ಬಿ.ಎಸ್ ಯಡಿಯೂರಪ್ಪ 
ರಾಜಕೀಯ

ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಾಕ್ ಪಾಟ್?: 104 ಕ್ಷೇತ್ರಗಳಲ್ಲಿ 'ಕಮಲ' ಕಮಾಲ್; ಬಿಎಸ್ ವೈ ಅನುಪಸ್ಥಿತಿಯಲ್ಲೂ ಗೆಲ್ಲಲು ಶಕ್ತ!

ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕರಿಸಿ ಇನ್ನೂ 10 ದಿನಗಳಲ್ಲಿ ಒಂದು ವರ್ಷ ಪೂರೈಸಲಿದ್ದಾರೆ. ಇದೇ ವೇಳೆ ರಾಜ್ಯ ಬಿಜೆಪಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ.

ಮೈಸೂರು: ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅಧಿಕಾರ ಸ್ವೀಕರಿಸಿ ಇನ್ನೂ 10 ದಿನಗಳಲ್ಲಿ ಒಂದು ವರ್ಷ ಪೂರೈಸಲಿದ್ದಾರೆ. ಇದೇ ವೇಳೆ ರಾಜ್ಯ ಬಿಜೆಪಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 104, ಕಾಂಗ್ರೆಸ್ 70 ಹಾಗೂ ಜೆಡಿಎಸ್ 20ಕ್ಕಿಂತಲೂ ಹೆಚ್ಚಿನ ಸೀಟು ಗಳಿಸಲಿದೆ ಎಂದು ಆಂತರಿಕ ಸಮೀಕ್ಷೆ ವರದಿ ಬಹಿರಂಗಗೊಳಿಸಿದೆ. ಬಿಎಸ್‌ಪಿ, ಎಐಎಂಐಎಂ ಮತ್ತು ಎಎಪಿ ಸೇರಿದಂತೆ ಇತರ ಸಣ್ಣ ಪಕ್ಷಗಳು ಮತ್ತು ಸ್ವತಂತ್ರ ಪಕ್ಷಗಳು 20 ಸ್ಥಾನಗಳನ್ನು ಗಳಿಸುವ ನಿರೀಕ್ಷೆಯಿದೆ.

ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅನುಪಸ್ಥಿತಿಯಲ್ಲಿಯೂ ಪಕ್ಷ 104 ಸ್ಥಾನ ಗೆಲ್ಲುವಷ್ಟು ಸಮರ್ಥವಾಗಿದೆ ಎಂಬುದನ್ನು ಸಮೀಕ್ಷೆಯಲ್ಲಿ ಉಲ್ಲೇಖಿಸಲಾಗಿದೆ. ಕರಾವಳಿ ಕರ್ನಾಟಕ, ಮುಂಬೈ-ಕರ್ನಾಟಕ,ಕಲ್ಯಾಣ-ಕರ್ನಾಟಕ ಮತ್ತು ಮಧ್ಯ ಕರ್ನಾಟಕದಂತಹ ಬಿಜೆಪಿಯ ಸಾಂಪ್ರದಾಯಿಕ ಬೆಂಬಲ ಪ್ರದೇಶಗಳಿಂದ ಸಕಾರಾತ್ಮಕ ಪ್ರತಿಕ್ರಿಯೆಗಳು ಬರುತ್ತಿವೆ ಎಂದು ಸಮೀಕ್ಷೆ ಸೂಚಿಸುತ್ತದೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿಯೇತರ ಸಾಂಪ್ರದಾಯಿಕ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಹಾಸನ, ಕೋಲಾರ, ಮೈಸೂರು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಗಳಲ್ಲಿಯೂ ಬಿಜೆಪಿ ಪ್ರಾಬಲ್ಯವಿದ್ದರೂ, ಈ ಕ್ಷೇತ್ರಗಳಲ್ಲಿ ಪಕ್ಷ ಗೆಲ್ಲಿಸಲು ಸಮರ್ಥವಾಗಿಲ್ಲ, ಈ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಜೊತೆ ಬಿಜೆಪಿ ಹೋರಾಟ ನಡೆಸಬೇಕಿದೆ.

2008 ರಿಂದ ಸಾಂಪ್ರಾದಾಯಿಕವಾಗಿ ಬಿಜೆಪಿ ಗೆಲ್ಲುತ್ತಿರುವ ಕ್ಷೇತ್ರಗಳಲ್ಲಿ ಆಡಳಿತ ವಿರೋಧಿ ಅಲೆಯಿಂದ ಈ ಶಾಸಕರಿಗೆ ಯಾವುದೇ ಹಾನಿಯಾಗುವುದಿಲ್ಲ ಎಂಬುದನ್ನು ಸಮೀಕ್ಷೆ ತಿಳಿಸಿದೆ. ಸದ್ಯ ಬಿಜೆಪಿ ಸರ್ಕಾರವು 104 ಬಿಜೆಪಿ ಸದಸ್ಯರನ್ನು ಹೊಂದಿದೆ. 

ಕಾಂಗ್ರೆಸ್‌ನ 14 ಮತ್ತು ಜೆಡಿಎಸ್‌ನ ಮೂವರು ಶಾಸಕರು ಬಿಜೆಪಿಗೆ ಪಕ್ಷಾಂತರಗೊಂಡ ನಂತರ ಕೊರತೆಯಿದ್ದ 17 ಸ್ಥಾನವನ್ನು ತುಂಬಲಾಯಿತು. ಈ ಎಲ್ಲಾ 17 ಕ್ಷೇತ್ರಗಳಲ್ಲಿ ಬಿಜೆಪಿ ಪರವಾಗಿ ಯಾವುದೇ ದೊಡ್ಡ ಅಲೆ ಇಲ್ಲ ಎಂದು ಸಮೀಕ್ಷೆ ತಿಳಿಸಿದೆ.

8 ತಿಂಗಳ ಹಿಂದೆ ನಡೆಸಿದ್ದ ಸಮೀಕ್ಷೆಯಲ್ಲಿ ಬಿಜೆಪಿ 70 ಸ್ಥಾನಗಳಿಂದ 40 ಕ್ಕೆ ಇಳಿಯುತ್ತದೆ ಎಂದು ತಿಳಿಸಿತ್ತು, ಆದರೆ ಇತ್ತೀಚಿನ ಸಮೀಕ್ಷೆ ಪ್ರಕಾರ ಬಿಜೆಪಿ 104 ಸ್ಥಾನ ಗೆಲ್ಲಲು ಸಶಕ್ತವಾಗಿದೆ ಎಂದು ತಿಳಿಸಿದೆ.

ಹೀಗಾಗಿ ಪಕ್ಷದಲ್ಲಿ ಸಂಭ್ರಮಾಚರಣೆ ಮನೆ ಮಾಡಿದೆ. ರಾಜ್ಯದ ಪ್ರಮುಖ ಪ್ರತಿಪಕ್ಷವಾಗಿರುವ ಕಾಂಗ್ರೆಸ್ ಆಡಳಿತ ಪಕ್ಷದ ದೌರ್ಬಲ್ಯವನ್ನು ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಸಮೀಕ್ಷೆಯಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT