ರಾಜಕೀಯ

ಮೂಲ ಕಾಂಗ್ರೆಸ್ಸಿಗರು-ಹೊಸ ನಾಯಕರ ನಡುವಿನ ತಿಕ್ಕಾಟ: ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ 'ಕೈ' ನಲ್ಲಿ ಸಂಕಷ್ಟ!

Shilpa D

ಬೆಂಗಳೂರು: ಮೂಲ ಕಾಂಗ್ರೆಸ್ ನಾಯಕರು ಮತ್ತು ಹೊಸಬರ ನಡುವಿನ ಭಿನ್ನಾಭಿಪ್ರಾಯಗಳು ಪಕ್ಷವನ್ನು ಕುಗ್ಗಿಸುತ್ತಲೇ ಇದ್ದು, 2023 ರ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆಯಿದೆ.

ಕರ್ನಾಟಕ ಚುನಾವಣಾ ತಂತ್ರಗಾರ ಸುನೀಲ್ ಕಾನುಗೋಳ್ ಅವರು 224 ವಿಧಾನಸಭಾ ಕ್ಷೇತ್ರಗಳ ಸಮೀಕ್ಷೆ ನಡೆಸಿದ್ದು , ಅದರ ಆಧಾರದ ಮೇಲೆ ಪಕ್ಷದಲ್ಲಿ ನಡೆಯುತ್ತಿರುವ ಚಟುವಟಿಕೆಗಳು ಮುಂಬರುವ ವಿಧಾನಸಭೆ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಿಷ್ಠಾವಂತರು, ಹಿತೈಷಿಗಳ ಹಿತಾಸಕ್ತಿ ಕಾಪಾಡಲು ಒತ್ತಡ ಹೇರುತ್ತಾರೆ. ತಮ್ಮ ಬೆಂಬಲಿಗರ ಹಿತಾಸಕ್ತಿಗಳನ್ನು ಕಾಪಾಡುವುದು ನಾಯಕರಿಗೆ ಅತಿಮುಖ್ಯವಾಗಿದೆ.

ಎಂಎಲ್‌ಸಿ ಸ್ಥಾನಕ್ಕೆ ನಾಮನಿರ್ದೇಶನ ಮಾಡದ ಕಾರಣ ಮನನೊಂದಿದ್ದ ಮಾಜಿ ಸಚಿವ ಎಂಆರ್ ಸೀತಾರಾಮ್ ಅವರನ್ನು ಸಿದ್ದರಾಮಯ್ಯ ಭೇಟಿ ಮಾಡಿ ಪಕ್ಷ ತೊರೆಯದಂತೆ ಮನವೊಲಿಸಿದ್ದಾರೆ, ಭಾರತೀಯ ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಸೀತಾರಾಮ್ ಪುತ್ರ ರಕ್ಷಾ ರಾಮಯ್ಯ ಅವರಿಗೆ ಟಿಕೆಟ್ ನೀಡುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದು ವರದಿಯಾಗಿದೆ.

ಮತ್ತೊಂದೆಡೆ ತಮ್ಮ ವಿರೋಧಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿರುವುದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕೆಂಡಾಮಂಡಲವಾಗಿರುವ ಮಾಜಿ ಸಂಸದ ಕೆ.ಎಚ್ ಮುನಿಯಪ್ಪ, ಮನೆಗೆ ಭೇಟಿ ನೀಡಿದ್ದ ಡಿಕೆ ಶಿವಕುಮಾರ್ ಮತ್ತು ಬಿಕೆ ಹರಿಪ್ರಸಾದ್ ಹಾಗೂ ಎಚ್. ಕೆ ಪಾಟೀಲ್ ಅವರ ಮನವೊಲಿಸಲು ಯತ್ನಿಸಿದ್ದಾರೆ.

ಮಾಜಿ ಶಾಸಕರಾದ ಚಿಂತಾಮಣಿಯ ಡಾ.ಎಂ.ಸಿ.ಸುಧಾಕರ್ ಮತ್ತು ಮುಳಬಾಗಿಲು ಕೊತ್ತೂರು ಮಂಜುನಾಥ್  ಬಹುಕಾಲದಿಂದ ಮುನಿಯಪ್ಪ ಅವರ ವಿರೋಧಿಗಳಾಗಿದ್ದಾರೆ.

ಈ ಇಬ್ಬರು ನಾಯಕರು ಜೆಡಿಎಸ್‌ ಸೇರಲು ಸಿದ್ಧತೆ ನಡೆಸುತ್ತಿದ್ದನ್ನು ಅರಿತ ಡಿಕೆ ಶಿವಕುಮಾರ್ ಈ ಪ್ರದೇಶದ ಏಕೈಕ ಎಸ್‌ಸಿ (ಎಡ) ಪ್ರಮುಖ ನಾಯಕನನ್ನು ಪಕ್ಕದಲ್ಲೇ ಇರುವಂತೆ ಮನವೊಲಿಸಿದ್ದಾರೆ. ಹೀಗಾಗಿ ಈ ವಿಷಯವನ್ನು ಸಿದ್ದರಾಮಯ್ಯ ರಾಹುಲ್ ಗಾಂಧಿ ಅವರ ಬಳಿ ತೆಗೆದುಕೊಂಡು ಹೋಗುವ ಸಾಧ್ಯತೆಯಿದೆ.

SCROLL FOR NEXT