ರಾಜಕೀಯ

ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಹೈಕಮಾಂಡ್ ನಿರ್ಧಾರ: ಚುನಾವಣೆಗೆ ಮುನ್ನವೇ ನಾನೇ ಸಿಎಂ ಎನ್ನುವುದು ಸರಿಯಲ್ಲ!

Shilpa D

ಮೈಸೂರು: ವಿಧಾನಸಭೆ ಚುನಾವಣೆಗೆ ಮುನ್ನವೇ ನಾನು ಮುಖ್ಯಮಂತ್ರಿ, ನಾನೇ ಮುಖ್ಯಮಂತ್ರಿ ಎಂದು ಹೇಳಿಕೊಂಡು ಓಡಾಡುವುದು ಸರಿಯಲ್ಲ' ಎಂದು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಮೈಸೂರಿನಲ್ಲಿ ಮಾತನಾಡಿದ ಅವರು, 'ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಮೈಸೂರಿನಲ್ಲೋ, ಬೆಂಗಳೂರಿನಲ್ಲೋ ಅಥವಾ ಕಲಬುರಗಿಯಲ್ಲೋ ತೀರ್ಮಾನ ಆಗುವುದಿಲ್ಲ. ಪಕ್ಷದ ಹೈಕಮಾಂಡ್ ಅದನ್ನು ತೀರ್ಮಾನ ಮಾಡುತ್ತದೆ. ಅವತ್ತಿನ ರಾಜಕೀಯ ಪರಿಸ್ಥಿತಿಯ ಆಧಾರದ ಮೇಲೆ ಯಾರಿಗೆ ನಾಯಕತ್ವ ಕೊಡಬೇಕು ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ' ಎಂದು ತಿಳಿಸಿದರು.

'ಕಾಂಗ್ರೆಸ್ ಯಾವಾಗಲೂ ಸಾಮೂಹಿಕ ನಾಯಕತ್ವದಲ್ಲೇ ಚುನಾವಣೆಗೆ ಹೋಗುತ್ತದೆ. ಈ ಬಾರಿ, ಆ ಬಾರಿ ಅಂತೇನಿಲ್ಲ. ನಮ್ಮದು ಯಾವಾಗಲೂ ಸಾಮೂಹಿಕ‌ ನಾಯಕತ್ವದಲ್ಲಿಯೇ ನಡೆಯುತ್ತದೆ' ಎಂದರು. 'ಮೊದಲು ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಅದೇ ನಮ್ಮ ಉದ್ದೇಶ' ಎಂದು ತಿಳಿಸಿದರು. 'ರಾಜ್ಯ ರಾಜಕಾರಣಕ್ಕೆ ಮರಳುವಿರಾ' ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ನೀವೆಲ್ಲ ಅವಕಾಶ ಕೊಟ್ಟರೆ ಬರುತ್ತೇನೆ. ಎಲ್ಲ ಸೇರಿ ಅವಕಾಶ ಕೊಟ್ಟರೆ ನೋಡೋಣ' ಎಂದರು.

SCROLL FOR NEXT