ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(ಸಂಗ್ರಹ ಚಿತ್ರ) 
ರಾಜಕೀಯ

ಮುಖ್ಯಮಂತ್ರಿ ಬೊಮ್ಮಾಯಿ ಸೋಮವಾರ ದೆಹಲಿ ಭೇಟಿ ಸಾಧ್ಯತೆ: ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಹೈಕಮಾಂಡ್ ಭೇಟಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಡಿದ್ದು ಸೋಮವಾರ ದೆಹಲಿಗೆ ಪ್ರಯಾಣ ಬೆಳೆಸಿ ಹೈಕಮಾಂಡ್ ಭೇಟಿ ಮಾಡುವ ಸಾಧ್ಯತೆಯಿದೆ. ಅದಕ್ಕೆ ಕಾರಣ ಸಚಿವ ಸಂಪುಟ ವಿಸ್ತರಣೆ ಮತ್ತು ಸಚಿವ ಸ್ಥಾನ ಸಿಗದಿರುವ ಆಕಾಂಕ್ಷಿಗಳ ಅಸಮಾಧಾನವನ್ನು ತಣಿಸುವ ಕುರಿತು ಚರ್ಚೆಗಾಗಿ.

ಬೆಳಗಾವಿ/ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಡಿದ್ದು ಸೋಮವಾರ ದೆಹಲಿಗೆ ಪ್ರಯಾಣ ಬೆಳೆಸಿ ಹೈಕಮಾಂಡ್ ಭೇಟಿ ಮಾಡುವ ಸಾಧ್ಯತೆಯಿದೆ. ಅದಕ್ಕೆ ಕಾರಣ ಸಚಿವ ಸಂಪುಟ ವಿಸ್ತರಣೆ ಮತ್ತು ಸಚಿವ ಸ್ಥಾನ ಸಿಗದಿರುವ ಆಕಾಂಕ್ಷಿಗಳ ಅಸಮಾಧಾನವನ್ನು ತಣಿಸುವ ಕುರಿತು ಚರ್ಚೆಗಾಗಿ.

ಸಚಿವ ಸಂಪುಟದಲ್ಲಿ ಮತ್ತೆ ಸ್ಥಾನ ಸಿಗದ್ದಕ್ಕೆ ತೀವ್ರ ಬೇಸರಗೊಂಡಿದ್ದ ಹಿರಿಯ ಶಾಸಕರಾದ ಕೆ.ಎಸ್‌.ಈಶ್ವರಪ್ಪ ಮತ್ತು ರಮೇಶ್‌ ಜಾರಕಿಹೊಳಿ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿನ್ನೆ ಮಾತುಕತೆ ನಡೆಸಿದ್ದು, ಸಂಧಾನ ಫಲಪ್ರದವಾಗಿದೆ. ಉಭಯ ನಾಯಕರ ಸಮ್ಮುಖದಲ್ಲೇ ಮುಖ್ಯಮಂತ್ರಿ ಬೊಮ್ಮಾಯಿ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಮುಂದಿನ ವಾರ ಸಂಪುಟದ ಆಕಾಂಕ್ಷಿಗಳ ಪಟ್ಟಿಯೊಂದಿಗೆ ದೆಹಲಿಗೆ ಬರುವಂತೆ ಸೂಚಿಸಿದ್ದಾರೆ. ಅಧಿವೇಶನದ ಕಾರ್ಯಕಲಾಪ ನೋಡಿಕೊಂಡು ಬರುವ ಸೋಮವಾರವೇ ದೆಹಲಿಗೆ ತೆರಳುವ ಸಾಧ್ಯತೆಯಿದೆ. 

ವರಿಷ್ಠರು ಒಪ್ಪಿದರೆ ಜನವರಿ ಮೊದಲ ವಾರದಲ್ಲೇ ಇಬ್ಬರಿಗೂ ಸಚಿವ ಸ್ಥಾನ ನೀಡುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಈಶ್ವರಪ್ಪ ಮತ್ತು ರಮೇಶ್‌ ಜಾರಕಿಹೊಳಿ ಅವರು ಗುರುವಾರದಿಂದ ಸದನಕ್ಕೆ ಹಾಜರಾಗಲು ಒಪ್ಪಿಕೊಂಡಿದ್ದಾರೆ. ಸಂಧಾನ ಸಭೆಯ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಈಶ್ವರಪ್ಪ, ಮಂಗಳವಾರ ಮುಖ್ಯಮಂತ್ರಿ ಬೊಮ್ಮಾಯಿ ಅವರು ನನಗೆ ಕರೆ ಮಾಡಿ ರಮೇಶ ಜಾರಕಿಹೊಳಿ ಜೊತೆ ಆಗಮಿಸುವಂತೆ ತಿಳಿಸಿದ್ದರು. ಅದರಂತೆ ಬುಧವಾರ ರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ರಮೇಶ ಜಾರಕಿಹೊಳಿ ಜೊತೆ ಆಗಮಿಸಿ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿದ್ದೇನೆ. 

‘ಇಬ್ಬರನ್ನೂ ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಹೈಕಮಾಂಡ್‌ ಜೊತೆ ಮಾತನಾಡಿದ್ದೇನೆ. ಅವರಿಂದ ಸಕಾರಾತ್ಮಕ ಪ್ರತಿಕ್ರಿಯೆ ಈಗಾಗಲೇ ದೊರೆತಿದೆ. ಆದರೂ, ಮತ್ತೊಮ್ಮೆ ಇದನ್ನು ದೃಢಪಡಿಸಿಕೊಳ್ಳುವ ಸಲುವಾಗಿ ಈ ಸದನ ಮುಗಿಯುವುದರೊಳಗೆ, ಬಹುಶಃ ಸೋಮವಾರ ಮತ್ತೊಮ್ಮೆ ದೆಹಲಿಗೆ ತೆರಳಿ ವರಿಷ್ಠರ ಜೊತೆ ಮಾತುಕತೆ ನಡೆಸುತ್ತೇನೆ. ವರಿಷ್ಠರು ಹಸಿರು ನಿಶಾನೆ ತೋರಿಸಿದರೆ ಸಂಪುಟ ವಿಸ್ತರಣೆಗೆ ಜನವರಿಯಲ್ಲಿ ಚಾಲನೆ ಸಿಗಬಹುದು’ ಎಂದು ಬೊಮ್ಮಾಯಿ ತಿಳಿಸಿದ್ದಾರೆ ಎಂದು ಹೇಳಿದರು. ಮುಖ್ಯಮಂತ್ರಿಗಳ ಮೇಲೆ ನನಗೆ ಭರವಸೆ ಇದೆ. ಹೀಗಾಗಿ, ನನಗೆ ಹಾಗೂ ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನ ಸಿಗುವುದು ಬಹುತೇಕ ಖಚಿತ. ಬೇರೆಯವರ ಬಗ್ಗೆ ನನಗೆ ಗೊತ್ತಿಲ್ಲ. ಈ ಹಿನ್ನೆಲೆಯಲ್ಲಿ ಗುರುವಾರದಿಂದ ನಾವು ಸದನಕ್ಕೆ ಹಾಜರಾಗುತ್ತಿದ್ದೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT