ಜಮೀರ್ ಗೆ ಬೆನ್ನುತಟ್ಟುತ್ತಿರುವ ವಿರಕ್ತಮಠ ಸ್ವಾಮೀಜಿ 
ರಾಜಕೀಯ

ಜಮೀರ್ ಅಹ್ಮದ್ ಮುಂದೊಂದು ದಿನ ರಾಜ್ಯದ ಸಿಎಂ ಆಗಬೇಕು: ವಿರಕ್ತಮಠ ಸ್ವಾಮೀಜಿ

ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿ ಬಡಿದಾಟ ಜೋರಾಗಿರುವಾಗಲೇ ವಿರಕ್ತಮಠದ ಪಂಚಾಕ್ಷರಿ ಸ್ವಾಮಿಗಳು ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ. ಜಮೀರ್ ಅಹ್ಮದ್ ಖಾನ್ ಅವರು ಜಾತಿ ಧರ್ಮ ನೋಡದೇ ಸರ್ವಧರ್ಮೀಯರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ. ಮುಂಬರುವ ದಿನಗಳಲ್ಲಿ ಸಿಎಂ ಆಗುತ್ತಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬೆಳಗಾವಿ: ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿ ಬಡಿದಾಟ ಜೋರಾಗಿರುವಾಗಲೇ ವಿರಕ್ತಮಠದ ಪಂಚಾಕ್ಷರಿ ಸ್ವಾಮಿಗಳು ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ. ಜಮೀರ್ ಅಹ್ಮದ್ ಖಾನ್ ಅವರು ಜಾತಿ ಧರ್ಮ ನೋಡದೇ ಸರ್ವಧರ್ಮೀಯರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ. ಮುಂಬರುವ ದಿನಗಳಲ್ಲಿ ಸಿಎಂ ಆಗುತ್ತಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಬೈಲಹೊಂಗಲ ಮತಕ್ಷೇತ್ರದ ಯಕ್ಕುಂಡಿ ಗ್ರಾಮದ ದೀಲಾವರ್ ದರ್ಗಾದಲ್ಲಿ ನಿನ್ನೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಕ್ಕುಂಡಿ ಗ್ರಾಮದ ದರ್ಗಾ ಹಿಂದೂ-ಮುಸ್ಲಿಂ ಭಾವೈಕ್ಯತೆ ಸಂಕೇತವಾಗಿದ್ದು, ಶಂಕರ ಪಾಟೀಲ್ ಅವರಿಂದ ದರ್ಗಾ ಅಭಿವೃದ್ಧಿಯಾಗಿದೆ. ಬೆಂಗಳೂರಿನಿಂದ ದರ್ಗಾಕ್ಕೆ ಮಾಜಿ ಸಚಿವರು ಜಮೀರ್ ಅಹ್ಮದ್‍ಖಾನ್ ಬಂದಿದ್ದಾರೆ. ಹಾಗಿರುವಾಗ ಇದರ ಶಕ್ತಿ ಎಷ್ಟಿದೆ ಎಂದು ಊಹಿಸಿಕೊಳ್ಳಿ ಎಂದಿದ್ದಾರೆ. 

ಜಮೀರ್ ಮುಂದೆ ಸಿಎಂ ಆಗುತ್ತಾರೆ: ಜಮೀರ್ ಅಹ್ಮದ್‍ಖಾನ್ ಅವರು ಮುಂದೆ ಸಿಎಂ ಆಗುತ್ತಾರೆ. ಜಮೀರ್ ಅಹ್ಮದ್ ಖಾನ್ ಅವರು ಜಾತಿ ಧರ್ಮ ನೋಡದೇ ಸರ್ವಧರ್ಮೀಯರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ. ಸಮಾಜಸೇವೆ ಮಾಡುತ್ತಾ ಬಂದಿದ್ದಾರೆ. ಇವರು ಮತ್ತೊಮ್ಮೆ ಮಂತ್ರಿಗಳಾಗಿ, ಮಠಕ್ಕೆ ಬರಬೇಕು. ಅಷ್ಟೇ ಅಲ್ಲದೇ ಇಂತಹ ಒಳ್ಳೆಯ ಮನಸ್ಸಿನ ಜಮೀರ್ ಅವರು, ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿಗಳಾಗಬೇಕು ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ