ರಾಜಕೀಯ

ಸಿಎಂ ಬೊಮ್ಮಾಯಿ ಜುಲೈ 25ರಿಂದ ಎರಡು ದಿನ ದೆಹಲಿ ಪ್ರವಾಸ: ಹೈಕಮಾಂಡ್ ಜೊತೆ ಸಂಪುಟ ವಿಸ್ತರಣೆ ಚರ್ಚೆ?

Sumana Upadhyaya

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು  ಇದೇ 25 ಮತ್ತು 26 ರಂದು ದೆಹಲಿ ಪ್ರವಾಸ ಕೈಗೊಂಡು, ಪಕ್ಷ ಸಂಘಟನೆ, ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಹಲವು ವಿಷಯಗಳ ಕುರಿತು ಪಕ್ಷದ ರಾಷ್ಟ್ರೀಯ ನಾಯಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ಈ ಕುರಿತು ನಿನ್ನೆ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ಅವರು, ಜುಲೈ 25ರಂದು ನೂತನ ರಾಷ್ಟ್ರಪತಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಹಲವು ಇಲಾಖೆಗಳ ನಿಯೋಗದೊಂದಿಗೆ ದೆಹಲಿಗೆ ಹೋಗುತ್ತೇನೆ. ಪಕ್ಷದ ನಾಯಕರು ವಿಚಾರವೆತ್ತಿದರೆ ಆ ಸಮಯದಲ್ಲಿ ಸಂಪುಟ ವಿಸ್ತರಣೆ ಕುರಿತು ಸಹ ಚರ್ಚಿಸುತ್ತೇನೆ ಎಂದರು.

ಕಸ್ತೂರಿರಂಗನ್ ವರದಿಯ ಕುರಿತು ಚರ್ಚೆ ನಡೆಸಲು ಸಹ ನಿಯೋಗವನ್ನು ಕರೆದೊಯ್ಯುವುದಾಗಿ ತಿಳಿಸಿದರು. ಮೊನ್ನೆ ಸೋಮವಾರ ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ಸಂಸತ್ತು ಮತ್ತು ಆಯಾ ರಾಜ್ಯ ವಿಧಾನಸಭೆಯಲ್ಲಿ ಜನಪ್ರತಿನಿಧಿಗಳು ನೂತನ ರಾಷ್ಟ್ರಪತಿಗಳ ಆಯ್ಕೆಗೆ ಮತದಾನ ಮಾಡಿದ್ದರು. ಸುಗಮವಾಗಿ ನಡೆದ ಪ್ರಕ್ರಿಯೆಯಲ್ಲಿ ಶೇಕಡಾ 98.91ರಷ್ಟು ಮತದಾನವಾಗಿತ್ತು. 

ಬಿಜೆಪಿ ನೇತೃತ್ವದ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಹಾಗೂ ವಿರೋಧ ಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹ ಮಧ್ಯೆ ಸ್ಪರ್ಧೆಯೇರ್ಪಟ್ಟಿದೆ. ದೇಶದ ಸಂಸದರು ಮತ್ತು ರಾಜ್ಯ ವಿಧಾನಸಭೆಯ ಶಾಸಕರು ಸೇರಿ ರಾಷ್ಟ್ರಪತಿಗಳನ್ನು ಆಯ್ಕೆ ಮಾಡುತ್ತಾರೆ.

SCROLL FOR NEXT