ಅರುಣ್ ಸಿಂಗ್ ಜೊತೆ ನಾಸೀರ್ ಅಹ್ಮದ್ 
ರಾಜಕೀಯ

ವಿಧಾನ ಪರಿಷತ್ ಚುನಾವಣೆ: ಬಿಜೆಪಿ ಟಿಕೆಟ್ ಗಾಗಿ ನಾಸೀರ್ ಅಹ್ಮದ್ ತೀವ್ರ ಲಾಬಿ!

ಮುಂದಿನ ತಿಂಗಳು  ವಿಧಾನ ಪರಿಷತ್ ನ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ದಾವಣಗೆರೆಯಿಂದ ಡಾ. ಸಿ. ಆರ್. ನಾಸೀರ್ ಅಹಮದ್ ಟಿಕೆಟ್ ಗಾಗಿ ತೀವ್ರ ಪ್ರಯತ್ನ ನಡೆಸುತ್ತಿದ್ದಾರೆ.

ದಾವಣಗೆರೆ: ಮುಂದಿನ ತಿಂಗಳು  ವಿಧಾನ ಪರಿಷತ್ ನ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ದಾವಣಗೆರೆಯಿಂದ ಡಾ. ಸಿ.ಆರ್. ನಾಸೀರ್ ಅಹಮದ್ ಟಿಕೆಟ್ ಗಾಗಿ ತೀವ್ರ ಪ್ರಯತ್ನ ನಡೆಸುತ್ತಿದ್ದಾರೆ.

ನಾಸೀರ್ ಅಹ್ಮದ್ ಗೆ ಟಿಕೆಟ್ ನೀಡುವಂತೆ  ಸಂಸದ ಡಾ.ಜಿ.ಎಂ.ಸಿದ್ದೇಶ್ವರ, ಶಾಸಕ ಎಸ್.ಎ.ರವೀಂದ್ರನಾಥ್, ಕರಾವಳಿ ಭಾಗದ ಸ್ವಾಮೀಜಿಗಳು ಹಾಗೂ ಕೇಂದ್ರ ಮತ್ತು ರಾಜ್ಯದ ಇತರ ಭಾಗಗಳ ಮುಖಂಡರು ಶಿಫಾರಸ್ಸು ಮಾಡಿದ್ದಾರೆ.

ಪ್ರಮುಖ ಮಠಾಧೀಶರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪಕ್ಷದ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ಅವರಿಗೆ ಪತ್ರ ಬರೆದಿದ್ದು, ಯೋಜನಾ ಆಯೋಗದ ಸದಸ್ಯರಾಗಿರುವ ಡಾ.ಸಿ.ಆರ್.ನಾಸೀರ್ ಅಹಮದ್ ಅವರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ.

"ನಾನು 2010 ರಿಂದ 2013 ರವರೆಗೆ ಮತ್ತು 2016 ರಿಂದ ಇಲ್ಲಿಯವರೆಗೆ ಯೋಜನಾ ಆಯೋಗದ ಸದಸ್ಯನಾಗಿದ್ದೇನೆ. ಆಯ್ಕೆಯಾದರೆ, ಅಲ್ಪಸಂಖ್ಯಾತರು ಕೂಡ ಭವಿಷ್ಯದಲ್ಲಿ ಪಕ್ಷದ ಮೇಲೆ ನಂಬಿಕೆ ಇಡುತ್ತಾರೆ ಎಂದು ನಾಸೀರ್ ಅಹ್ಮದ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ. ಬಿಜೆಪಿ  ಪ್ರಧಾನ ಕಾರ್ಯದರ್ಶಿ ಸಂತೋಷ್ ಮತ್ತು ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿ ತಮಗೆ ಟಿಕೆಟ್ ನೀಡುವಂತೆ ಮನವಿ ಮಾಡಿರುವುದಾಗಿ ನಾಸೀರ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ