ಯತೀಂದ್ರ ಸಿದ್ದರಾಮಯ್ಯ 
ರಾಜಕೀಯ

ಅಪ್ಪನಿಗಾಗಿ 'ವರುಣಾ' ಬಿಟ್ಟು ಕೊಟ್ಟು, ಅವರ ಗೆಲುವಿಗೆ ಶ್ರಮಿಸುವೆ: ಕ್ಷೇತ್ರ ತ್ಯಾಗಕ್ಕೆ ಯತೀಂದ್ರ ಸಿದ್ದರಾಮಯ್ಯ ಮುಂದು!

ನನ್ನ ತಂದೆ, ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ನಾನು ಪ್ರತಿನಿಧಿಸುತ್ತಿರುವ ವರುಣಾ ಕ್ಷೇತ್ರ ಬಿಟ್ಟು ಕೊಡುತ್ತೇನೆ. ಜನರು ಅಪೇಕ್ಷಿಸಿದರೆ ಇಲ್ಲಿಂದಲೇ ಸ್ಪರ್ಧಿಸಲಿ ಎಂದು ಕಾಂಗ್ರೆಸ್ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಮೈಸೂರು: ನನ್ನ ತಂದೆ, ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ನಾನು ಪ್ರತಿನಿಧಿಸುತ್ತಿರುವ ವರುಣಾ ಕ್ಷೇತ್ರ ಬಿಟ್ಟು ಕೊಡುತ್ತೇನೆ. ಜನರು ಅಪೇಕ್ಷಿಸಿದರೆ ಇಲ್ಲಿಂದಲೇ ಸ್ಪರ್ಧಿಸಲಿ ಎಂದು ಕಾಂಗ್ರೆಸ್ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಅಪ್ಪ ನನ್ನ ಕ್ಷೇತ್ರದಿಂದ ಸ್ಪರ್ಧಿಸಿದರೆ ನಾನು ಬೇರೆಲ್ಲೂ ಸ್ಪರ್ಧಿಸುವುದಿಲ್ಲ. ಇಲ್ಲೇ ಇದ್ದು ಅವರ ಗೆಲುವಿಗಾಗಿ ಶ್ರಮಿಸುವೆ’ ಎಂದರು.

ತಂದೆ ವರುಣಾಗೆ ಬಂದರೆ ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಹೋಗುತ್ತೇನೆ ಎಂಬುದು ಸುಳ್ಳು. ಆ ರೀತಿಯ ಯೋಚನೆ ಮಾಡಿಲ್ಲ. ಕ್ಚೇತ್ರದ ಆಯ್ಕೆಗೆ ಇನ್ನೂ ಸಮಯವಿದೆ. ಸಿದ್ದರಾಮಯ್ಯ ಅವರಿಗೆ ಬಹಳಷ್ಟು ಕ್ಷೇತ್ರಗಳಿಂದ ಆಹ್ವಾನವಿದೆ. ಅವರು ಹಾಗೂ ಪಕ್ಷದ ಹೈಕಮಾಂಡ್ ಅಳೆದು–ತೂಗಿ ನಿರ್ಧರಿಸಲಿದ್ದಾರೆ. ಈಗಲೇ ತೀರ್ಮಾನಕ್ಕೆ ಬರಬೇಕಾದ ತುರ್ತಿಲ್ಲ’ ಎಂದು ಪ್ರತಿಕ್ರಿಯಿಸಿದರು.

‘ದಾವಣೆಗೆರೆಯಲ್ಲಿ ಆಯೋಜಿಸಿರುವ ‘ಸಿದ್ದರಾಮೋತ್ಸವ’ ಶಕ್ತಿ ಪ್ರದರ್ಶನದ ಕಾರ್ಯಕ್ರಮವಲ್ಲ. ತಂದೆಯ 75ನೇ ಜನ್ಮದಿನಾಚರಣೆ ಸಮಾರಂಭವಷ್ಟೆ. ಅದರಲ್ಲಿ ರಾಜಕೀಯ ಹುಡುಕಬೇಡಿ. ಎಲ್ಲ ಪಕ್ಷದವರನ್ನೂ ಸೇರಿಸಿಕೊಂಡು ಅಮೃತ ಮಹೋತ್ಸವ ಆಚರಿಸಿದರೆ ರಾಜಕೀಯವಾಗಿ ಬೇರೆ ರೀತಿಯ ಚರ್ಚೆಗಳಾಗುತ್ತವೆ.

ಹೀಗಾಗಿ, ಕಾಂಗ್ರೆಸ್ ನಾಯಕರ ಸಮ್ಮುಖದಲ್ಲೇ ನಡೆಸಲಿದ್ದೇವೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕಾಗಿ ಹೀಗೆಲ್ಲಾ ಬಿಂಬಿಸಿಕೊಳ್ಳುತ್ತಿದ್ದಾರೆ ಎನ್ನುವುದು ಸರಿಯಲ್ಲ. ಈಗಲೇ ಬಿಂಬಿಸಿಕೊಳ್ಳುವ ಅಗತ್ಯ ಯಾರಿಗೂ ಇಲ್ಲ’ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್

ಒಂದು ಕ್ಷಣದ ನಿರ್ಲಕ್ಷ್ಯ, ವಿಚಿತ್ರ ರನೌಟ್‌ಗೆ ತಿಲಕ್ ವರ್ಮಾ ಬಲಿ; ಗಂಭೀರ್ ಫುಲ್ ಗರಂ! ಆಗಿದ್ದೇನು? Video

3rd T20I: ಆಲೌಟ್ ನಲ್ಲೂ ವಿಚಿತ್ರ ದಾಖಲೆ ಬರೆದ ಟೀಂ ಇಂಡಿಯಾ!

"ಜಗತ್ತಿಗೆ ಅಗತ್ಯವಿರುವ ಪರಿಹಾರಗಳು ನಿಮ್ಮಲ್ಲಿವೆ": ಚೆನ್ನೈನಲ್ಲಿ 'Gen Z ಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತು