ರಾಜಕೀಯ

ಉಗ್ರರನ್ನು ನಿರಂತರವಾಗಿ ಬೆಂಬಲಿಸುವ ಮೂಲಕ ಕಾಂಗ್ರೆಸ್ ಭಯೋತ್ಪಾದಕರ ಪಕ್ಷವಾಗಿ ಬದಲಾಗಿದೆ: ನಳಿನ್ ಕುಮಾರ್ ಕಟೀಲ್

Ramyashree GN

ಉತ್ತರ ಕನ್ನಡ: ಭಯೋತ್ಪಾದಕರನ್ನು ನಿರಂತರವಾಗಿ ಬೆಂಬಲಿಸುವ ಮೂಲಕ ಕಾಂಗ್ರೆಸ್ ಭಯೋತ್ಪಾದಕರ ಪಕ್ಷವಾಗಿ ಬದಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಂಗಳವಾರ ಆರೋಪಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ಪಟ್ಟಣದಲ್ಲಿ ನಡೆದ ರಾಜ್ಯ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಭಯೋತ್ಪಾದಕರ ರಕ್ಷಣೆ ಮಾಡುತ್ತಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಭಯೋತ್ಪಾದನೆ, ಡ್ರಗ್ಸ್ ಮತ್ತು ಮರಳು ಮಾಫಿಯಾವನ್ನು ಬೆಂಬಲಿಸಿತು. ಯಡಿಯೂರಪ್ಪ ಮತ್ತು ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದಿಂದ ಡ್ರಗ್ಸ್ ಮಾಫಿಯಾಗೆ ತಡೆ ನೀಡಿದೆ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಂಗಳೂರಿನ ಕುಕ್ಕರ್ ಸ್ಫೋಟದ ಬಗ್ಗೆ ಲಘುವಾಗಿ ಯೋಚಿಸಿದ್ದಾರೆ. ಕಾಂಗ್ರೆಸ್ ರಾಜ್ಯಾಧ್ಯಕ್ಷರು ವಿಭಜಕ ಶಕ್ತಿಗಳು, ದೇಶವಿರೋಧಿಗಳು ಮತ್ತು ಭ್ರಷ್ಟರನ್ನು ಬೆಂಬಲಿಸುತ್ತಾರೆ. ಈಗ ಅದನ್ನು ಭಯೋತ್ಪಾದಕರ ಪಕ್ಷ ಎಂದು ಕರೆಯಬಹುದು ಎಂದು ಕಟೀಲ್ ಹೇಳಿದ್ದಾರೆ.

ಸ್ವಾತಂತ್ರ್ಯದ ಮೊದಲು ಮತ್ತು ಸ್ವಾತಂತ್ರ್ಯದ ನಂತರ ಜೈಲು ಪಾಲಾದ ಏಕೈಕ ನಾಯಕ ಸಾವರ್ಕರ್. ಸಾವರ್ಕರ್ ಮಾತ್ರವಲ್ಲ, ಕಾಂಗ್ರೆಸ್ ಪಕ್ಷ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಕೂಡ ಅವಮಾನಿಸಿದೆ. ಅಂಬೇಡ್ಕರ್ ಹೆಸರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೂ, ಅಂಬೇಡ್ಕರ್ ಅವರಿಗೆ ಚುನಾವಣೆಗೆ ಸ್ಪರ್ಧಿಸಲು ಅವಕಾಶವನ್ನೇ ನೀಡಿರಲಿಲ್ಲ. ಅವರ ನಿಧನದ ನಂತರವೂ ಪಕ್ಷವು ಅವರ ಅಂತಿಮ ವಿಧಿವಿಧಾನಗಳನ್ನು ಸರಿಯಾಗಿ ನಡೆಸಲಿಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸ್ವಾತಂತ್ರ್ಯ ಪೂರ್ವದಲ್ಲಿ ಇದ್ದಂತಿಲ್ಲ. ಬದಲಾಗಿದೆ ಎಂದರು.

SCROLL FOR NEXT