ಹೆಚ್.ಡಿ.ಕುಮಾರಸ್ನಾಮಿ 
ರಾಜಕೀಯ

ಸಿಜೆಐ ಎನ್ ವಿ ರಮಣ ಅವರ ಹೇಳಿಕೆಗೆ ನನ್ನ ಸಹಮತ ಇದೆ: ಎಚ್ ಡಿ ಕುಮಾರಸ್ವಾಮಿ

ಸಿಜೆಐ ಎನ್ ವಿ ರಮಣ ಅವರ ಹೇಳಿಕೆಗೆ ನನ್ನ ಸಹಮತ ಇದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ಸಿಜೆಐ ಎನ್ ವಿ ರಮಣ ಅವರ ಹೇಳಿಕೆಗೆ ನನ್ನ ಸಹಮತ ಇದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌’ನ ಘನವೆತ್ತ ಮುಖ್ಯ ನ್ಯಾಯಮೂರ್ತಿಗಳಾದ ರಮಣ ಅವರು ಜೈಪುರದ ಸಭೆಗಳಲ್ಲಿ ಪ್ರತಿಪಕ್ಷಗಳು ಮತ್ತು ವಿಚಾರಣಾಧೀನ ಕೈದಿಗಳ ಬಗ್ಗೆ ಪ್ರಸ್ತಾಪಿಸಿರುವ ಮಹತ್ವದ ಅಂಶಗಳ ಬಗ್ಗೆ ನನ್ನ ಸಹಮತ ಇದೆ. ಅದಕ್ಕಾಗಿ ನಾನು ಮಾನ್ಯ ಮುಖ್ಯ ನ್ಯಾಯಮೂರ್ತಿಗಳನ್ನು ಅಭಿನಂದಿಸುತ್ತೇನೆ ಎಂದು ಕುಮಾರಸ್ವಾಮಿ ಭಾನುವಾರ ಸರಣಿ ಟ್ವೀಟ್ ಮಾಡಿದ್ದಾರೆ.

ಸ್ವಾತಂತ್ರ್ಯ ಭಾರತದಲ್ಲಿ ನಾವು 75 ವರ್ಷ ಸಾಗಿದ್ದೇವೆ. ಈ ಸಂದರ್ಭದಲ್ಲಿ ಮಾನ್ಯ ಮುಖ್ಯ ನ್ಯಾಯಮೂರ್ತಿಗಳು ಎಚ್ಚರಿಸಿ ಹೇಳಿರುವ ಮಾತುಗಳನ್ನು ಎಲ್ಲರೂ ಕೇಳಲೇಬೇಕು. ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ-ಪ್ರತಿಪಕ್ಷಗಳ ಜುಗುಲ್‌ʼಬಂದಿ ಇದ್ದರೆ ದೇಶಕ್ಕೆ ಶ್ರೇಯಸ್ಸು ಎಂದು ಹೆಚ್ ಡಿಕೆ ಟ್ವೀಟ್ ನಲ್ಲಿ ಅಭಿಪ್ರಾಯ ಹೊರ ಹಾಕಿದ್ದಾರೆ.

ಕ್ರಿಮಿನಲ್‌ ನ್ಯಾಯ ವ್ಯವಸ್ಥೆಯಲ್ಲಿ ವಿಚಾರಣೆಯೇ ಇಲ್ಲದೆ ದೀರ್ಘಕಾಲ ಬಂಧನದಲ್ಲಿ ಇರಿಸುವುದೂ ಒಂದು ಶಿಕ್ಷೆಯೇ ಸರಿ. ಆತುರ, ವಿವೇಚನೆ ಇಲ್ಲದ ಬಂಧನಗಳು, ಜಾಮೀನು ಪಡೆಯುವಲ್ಲಿನ ಕಷ್ಟಗಳ ಬಗ್ಗೆಯೂ ಮಾನ್ಯ ಮುಖ್ಯ ನ್ಯಾಯಮೂರ್ತಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಮಾನ್ಯ ಮುಖ್ಯ ನ್ಯಾಯಮೂರ್ತಿಗಳ ಮಾತುಗಳು ಹೊಣೆಗೇಡಿತನದ ಆಡಳಿತದ ಕಣ್ತೆರೆಸಲಿ ಎಂದು ಟ್ವೀಟ್ ನಲ್ಲಿ ಬರೆದಿದ್ದಾರೆ.

'ಸ್ವಾತಂತ್ರ್ಯ ಭಾರತದಲ್ಲಿ ನಾವು 75 ವರ್ಷ ಸಾಗಿದ್ದೇವೆ. ಈ ಸಂದರ್ಭದಲ್ಲಿ ಮಾನ್ಯ ಮುಖ್ಯ ನ್ಯಾಯಮೂರ್ತಿಗಳು ಎಚ್ಚರಿಸಿ ಹೇಳಿರುವ ಮಾತುಗಳನ್ನು ಎಲ್ಲರೂ ಕೇಳಲೇಬೇಕು. ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ-ಪ್ರತಿಪಕ್ಷಗಳ ಜುಗುಲ್‌ʼಬಂದಿ ಇದ್ದರೆ ದೇಶಕ್ಕೆ ಶ್ರೇಯಸ್ಸು. ಕ್ರಿಮಿನಲ್‌ ನ್ಯಾಯ ವ್ಯವಸ್ಥೆಯಲ್ಲಿ ವಿಚಾರಣೆಯೇ ಇಲ್ಲದೆ ದೀರ್ಘಕಾಲ ಬಂಧನದಲ್ಲಿ ಇರಿಸುವುದೂ ಒಂದು ಶಿಕ್ಷೆಯೇ ಸರಿ. ಆತುರ, ವಿವೇಚನೆ ಇಲ್ಲದ ಬಂಧನಗಳು, ಜಾಮೀನು ಪಡೆಯುವಲ್ಲಿನ ಕಷ್ಟಗಳ ಬಗ್ಗೆಯೂ ಮಾನ್ಯ ಮುಖ್ಯ ನ್ಯಾಯಮೂರ್ತಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಮಾನ್ಯ ಮುಖ್ಯ ನ್ಯಾಯಮೂರ್ತಿಗಳ ಮಾತುಗಳು ಹೊಣೆಗೇಡಿತನದ ಆಡಳಿತದ ಕಣ್ತೆರೆಸಲಿ'.

'ಸುಪ್ರೀಂ ಕೋರ್ಟ್‌'ನ ಘನವೇತ್ತ ಮುಖ್ಯ ನ್ಯಾಯಮೂರ್ತಿಗಳಾದ ರಮಣ ಅವರು ಜೈಪುರದ ಸಭೆಗಳಲ್ಲಿ ಪ್ರತಿಪಕ್ಷಗಳು ಮತ್ತು ವಿಚಾರಣಾಧೀನ ಕೈದಿಗಳ ಬಗ್ಗೆ ಪ್ರಸ್ತಾಪಿಸಿರುವ ಮಹತ್ವದ ಅಂಶಗಳ ಬಗ್ಗೆ ನನ್ನ ಸಹಮತ ಇದೆ. ಅದಕ್ಕಾಗಿ ನಾನು ಮಾನ್ಯ ಮುಖ್ಯ ನ್ಯಾಯಮೂರ್ತಿಗಳನ್ನು ಅಭಿನಂದಿಸುತ್ತೇನೆ' ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT