ಜೆ.ಪಿ ನಡ್ಡಾ 
ರಾಜಕೀಯ

ವಿಧಾನಸಭೆ ಚುನಾವಣೆಗೂ ಮುನ್ನ ಇಮೇಜ್ ಸರಿಪಡಿಸಿಕೊಳ್ಳಲು ಬಿಜೆಪಿ ರಣತಂತ್ರ: ನಂದಿ ಬೆಟ್ಟದ ಬಳಿ ಚಿಂತನ-ಮಂಥನ ಸಭೆ!

ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭೆ ಚುನವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಎರಡು ದಿನಗಳ ಚಿಂತನಾ ಮಂಥನ ಸಭೆ ಹಮ್ಮಿಕೊಂಡಿದೆ.

ಬೆಂಗಳೂರು: ಮುಂದಿನ ವರ್ಷ ನಡೆಯಲಿರುವ ರಾಜ್ಯ ವಿಧಾನಸಭೆ ಚುನವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಎರಡು ದಿನಗಳ ಚಿಂತನಾ ಮಂಥನ ಸಭೆ ಹಮ್ಮಿಕೊಂಡಿದೆ.

ಜುಲೈ 14 ರಂದು ಬೆಂಗಳೂರಿನ ಹೊರಲಯದಲ್ಲಿರುವ ನಂದಿಬೆಟ್ಟ ಬಳಿ ಕಾರ್ಯಕ್ರಮ ಆಯೋಜಿಸಲಾಗಿದೆ. ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಮತ್ತಷ್ಟು ಪ್ರಬಲಗೊಳಿಸುವ ಹಿನ್ನೆಲೆಯಲ್ಲಿ ಬಿಜೆಪಿ  ಮುಂದಾಗಿದೆ.

ಮಿಷನ್ ದಕ್ಷಿಣ್ ಅಂಗವಾಗಿ ಕಳೆದ ವಾರ ಹೈದರಾಬಾದ್ ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಹಮ್ಮಿಕೊಳ್ಳಲಾಗಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್, ಹಲವಾರು ಕೇಂದ್ರ ಸಚಿವರು, ಕರ್ನಾಟಕ ಕೋರ್ ಕಮಿಟಿಯ ಸದಸ್ಯರು, ಸಚಿವರು ಮತ್ತು ಇತರರು ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

ಆಂತರಿಕ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಸದ್ಯದ ವಾತಾವರಣ ಪಕ್ಷಕ್ಕೆ ಪೂರಕವಾಗಿಲ್ಲ ಎಂದು ಬಿಜೆಪಿ ಮೂಲಗಳು ತಿಳಿಸಿವೆ.  ಕಳೆದ ಕೆಲವು ತಿಂಗಳುಗಳಲ್ಲಿ ಹಿಜಾಬ್ ಮತ್ತು ಪಠ್ಯಪುಸ್ತಕ ವಿವಾದಗಳು ಮತ್ತು ಪಿಎಸ್‌ಐ ನೇಮಕಾತಿ ಹಗರಣದಂತಹ ಅನೇಕ ಸಮಸ್ಯೆಗಳು ಸರ್ಕಾರದ ಇಮೇಜ್ ಅನ್ನು ಕೆಡಿಸಿವೆ. ಮತ್ತೊಂದೆಡೆ, ರಾಜ್ಯ ಕಾಂಗ್ರೆಸ್ ನಾಯಕರು ರಾಜ್ಯ ಸರ್ಕಾರವನ್ನು ಮೂಲೆಗುಂಪು ಮಾಡುತ್ತಿದ್ದಾರೆ' ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Jantar Mantar ಬಳಿ ಭಾರೀ ಹೈಡ್ರಾಮಾ: ಬ್ಯಾರಿಕೇಡ್ ದಾಟಿದ CJP ನಾಯಕರು ಪೊಲೀಸ್ ವಶಕ್ಕೆ; ಪ್ರತಿರೋಧ ನಿಷೇಧ ಸಾಧ್ಯವಿಲ್ಲ-ಕೇಂದ್ರದ ವಿರುದ್ಧ ದೀಪ್ಕೆ ಆಕ್ರೋಶ

‘ಪ್ರತಿಭಟನೆ ನಮ್ಮ ಹಕ್ಕು, ಬಂಧನಗಳಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ’: ದೇಶಾದ್ಯಂತ ಚಳವಳಿ ವಿಸ್ತರಿಸಲು Cockroach Janta Party ಪಣ (INTERVIEW)

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

SC/ST ಮೀಸಲಾತಿ ಹೆಚ್ಚಳ ರದ್ದು: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬಿಗ್ ಶಾಕ್, ಭಾರೀ ಹಿನ್ನಡೆ..!

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!