ದೇವೇಗೌಡರನ್ನು ಭೇಟಿ ಮಾಡಿದ ದ್ರೌಪದಿ ಮುರ್ಮು 
ರಾಜಕೀಯ

ರಾಷ್ಟ್ರಪತಿ ಚುನಾವಣೆ: ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿದ ದ್ರೌಪದಿ ಮುರ್ಮು

ಕರ್ನಾಟಕ ಪ್ರವಾಸದಲ್ಲಿರುವ ರಾಷ್ಟ್ರಪತಿ ಹುದ್ದೆಯ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಭಾನುವಾರ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರನ್ನು ಭೇಟಿ ಮಾಡಿದರು.

ಬೆಂಗಳೂರು: ಕರ್ನಾಟಕ ಪ್ರವಾಸದಲ್ಲಿರುವ ರಾಷ್ಟ್ರಪತಿ ಹುದ್ದೆಯ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಭಾನುವಾರ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರನ್ನು ಭೇಟಿ ಮಾಡಿದರು.

ರಾಷ್ಟ್ರಪತಿ ಸ್ಥಾನಕ್ಕೆ ಎನ್ ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರ ಜತೆ ಮಾಜಿ ಪ್ರಧಾನಿ‌ ಎಚ್ ಡಿ ದೇವೇಗೌಡ ಅವರನ್ನು ಭೇಟಿ ಮಾಡಿ ಮತಯಾಚಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಷಿ, ಕಿಶನ ರೆಡ್ಡಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, ಮಾಜಿ ಸಚಿವ ಎಚ್ ಡಿ ರೇವಣ್ಣ ಮತ್ತು ಇತರರು ಉಪಸ್ಥಿತರಿದ್ದರು.

ಕೆಲವು ದಿನಗಳ ಹಿಂದೆ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು, ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಹುದ್ದೆಗೆ ಆಯ್ಕೆಯಾಗುವುದು ಖಚಿತ. ಜೆಡಿಎಸ್ ನ ಬೆಂಬಲ ದ್ರೌಪದಿ ಅವರಿಗೆ ಅವಶ್ಯಕತೆ ಇಲ್ಲ. ಆದ್ರೂ ಬಿಜೆಪಿ ಅಭ್ಯರ್ಥಿಗೆ ಬೆಂಬಲಿಸುವುದಾಗಿ ಘೋಷಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT