ಕೇಂದ್ರ ಸಚಿವ ಅಮಿತ್ ಶಾ 
ರಾಜಕೀಯ

ನಾಳೆ, ನಾಡಿದ್ದು ಅಮಿತ್ ಶಾ ರಾಜ್ಯ ಪ್ರವಾಸ: ಚುನಾವಣೆಗೆ ಬಿಜೆಪಿ ತಯಾರಿ ಕುರಿತು ಪರಿಶೀಲನೆ ಸಾಧ್ಯತೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಮತ್ತು ಶನಿವಾರ ರಾಜ್ಯ ಪ್ರವಾಸದಲ್ಲಿರಲಿದ್ದು, ಈ ವೇಳೆ ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಸಿದ್ಧತೆಗಳನ್ನು ಪರಿಶೀಲನೆ ನಡೆಸುವ ಸಾಧ್ಯತೆಗಳಿವೆ.

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಮತ್ತು ಶನಿವಾರ ರಾಜ್ಯ ಪ್ರವಾಸದಲ್ಲಿರಲಿದ್ದು, ಈ ವೇಳೆ ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಸಿದ್ಧತೆಗಳನ್ನು ಪರಿಶೀಲನೆ ನಡೆಸುವ ಸಾಧ್ಯತೆಗಳಿವೆ.

ಒಕ್ಕಲಿಗ ಪ್ರಾಬಲ್ಯವಿರುವ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ತನ್ನ ಸಾಧನೆಯನ್ನು ಸುಧಾರಿಸಿಕೊಳ್ಳಲು ತೀವ್ರ ಪ್ರಯತ್ನ ನಡೆಸುತ್ತಿದೆ. ರಾಜ್ಯಕ್ಕೆ ಭೇಟಿ ನೀಡುತ್ತಿರುವ  ಅಮಿತ್ ಶಾ ಅವರು ಶುಕ್ರವಾರ ಮಂಡ್ಯದಲ್ಲಿ ರ್ಯಾಲಿ ಮತ್ತು ಶನಿವಾರ ಬೆಂಗಳೂರಿನಲ್ಲಿ ಪಕ್ಷದ ಕಾರ್ಯಕರ್ತರ ಸಮಾವೇಶವನ್ನು ಮಾತನಾಡಲಿದ್ದಾರೆ.

ಮಂಡ್ಯ, ಮೈಸೂರು, ಹಾಸನ ಮತ್ತು ಹಳೆ ಮೈಸೂರು ಭಾಗದ ಇತರ ಜಿಲ್ಲೆಗಳಿಂದ ಸುಮಾರು 50,000 ಜನರು ಮಂಡ್ಯ ರ್ಯಾಲಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಮಂಡ್ಯದಲ್ಲಿ ಹಾಲು ಒಕ್ಕೂಟದ ಕಾರ್ಯಕ್ರಮದಲ್ಲೂ ಶಾ ಭಾಗವಹಿಸಲಿದ್ದಾರೆ.

ಹಳೆ ಮೈಸೂರು ಭಾಗದ ಮತದಾರರ ಮೇಲೆ ಕಾಂಗ್ರೆಸ್ ಮತ್ತು ಜೆಡಿಎಸ್ ಸಾಕಷ್ಟು ಹಿಡಿತ ಸಾಧಿಸಿದ್ದು, 2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಪ್ರದರ್ಶನ ನೀಡಿದ್ದರೂ, 2018 ರ ವಿಧಾನಸಭೆ ಚುನಾವಣೆಯಲ್ಲಿ ಅದರ ಸಾಧನೆ ನಿರೀಕ್ಷೆಗೆ ತಕ್ಕಂತೆ ಇರಲಿಲ್ಲ.

ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಮಹತ್ವಾಕಾಂಕ್ಷೆಯ ಗುರಿಯನ್ನು ಹೊಂದಿರುವ ಬಿಜೆಪಿ, ಈ ಪ್ರದೇಶದಲ್ಲಿ ತನ್ನ ಕಾರ್ಯಕ್ಷಮತೆಯನ್ನು ಸುಧಾರಿಸಲು ಶಾ ಅವರು ಮಂಡ್ಯ ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಈ ಭೇಟಿಯು ಮಹತ್ವ ಪಡೆದುಕೊಂಡಿದೆ.

ಶನಿವಾರ ಬೆಂಗಳೂರಿನಲ್ಲಿ ಪಕ್ಷದ ನಾಯಕರನ್ನು ಉದ್ದೇಶಿಸಿ ಶಾ ಮಾತನಾಡಲಿದ್ದಾರೆ. ಬೂತ್‌ಗಳ ಉಸ್ತುವಾರಿ ಸೇರಿದಂತೆ ಸುಮಾರು 10,000 ಜನರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಮುಖಂಡರೊಬ್ಬರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT