯ ಅಭ್ಯರ್ಥಿಗಳನ್ನು ಗುರುತಿಸಿದೆ ಮತ್ತು ಈ ಇಬ್ಬರು ಪಕ್ಷದ ಕಾರ್ಯಕ್ರಮಗಳಿಂದ ದೂರವೇ ಉಳಿದಿದ್ದಾರೆ. ಕುಮಾರಸ್ವಾಮಿ ಪ್ರತಿನಿಧಿಸುವ ರಾಮನಗರ ಮತ್ತು ಚನ್ನಪಟ್ಟಣದ ಸಾವಿರಾರು ಜನರು ಸೇರಿದ್ದ ಬೃಹತ್ ಧಾರ್ಮಿಕ ಕಾರ್ಯಕ್ರಮದಲ್ಲಿ ಚನ್ನಮ್ಮ ದೇವೇಗೌಡರೂ ಪಾಲ್ಗೊಂಡಿದ್ದರು. ಈ ಕಾರ್ಯಕ್ರಮ ಚುನಾವಣೆಗೆ ನಾಲ್ಕೈದು ತಿಂಗಳುಗಳಿರುವಾಗ ಪಕ್ಷಕ್ಕೆ ದೊಡ್ಡ ಬೂಸ್ಟ್ ನೀಡಿದೆ. ಪಂಚರತ್ನ ಯಾತ್ರೆಯು ಈಗಾಗಲೇ ಹಳೆಯ ಮೈಸೂರು ಪ್ರದೇಶದಲ್ಲಿ ಜನರನ್ನು ಸೆಳೆಯುತ್ತಿದೆ.

SCROLL FOR NEXT