ಕೆಎಸ್ ಈಶ್ವರಪ್ಪ 
ರಾಜಕೀಯ

ಕ್ಲೀನ್ ಚಿಟ್ ಸಿಕ್ಕರೂ ನನ್ನನ್ನೇಕೆ ಸಂಪುಟಕ್ಕೆ ಸೇರಿಸಿಕೊಂಡಿಲ್ಲ?" ಸಿಎಂ ಬೊಮ್ಮಾಯಿ ವಿರುದ್ಧ ಈಶ್ವರಪ್ಪ ಅಸಮಾಧಾನ

ಕಮಿಷನ್ ಪಡೆದ ಆರೋಪ ಪ್ರಕರಣ ಸಂಬಂಧ ಪೊಲೀಸ್ ತನಿಖೆಯಲ್ಲಿ ಕ್ಲೀನ್ ಚಿಟ್ ಸಿಕ್ಕಿದ್ದರೂ ನನ್ನನ್ನೇಕೆ ಸಂಪುಟಕ್ಕೆ ಸೇರ್ಪಡೆಗೊಳಿಸಲಿಲ್ಲ ಎಂದು ಮಾಜಿ ಸಚಿವ ಈಶ್ವರಪ್ಪ ಅವರು ಪ್ರಶ್ನಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಬಾಗಲಕೋಟೆ: ಕಮಿಷನ್ ಪಡೆದ ಆರೋಪ ಪ್ರಕರಣ ಸಂಬಂಧ ಪೊಲೀಸ್ ತನಿಖೆಯಲ್ಲಿ ಕ್ಲೀನ್ ಚಿಟ್ ಸಿಕ್ಕಿದ್ದರೂ ನನ್ನನ್ನೇಕೆ ಸಂಪುಟಕ್ಕೆ ಸೇರ್ಪಡೆಗೊಳಿಸಲಿಲ್ಲ ಎಂದು ಮಾಜಿ ಸಚಿವ ಈಶ್ವರಪ್ಪ ಅವರು ಪ್ರಶ್ನಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಲೀನ್ ಚಿಟ್ ತೆಗೆದುಕೊಂಡು ನಿರಪರಾಧಿ ಅಂತ ತೀರ್ಮಾನ ಆದ ಮೇಲೂ ಇಡೀ ರಾಜ್ಯದ ಜನ ನನ್ನ ಪ್ರಶ್ನೆ ಮಾಡುತ್ತಿರುವ ಸಂದರ್ಭದಲ್ಲಿ ನನಗೆ ಉತ್ತರ ಕೊಡಲು ಬರುವುದಿಲ್ಲ. ಇದಕ್ಕೆ ಮುಖ್ಯಮಂತ್ರಿಯವರೇ ಉತ್ತರಿಸಲಿ ಎಂದು ಹೇಳಿದರು.

ನಾನು 1989ರಲ್ಲಿ ಮೊದಲ ಬಾರಿ ವಿಧಾನಸಭೆಗೆ ಕಾಲಿಟ್ಟಿದ್ದೆ. ಅಂದಿನಿಂದ ಒಂದೇ ಒಂದು ಅಧಿವೇಶನದಲ್ಲಿ ರಜೆ ತೆಗೆದುಕೊಂಡಿಲ್ಲ, ಚಕ್ಕರ್ ಹೊಡೆಯಲಿಲ್ಲ. ವಿಧಾನಸಭೆಯಲ್ಲಿ ಒಂದು ದಿನವೂ ನಿದ್ದೆ ಮಾಡಲಿಲ್ಲ. ಅನೇಕ ಮಹಾಪುರುಷರು ನಿದ್ದೆ ಮಾಡುವುದನ್ನು ನೀವು ನೋಡಿರುತ್ತೀರಿ. ವಿಧಾನಸೌಧದ ಪಾವಿತ್ರ್ಯತೆ ನನಗೆ ಗೊತ್ತು. ಆದರೆ ಕ್ಲೀನ್ ಚಿಟ್ ಸಿಕ್ಕರೂ ಯಾಕೆ ಸಚಿವ ಸ್ಥಾನ ನೀಡಿಲ್ಲ ಎಂದು ನನಗೆ ಗೊತ್ತಿಲ್ಲ ಎಂದು ತಿಳಿಸಿದರು.

ಯಾಕೆ ಸಂಪುಟಕ್ಕೆ ಈಶ್ವರಪ್ಪನನ್ನು ತೆಗೆದುಕೊಂಡಿಲ್ಲ ಎಂದು ಮಾದ್ಯಮದ ಮೂಲಕ ನಾನು ಮುಖ್ಯಮಂತ್ರಿಯವರಿಗೆ ಕೇಳುತ್ತೇನೆ. ನೀವು ರಾಜ್ಯದ ಜನತೆಗೆ ಉತ್ತರ ಕೊಡಿ. ಕೇಂದ್ರ ನಾಯಕರ ತೀರ್ಮಾನ ಎಂದು ಅವರು ಹೇಳಬಹುದು. ಆದರೆ ನನಗೆ ಗೊತ್ತಿಲ್ಲ. ಯಾಕೆಂದರೆ ಮುಖ್ಯಮಂತ್ರಿಯವರಿಗೆ ತಮ್ಮ ಸಂಪುಟದಲ್ಲಿ ಯಾರ್ಯಾರು ಮಂತ್ರಿಗಳನ್ನು ಇಟ್ಟುಕೊಳ್ಳಬೇಕು ಎಂಬ ಅಧಿಕಾರ ಇರುತ್ತದೆ ಎಂದರು.

ಕೇಂದ್ರ ನಾಯಕರು ನನ್ನ ವಿಚಾರದಲ್ಲಿ ಒಳ್ಳೆಯ ಅಭಿಪ್ರಾಯ ಇಟ್ಟುಕೊಂಡು ಸಚಿವ ಸಂಪುಟಕ್ಕೆ ತೆಗೆದುಕೊಳ್ಳಬೇಕಿತ್ತು ಎಂಬ ಭಾವನೆಯಲ್ಲಿದ್ದಾರೆ ಅಂತ ನಾನಂದುಕೊಡಿದ್ದೇನೆ. ಈ ಬಗ್ಗೆ ಬಹಿರಂಗವಾಗಿ ನಾನು ಯಾಕೆ ಹೇಳುತ್ತಿದ್ದೇನೆ ಅಂದರೆ ಈ ಬಗ್ಗೆ ಮುಖ್ಯಮಂತ್ರಿಯವರು ಗಮನಿಸಬೇಕು. ಇದು ಸೌಜನ್ಯ ಪ್ರತಿಭಟನೆ, ಯಾವುದೇ ಕಾರಣಕ್ಕೂ ಮುಖ್ಯಮಂತ್ರಿಯವರ ವಿರುದ್ಧ ನಾನು ಮಾಡುತ್ತಿಲ್ಲ. ಇಡೀ ರಾಜ್ಯದ ಜನ ನನ್ನನ್ನು ಕೇಳುತ್ತಿರುವಾಗ ಏನು ಉತ್ತರ ಕೊಡಬೇಕು ಎಂದು ಗೊತ್ತಿಲ್ಲ. ಅದಕ್ಕೆ ಮಾಧ್ಯಮದ ಮೂಲಕ ಅವರಿಗೆ ನನ್ನ ಉತ್ತರ ತಿಳಿಸುತ್ತಿದ್ದೇನೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT