ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದ ಶ್ರೀಗಳು (ಸಂಗ್ರಹ ಚಿತ್ರ) 
ರಾಜಕೀಯ

ಆದಿ ಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿಯನ್ನು ಭೇಟಿ ಮಾಡಿದ ಕಾಂಗ್ರೆಸ್ ಒಕ್ಕಲಿಗ ನಾಯಕರು

ಭಾನುವಾರ ಸಂಜೆ ವಿಜಯನಗರದಲ್ಲಿರುವ ಮಠದ ಶಾಖೆಯಲ್ಲಿ ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಕಾಂಗ್ರೆಸ್‌ನ ಒಕ್ಕಲಿಗ ಮುಖಂಡರ ನಿಯೋಗ ಭೇಟಿ ಮಾಡಿತು.

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಜಾತಿ ಸಮೀಕರಣಕ್ಕೆ ಮುಂದಾಗಿದ್ದು, ಒಕ್ಕಲಿಗ ಸಮುದಾಯವನ್ನು ಸೆಳೆಯಲು ‌ರೂಪಿಸಬೇಕಾದ ತಂತ್ರಗಾರಿಕೆಗಳ ಬಗ್ಗೆ ಈಗಾಗಲೇ ಚರ್ಚಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ವಿಜಯನಗರದಲ್ಲಿರುವ ಮಠದ ಶಾಖೆಯಲ್ಲಿ ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಕಾಂಗ್ರೆಸ್‌ನ ಒಕ್ಕಲಿಗ ಮುಖಂಡರ ನಿಯೋಗ ಭೇಟಿ ಮಾಡಿತು.

ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಕೋಟಾವನ್ನು ಶೇ 4 ರಿಂದ ಸೇ 12 ಕ್ಕೆ ಹೆಚ್ಚಿಸುವ ಸಮುದಾಯದ ಹೋರಾಟದ ಕುರಿತು ಅವರು ಚರ್ಚೆ ನಡೆಸಿದರು.

ಕೋಟಾ ಹೋರಾಟಕ್ಕೆ ಕಾಂಗ್ರೆಸ್ ಒಕ್ಕಲಿಗ ಮುಖಂಡರ ಬೆಂಬಲ ನೀಡಿದ್ದೇವೆ ಮತ್ತು ಸ್ವಾಮೀಜಿಯವರ ನಾಯಕತ್ವವನ್ನು ಕೋರಿದ್ದೇವೆ ಎಂದು ಮಾಜಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಇತ್ತೀಚೆಗೆ ನಡೆದ ಸಮುದಾಯದ ಮುಖಂಡರ ಸಭೆಗೆ ಎಚ್.ಡಿ. ಕುಮಾರಸ್ವಾಮಿ, ಎಚ್.ಡಿ. ರೇವಣ್ಣ ಸೇರಿದಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಕುಟುಂಬದವರೂ ಜೆಡಿಎಸ್ ಮಠಾಧೀಶರ ಸಭೆಗೆ ಹಾಜರಾಗಿಲ್ಲ ಎಂದು ಆರೋಪಿಸಿದರು.

ಆರ್‌ಎಸ್‌ಎಸ್ ಸದಸ್ಯ ಜಿ.ಸಿ. ಚಂದ್ರಶೇಖರ್‌, ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್‌, ಟಿ.ಬಿ. ಜಯಚಂದ್ರ, ಕೃಷ್ಣ ಬೈರೇಗೌಡ, ಎಂ. ಕೃಷ್ಣಪ್ಪ, ಎಂಎಲ್‌ಸಿಗಳಾದ ರವಿ, ದಿನೇಶ್‌ ಗೂಳಿಗೌಡ, ಮಾಜಿ ಶಾಸಕರಾದ ವಾಸು ಸೇರಿದಂತೆ ಕಾಂಗ್ರೆಸ್‌ ಮುಖಂಡರು ನಿಯೋಗದಲ್ಲಿದ್ದರು.

ಇತ್ತೀಚೆಗಷ್ಟೇ ಕಾಂಗ್ರೆಸ್‌ನ ಒಕ್ಕಲಿಗ ಮುಖಂಡರು ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಸಿ, ಹಲವು ವಿಚಾರಗಳ ಬಗ್ಗೆ ಚರ್ಚಿಸಲಾಗಿದ್ದು, ಒಕ್ಕಲಿಗ ಮತ ಬೇಟೆ, ಮೀಸಲಾತಿ ಸೇರಿದಂತೆ ಮಹತ್ವದ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT