ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ಮಾಡಿ ಅಭಿನಂದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 
ರಾಜಕೀಯ

ಯಡಿಯೂರಪ್ಪ ನಿವೃತ್ತಿ ಪಡೆಯುವ ಪ್ರಶ್ನೆಯೇ ಇಲ್ಲ, ಮುಂದಿನ ಚುನಾವಣೆಯಲ್ಲಿ ಅವರ ಬಲ, ಮಾರ್ಗದರ್ಶನ ಇರುತ್ತದೆ: ಸಿಎಂ ಬೊಮ್ಮಾಯಿ

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ನಿನ್ನೆ ಆಷಾಢ ಶುಕ್ರವಾರದಂದು ಚುನಾವಣಾ ರಾಜಕೀಯಕ್ಕೆ ದಿಢೀರ್ ನಿವೃತ್ತಿ ಘೋಷಿಸಿ ತಾವು ಇಷ್ಟು ವರ್ಷಗಳ ಕಾಲ ಪ್ರತಿನಿಧಿಸಿಕೊಂಡು ಬರುತ್ತಿದ್ದ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಕ್ಷೇತ್ರದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪುತ್ರ ಬಿ ವೈವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂದು ಘೋಷಿಸಿದ್ದಾರೆ.

ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ನಿನ್ನೆ ಆಷಾಢ ಶುಕ್ರವಾರದಂದು ಚುನಾವಣಾ ರಾಜಕೀಯಕ್ಕೆ ದಿಢೀರ್ ನಿವೃತ್ತಿ ಘೋಷಿಸಿ ತಾವು ಇಷ್ಟು ವರ್ಷಗಳ ಕಾಲ ಪ್ರತಿನಿಧಿಸಿಕೊಂಡು ಬರುತ್ತಿದ್ದ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಕ್ಷೇತ್ರದಲ್ಲಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪುತ್ರ ಬಿ ವೈವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂದು ಘೋಷಿಸಿದ್ದಾರೆ.

ರಾಜ್ಯ ರಾಜಕೀಯದಲ್ಲಿ, ಬಿಜೆಪಿಯಲ್ಲಿ ಬಿಎಸ್ ವೈ ಅವರ ಈ ಹೇಳಿಕೆ ತಲ್ಲಣ ಮೂಡಿಸಿದೆ. ಮುಂದಿನ ಚುನಾವಣೆಯಲ್ಲಿ ಯಾವ ರೀತಿ ಪರಿಣಾಮ ಬೀರಬಹುದು, ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳಹುದು ಎಂಬ ವಿಚಾರಗಳು ಚರ್ಚೆಯಾಗುತ್ತಿದೆ. 

ಈ ಬಗ್ಗೆ ನಿನ್ನೆ ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಯಡಿಯೂರಪ್ಪನವರು ನಿರಂತರ ಪರಿಶ್ರಮದ ನಾಯಕ, ಅವರಿಗೆ ರಾಜಕೀಯ ಬಿಡುವು ಅನ್ನುವುದೇ ಇಲ್ಲ, ರಾಜಕೀಯದಲ್ಲಿ ನಿರಂತರವಾಗಿ ಬಿಎಸ್ ವೈ ಇರುತ್ತಾರೆ, ಹೋರಾಟವೇ ಅವರ ಬದುಕಿನ ಮೂಲಮಂತ್ರ ಎಂದಿದ್ದಾರೆ.

ಮುಂದಿನ ಚುನಾವಣೆಯಲ್ಲಿ ಯಡಿಯೂರಪ್ಪನವರ ಬಲ, ಮಾರ್ಗದರ್ಶನ ಇರಲಿದೆ ಯಡಿಯೂರಪ್ಪ ಅವರಿಗೆ ಸುಸ್ತಾಗಲಿ, ನಿವೃತ್ತಿಯಾಗಲಿ ಇಲ್ಲ. ಅವರು ನಿರಂತರ ಹೋರಾಟಗಾರರು. ಅವರು ಬಿಜೆಪಿ ಜತೆಗೆ ಸದಾ ಇದ್ದಾರೆ. ಅವರಿಗೆ ತಮ್ಮದೇ ಆದ ಮಹತ್ವವಿದ್ದು, ಪಕ್ಷದ ವರಿಷ್ಠರಿಗೂ ಅವರ ಮಹತ್ವದ ಅರಿವಿದೆ. ಕಳೆದ ಬಾರಿ ಅವರನ್ನು ಭೇಟಿ ಮಾಡಿದ್ದ ಸಂದರ್ಭದಲ್ಲಿ ಈ ಬಗ್ಗೆ ಏನೂ ಚರ್ಚಿಸಿಲ್ಲ. ಮುಂದಿನ ಬಾರಿ ಭೇಟಿಯಾದಾಗ ಚರ್ಚಿಸಲಾಗುವುದು ಎಂದರು.

ರಾಷ್ಟ್ರಪತಿ ಭೇಟಿ: ದೆಹಲಿ ಭೇಟಿ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ಅವರು ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಸಾಂಪ್ರದಾಯಿಕವಾಗಿ ಸನ್ಮಾನಿಸಿದ್ದಾರೆ. ಮೈಸೂರು ಪೇಟ ತೊಡಿಸಿ ಶಾಲು ಹೊದಿಸಿ ಸನ್ಮಾನಿಸಿದರು. ಸ್ವಾಮಿ ವಿವೇಕಾನಂದರ ಪುಸ್ತಕವನ್ನು ನೀಡಿದರು. 

ಇಂದು ಬೆಂಗಳೂರಿಗೆ ಪಯಣ: ಯಾವುದೇ ಪ್ರಮುಖ ಕಾರ್ಯಕ್ರಮಗಳಿಲ್ಲದೆ ರಾಷ್ಟ್ರಪತಿಗಳನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದ ಮುಖ್ಯಮಂತ್ರಿಗಳು ಇಂದು ಬೆಳಗ್ಗೆ 8.10ರ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸಿದ್ದು 10.15ರ ಸುಮಾರಿಗೆ ಬೆಂಗಳೂರು ತಲುಪಲಿದ್ದಾರೆ. ನಾಡಿದ್ದು 25ರಂದು ಮತ್ತೆ ದೆಹಲಿಗೆ ಸಿಎಂ ತೆರಳಲಿದ್ದು ನೂತನ ರಾಷ್ಟ್ರಪತಿಗಳ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 

ಸಿಎಂ ಸ್ಥಾನ ಕಳೆದುಕೊಂಡ ಬಳಿಕ ಬಿ.ಎಸ್‌. ಯಡಿಯೂರಪ್ಪ ಅವರು ರಾಜ್ಯ ರಾಜಕೀಯದಲ್ಲಿ ಸೈಲೆಂಟ್ ಆಗಿದ್ದರು. ಇದೀಗ ಪುತ್ರನ ರಾಜಕೀಯ ಭವಿಷ್ಯ ಭದ್ರಗೊಳಿಸುವ ನಿಟ್ಟಿನಲ್ಲಿ ತಮ್ಮ ಕ್ಷೇತ್ರವನ್ನೇ ಬಿಟ್ಟುಕೊಟ್ಟಿದ್ದಾರೆ. ಶಿಕಾರಿಪುರಕ್ಕೆ ಪುತ್ರ ವಿಜಯೇಂದ್ರ ಅವರನ್ನು ಉತ್ತರಾಧಿಕಾರಿಯಾಗಿ ಘೋಷಣೆ ಮಾಡಿದ್ದಾರೆ. ಈ ಮೂಲಕ ತಾವು ಚುನಾವಣಾ ರಾಜಕಾರಣದಿಂದ ನಿವೃತ್ತಿ ಪಡೆದುಕೊಂಡಿದ್ದಾರೆ. ಹೈಕಮಾಂಡ್ ಇದಕ್ಕೆ ಯಾವ ರೀತಿ ಪ್ರತಿಕ್ರಿಯಿಸುತ್ತದೆ. ಏನು ತೀರ್ಮಾನ ತೆಗೆದುಕೊಳ್ಳುತ್ತದೆ. ರಾಜ್ಯ ಬಿಜೆಪಿಯಲ್ಲಿ ಚುನಾವಣೆಗೆ ಮುನ್ನ ಏನು ಬದಲಾವಣೆ ಆಗಲಿದೆ ಎಂಬುದು ಇಲ್ಲಿ ಮುಖ್ಯವಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT