ಬಿಎಲ್ ಸಂತೋಷ್ ಮತ್ತು ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

'ಅವನ್ಯಾರೋ ಜೋಳಿಗೆ ಹಿಡಿದುಕೊಂಡು ಓಡಾಡೋನು ಏನೋ‌ ಹೇಳಿದ್ದಾನೆ- ಕರ್ನಾಟಕಕ್ಕೂ ನಿನಗೂ ಏನ್ ಸಂಬಂಧ, ರಾಜ್ಯಕ್ಕೆ ನಿನ್ನ ಕೊಡುಗೆ ಏನು?'

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ವಿರುದ್ಧ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡರ ಕುಟುಂಬ, ಜೆಡಿಎಸ್‌ ಹಾಗೂ ಪಂಚರತ್ನ ಯೋಜನೆಗಳ ಬಗ್ಗೆ ಬಿ.ಎಲ್.ಸಂತೋಷ್ ನೀಡಿರುವ ಹೇಳಿಕೆಗೆ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅವನ್ಯಾರೋ ಜೋಳಿಗೆ ಹಿಡಿದುಕೊಂಡು ಓಡಾಡೋನು ಏನೋ‌ ಹೇಳಿದ್ದಾನೆ. ಕರ್ನಾಟಕಕ್ಕೂ ನಿನಗೂ ಏನ್ ಸಂಬಂಧ, ಕರ್ನಾಟಕಕ್ಕೆ ನಿನ್ನ ಕೊಡುಗೆ ಏನು?...’ ‘ಮಿಸ್ಟರ್ ಸಂತೋಷ್, ಲೂಟಿ ದರೋಡೆ ಮಾಡಿ ಕರ್ನಾಟಕದ ಹಣವನ್ನು ಕೊಂಡೊಯ್ದಿದ್ದೀರಾ. ಸಂತೋಷವಾಗಿದ್ದೀರಂತೆ ಲೂಟಿ ಹೊಡೆದು. ರಾಜ್ಯದಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ಮಾಡುವವರು, ವಾಮಾಚಾರ ಮಾಡುವವರಿಂದ ಹಣ ತೆಗೆದುಕೊಂಡು ಆಪರೇಷನ್ ಕಮಲ ಮಾಡಿ ನಮ್ಮ‌ ಸರ್ಕಾರ ಉರುಳಿಸಿದಿರಿ’ ಎಂದು ಕಿಡಿಕಾರಿದರು.

‘ಪ್ರಧಾನಿ‌ ಅವರ ಬಳಿ ನಮ್ಮ ಕುಟುಂಬ ಬಗ್ಗೆ ಕೇಳಿ. ಲಘುವಾಗಿ ನಮ್ಮ ಪಕ್ಷದ ಬಗ್ಗೆ ಮಾತನಾಡಬೇಡಿ. 2023ಕ್ಕೆ ನಿಮ್ಮ ಪರಿಸ್ಥಿತಿ ಏನಾಗಿರುತ್ತದೆ ಎನ್ನುವುದನ್ನು ಒಮ್ಮೆ ಊಹೆ ಮಾಡಿಕೊಳ್ಳಿ’ಎಂದರು.

‘ನಿಮ್ಮದು 40 ಪರ್ಸೆಂಟ್‌ ಸರ್ಕಾರ. ನಮ್ಮ ಬಗ್ಗೆ ಮಾತಾಡುವ ನೈತಿಕತೆ ಇಲ್ಲ. ಮೋದಿ ಹೆಸರಿನಲ್ಲಿ ಹೊಟ್ಟೆಪಾಡು ನೋಡ್ಕೊಂಡಿರೋರು ನೀವು.

ನಾನು ಸರ್ಕಾರ ಮಾಡೋಣ ಎಂದು ನಿಮ್ಮ ಮನೆ ಬಾಗಿಲಿಗೆ ಬಂದಿರಲಿಲ್ಲ. ಯಾರು ಯಾರ ಮನೆ ಬಾಗಿಲಿಗೆ ಬಂದಿದ್ದರು ಎನ್ನುವುದು ರಾಜ್ಯದ ಜನತೆಗೆ ಚೆನ್ನಾಗಿ ಗೊತ್ತು. ನಮ್ಮ ಪಕ್ಷದ ಬಗ್ಗೆ ಲಘುವಾಗಿ ಮಾತಾನಾಡಬೇಡಿ ಮಿಸ್ಟರ್ ಅಶೋಕ್, ಮಿಸ್ಟರ್ ಸಂತೋಷ್’ ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!