ರಾಜಕೀಯ

ಕರ್ನಾಟಕ ವಿಧಾನಸಭಾ ಚುನಾವಣೆ: ಪಕ್ಷದ ಬಿ.ಫಾರ್ಮ್ ಕೊಡೋದು ನಾನು- ಹೆಚ್.ಡಿ.ದೇವೇಗೌಡ

Manjula VN

ರಾಯಚೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಯಾವ ಅಭ್ಯರ್ಥಿಗಳಿಗೆ ಬಿ-ಫಾರಂ ಸಿಗಬೇಕು ಎಂಬುದನ್ನು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ನಿರ್ಧರಿಸಲಿದ್ದಾರೆ.

ಶಾಸಕ ರಾಜಾ ವೆಂಕಟಪ್ಪ ನಾಯ್ಕರ ಸಹೋದರ ರಾಜಾ ರಾಮಚಂದ್ರ ನಾಯ್ಕರ ವಿವಾಹ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಗೌಡರು ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣಕ್ಕೆ ಭೇಡಿ ನೀಡಿದ್ದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಅಭ್ಯರ್ಥಿಗಳ ಹೆಸರನ್ನು ಶಿಫಾರಸು ಮಾಡುತ್ತಾರೆ ಮತ್ತು ಯಾರು ಸ್ಪರ್ಧಿಸಬೇಕೆಂದು ಸೂಚಿಸುತ್ತಾರೆ, ಆದರೆ ಬಿ ಫಾರಂ ನೀಡುವ ಕುರಿತು ಅಂತಿಮ ಅಧಿಕಾರ ನಾನು ತೆಗೆದುಕೊಳ್ಳುತ್ತೇನೆಂದು ಹೇಳಿದ್ದಾರೆ.

ಬಳಿಕ ನಿಖಿಲ್ ಕುಮಾರಸ್ವಾಮಿ ಅವರು ಮಂಡ್ಯ ಅಥವಾ ಕನಕಪುರದಿಂದ ಸ್ಪರ್ಧಿಸುತ್ತಾರೆ ಎಂಬ ವದಂತಿಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಚುನಾವಣೆಯಲ್ಲಿ ಜೆಡಿಎಸ್ ಬಹುಮತ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹೆಚ್ ಡಿ ಕುಮಾರಸ್ವಾಮಿ ಅವರು ತುಮಕೂರಿನಲ್ಲಿ ಪಂಚರತ್ನ ಕಾರ್ಯಕ್ರಮದಲ್ಲಿ ನಿರತರಾಗಿದ್ದರಿಂದ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದರು.

ರಾಮನಗರದಲ್ಲಿ ರಾಮಮಂದಿರ ನಿರ್ಮಾಣದ ಕುರಿತು ಚರ್ಚೆಗಳು ನಡೆಯುತ್ತಿದ್ದು, ದೇವಸ್ಥಾನಕ್ಕೂ ಸಚಿವ ಸಿಎನ್ ಅಶ್ವತ್ಥ್ ನಾರಾಯಣ್ ಅವರಿಗೂ ಇರುವ ಸಂಬಂಧವನ್ನು ತಿಳಿಯಬೇಕಿದೆ ಎಂದು ಹೇಳಿದರು.

SCROLL FOR NEXT