ಜನಾರ್ದನ ರೆಡ್ಡಿ 
ರಾಜಕೀಯ

ರಾಜಕೀಯದಲ್ಲಿ ಎರಡನೇ ಇನಿಂಗ್ಸ್ ಆರಂಭಿಸಿದ ಜನಾರ್ದನ ರೆಡ್ಡಿ; ಬಿಜೆಪಿಗೆ ಸಂಕಷ್ಟ, ಇತ್ತ ಒತ್ತಡಕ್ಕೆ ಒಳಗಾದ ಶ್ರೀರಾಮುಲು

ಒಂದು ವೇಳೆ ರೆಡ್ಡಿ ಅವರು ತಮ್ಮ ಎರಡನೇ ಇನಿಂಗ್ಸ್‌ನಲ್ಲಿ ಪ್ರತ್ಯೇಕ ಪಕ್ಷ ಸ್ಥಾಪಿಸಿದರೆ ಉಂಟಾಗುವ ಸಂಭವನೀಯ ಪತನಗಳ ಬಗ್ಗೆ ಎಚ್ಚರಿಕೆ ವಹಿಸಿದೆ. ಜನಾರ್ಧನ ರೆಡ್ಡಿ ಅವರು ಡಿ. 19 ರಂದು ಸಿದ್ದಗಂಗಾ ಮಠದ ಸ್ವಾಮೀಜಿ ಅವರನ್ನು ಭೇಟಿ ಮಾಡಿರುವ ಬೆಳವಣಿಗೆಯನ್ನು ಬಿಜೆಪಿ ಸೂಕ್ಷ್ಮವಾಗಿ ಗಮನಿಸುತ್ತಿದೆ.

ಬೆಂಗಳೂರು: ರಾಜ್ಯ ಬಿಜೆಪಿ ಇದೀಗ ಅನಿಶ್ಚಿತ ಪರಿಸ್ಥಿತಿಯಲ್ಲಿ ಹೋರಾಡುತ್ತಿದೆ. ರಾಜಕೀಯ ವಲಯದಿಂದ ಕಣ್ಮರೆಯಾಗಿದ್ದ ಬಿಜೆಪಿಯ ಮಾಜಿ ಸಚಿವ ಜನಾರ್ದನರೆಡ್ಡಿ ಈಗ ಮತ್ತೆ ಕಾಣಿಸಿಕೊಂಡಿದ್ದಾರೆ. ರೆಡ್ಡಿ ಅವರಿಗೆ ಬಿಜೆಪಿ ಮಣೆ ಹಾಕುತ್ತಿರುವುದು ಇದೀಗ ಗುಟ್ಟಾಗಿ ಉಳಿದಿಲ್ಲ. ಎರಡು ದಿನಗಳ ಹಿಂದೆ ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ನವದೆಹಲಿಗೆ ಭೇಟಿ ನೀಡಿದ್ದರ ಹಿಂದೆಯೂ ಅವರಿದ್ದಾರೆ.

ಕೇಂದ್ರದ ಬಿಜೆಪಿ ನಾಯಕರು ಶ್ರೀರಾಮುಲು ಅವರನ್ನು ಭೇಟಿ ಮಾಡಿದ್ದಾರೆ. ಒಂದು ವೇಳೆ ರೆಡ್ಡಿ ಅವರು ತಮ್ಮ ಎರಡನೇ ಇನಿಂಗ್ಸ್‌ನಲ್ಲಿ ಪ್ರತ್ಯೇಕ ಪಕ್ಷ ಸ್ಥಾಪಿಸಿದರೆ ಉಂಟಾಗುವ ಸಂಭವನೀಯ ಪತನಗಳ ಬಗ್ಗೆ ಎಚ್ಚರಿಕೆ ವಹಿಸಿದೆ. ಒಂದೆಡೆ ಬೆಳಗಾವಿಯ ಸುವರ್ಣ ವಿಧಾನಸೌದದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದರೆ, ಜನಾರ್ಧನ ರೆಡ್ಡಿ ಅವರು ಡಿ. 19 ರಂದು ಸಿದ್ದಗಂಗಾ ಮಠದ ಸ್ವಾಮೀಜಿ ಅವರನ್ನು ಭೇಟಿ ಮಾಡಿರುವ ಬೆಳವಣಿಗೆಯನ್ನು ಬಿಜೆಪಿ ಸೂಕ್ಷ್ಮವಾಗಿ ಗಮನಿಸುತ್ತಿದೆ.

ರೆಡ್ಡಿ ಅವರು ಮಠಾಧೀಶರೊಂದಿಗೆ ಏನನ್ನು ಚರ್ಚಿಸುತ್ತಾರೆ ಮತ್ತು ಮತ್ತು ಮಠಾಧೀಶರು ಅವರನ್ನು ಏಕೆ ಭೇಟಿ ಮಾಡುತ್ತಾರೆ ಎಂಬುದು ಮುಖ್ಯ. ಡಿ. 2 ರಂದು ಅವರು ಹುಬ್ಬಳ್ಳಿಯ ಸಿದ್ಧಾರೂಢ ಮಠದ ಮಠಾಧೀಶರನ್ನು ಭೇಟಿ ಮಾಡಿದ್ದಾರೆ ಮತ್ತು ಮರುದಿನ, ಗದಗನಲ್ಲಿರುವ ತೋಂಟದಾರ್ಯ ಸ್ವಾಮೀಜಿ ಮತ್ತು ಪುಟ್ಟರಾಜ ಗವಾಯಿಗಳ ಗದ್ದುಗೆಯನ್ನು ಭೇಟಿ ಮಾಡಿದ್ದರು.

ಈ ಎಲ್ಲ ನಡೆಗಳು ರೆಡ್ಡಿ ರಾಜಕೀಯವಾಗಿ ದೊಡ್ಡ ಯೋಜನೆ ರೂಪಿಸುತ್ತಿರುವುದನ್ನು ಸೂಚಿಸುತ್ತಿವೆ. ಡಿಸೆಂಬರ್ 21 ರಂದು, ಅವರು ಪ್ರಮುಖ ಸಭೆಗೆ ತಮ್ಮ ನಿಕಟವರ್ತಿಗಳಿಗೆ ಆಹ್ವಾನಗಳನ್ನು ಕಳುಹಿಸಿದ್ದಾರೆ ಮತ್ತು ಅವರಲ್ಲಿ ಅನೇಕರು ಬಳ್ಳಾರಿ, ವಿಜಯನಗರ, ರಾಯಚೂರು ಮತ್ತು ಪಕ್ಕದ ಪ್ರದೇಶಗಳ ಬಿಜೆಪಿಯ ಸ್ಥಳೀಯ ನಾಯಕರು. ಸಭೆಯಲ್ಲಿ ಪಾಲ್ಗೊಳ್ಳುವ ನಾಯಕರ ಮೇಲೆಯೂ ಬಿಜೆಪಿ ನಿಗಾ ಇಡಲಿದೆ.

ರೆಡ್ಡಿ ಡಿ.22ರಂದು ದುರ್ಗಾದೇವಿ ಜಾತ್ರೆಯಲ್ಲಿ ಪಾಲ್ಗೊಳ್ಳಲಿದ್ದು, ಗಂಗಾವತಿಯಲ್ಲಿ ಪ್ರಮುಖರನ್ನು ಭೇಟಿ ಮಾಡಲಿದ್ದಾರೆ. ಭಾನುವಾರ ಅವರು ತಮ್ಮ ಮುಂದಿನ ರಾಜಕೀಯ ಯೋಜನೆಗಳ ಬಗ್ಗೆ ಘೋಷಿಸುವ ನಿರೀಕ್ಷೆಯಿದೆ. ಕೆಲವು ಜಿಲ್ಲೆಗಳಲ್ಲಿ ಬಿಜೆಪಿಗೆ ಸಂಭವನೀಯ ಹಾನಿಯುಂಟಾಗುತ್ತಿರುವುದರಿಂದ ಅವರ ಆತ್ಮೀಯ ಸ್ನೇಹಿತ ಶ್ರೀರಾಮುಲು ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶ್ರೀರಾಮುಲು ಅವರು ಬಿಎಸ್‌ಆರ್ ಪಕ್ಷ ಮತ್ತು ರೆಡ್ಡಿ ಬೆಂಬಲದೊಂದಿಗೆ 2013 ರ ಚುನಾವಣೆಯಲ್ಲಿ ಶೇ 4.5 ಕ್ಕಿಂತ ಹೆಚ್ಚು ಮತಗಳನ್ನು ಗಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ ಜಾಗತಿಕ ನಾವೀನ್ಯತೆ ತಾಣವಾಗಿ ಪರಿವರ್ತಿಸಲು ಮೂರು ನೀತಿ ಅನಾವರಣಗೊಳಿಸಿದ ಸಿಎಂ

'Glad Was In Audience': ಮತ್ತೆ ಪ್ರಧಾನಿಯನ್ನು ಹಾಡಿ ಹೊಗಳಿದ ಶಶಿ ತರೂರ್, ಗುಲಾಮ ಮನಸ್ಥಿತಿ ಕುರಿತ ಹೇಳಿಕೆ, ಕಾಂಗ್ರೆಸ್ ಕೆಂಡ!

Ranji Trophy: ಒಂದೂ ರನ್ ನೀಡದೇ 5 ವಿಕೆಟ್.. Amit Shukla ಐತಿಹಾಸಿಕ ದಾಖಲೆ, IPL 2026 ಹರಾಜಿಗೆ ಭರ್ಜರಿ ಸಿದ್ಧತೆ!

ಟ್ರಾಫಿಕ್ ಪೊಲೀಸ್ ಆಗಿ ಕರ್ತವ್ಯ ನಿರ್ವಹಿಸಿದ ಸುರೇಶ್ ಕುಮಾರ್; ಅನುಭವ ಹಂಚಿಕೊಂಡ ಬಿಜೆಪಿ ಶಾಸಕ

ಅಂಕೋಲಾ ಬಳಿ ಟ್ಯಾಂಕರ್‌ ಪಲ್ಟಿ; ಮೀಥೇನ್ ಅನಿಲ ಸೋರಿಕೆ, ಸ್ಥಳದಲ್ಲಿ ನಿಷೇಧಾಜ್ಞೆ ಜಾರಿ!

SCROLL FOR NEXT